ಕನ್ನಡಪ್ರಭ ವಾರ್ತೆ ಮುಧೋಳ
ನಗರದ ಬಿಜೆಪಿ ಕಾರ್ಯಾಲಯದಲ್ಲಿ ತಾಲೂಕಿನ ಮಾಚಕನೂರ ಗ್ರಾಮದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ನೂತನ ಅಧ್ಯಕ್ಷ, ಉಪಾಧ್ಯಕ್ಷ ಹಾಗೂ ನಿರ್ದೇಶಕರನ್ನು ಸನ್ಮಾನಿಸಿ ಮಾತನಾಡಿ, ಪ್ರತಿಯೊಂದು ಚುನಾವಣೆಯಲ್ಲಿ ಎಲ್ಲರೂ ಒಗ್ಗಟ್ಟಿನಿಂದ ಕೆಲಸ ಮಾಡಿದಾಗ ಮಾತ್ರ ಗೆಲುವು ಪಡೆಯಲು ಸಾಧ್ಯ. ಈ ಚುನಾವಣೆಯಲ್ಲಿ ಗ್ರಾಮದ ಹಿರಿಯರು, ಯುವಕರು ಒಟ್ಟಾಗಿ ಕೆಲಸ ಮಾಡಿದ್ದರಿಂದ ಸಹಕಾರಿಯ 11ರಲ್ಲಿ 10 ಸ್ಥಾನ ಗೆಲ್ಲಲು ಸಾಧ್ಯವಾಯಿತು ಎಂದರು.
ಬಿಜೆಪಿ ಗ್ರಾಮೀಣ ಅಧ್ಯಕ್ಷ ಸಂಗನಗೌಡ ಕಾತರಕಿ ಮಾತನಾಡಿ, ಮತಕ್ಷೇತ್ರದ ಪ್ರತಿ ಗ್ರಾಮದಲ್ಲಿ ಬಿಜೆಪಿ ನಿಷ್ಠಾವಂತ ಮುಖಂಡರು ಹಾಗೂ ಕಾರ್ಯಕರ್ತರು ಗಟ್ಟಿಯಾಗಿ ಪಕ್ಷದ ಕೆಲಸ ಮಾಡಲು ಹುಮ್ಮಸ್ಸಿನಿಂದ ಪ್ರತಿ ಚುನಾವಣೆಯಲ್ಲೂ ಮತದಾರರ ಮನೆಬಾಗಿಲಿಗೆ ಹೋಗಿ ಸಂಸದ ಗೋವಿಂದ ಕಾರಜೋಳ ಅವರು ಕ್ಷೇತ್ರದಲ್ಲಿ ಮಾಡಿದ ಸಾಕಷ್ಟು ಅಭಿವೃದ್ಧಿ ಕೆಲಸ ಕಾರ್ಯಗಳನ್ನು ಜನರಿಗೆ ತಲುಪಿಸಿದ್ದಾರೆ. ಎಲ್ಲರೂ ಮುಂದೆ ಬರುವ ಪ್ರತಿ ಚುನಾವಣೆಗಳನ್ನು ಹೀಗೆಯೇ ಒಗ್ಗಟ್ಟಿನಿಂದ ಶ್ರಮಸಿ ನಮ್ಮ ನಾಯಕರ ಕೈ ಬಲಪಡಿಸೋಣ ಎಂದು ಹೇಳಿದರು.ಜಿಪಂ ಮಾಜಿ ಸದಸ್ಯ ಭೀಮನಗೌಡ ಪಾಟೀಲ, ದುಂಡಪ್ಪ ದಾಸರಡ್ಡಿ, ರಮೇಶಗೌಡ ಪಾಟೀಲ, ಗೋಪಾಲ ದಾಸರಡ್ಡಿ ಇತರರು ಮಾತನಾಡಿದರು.