ಕನ್ನಡಪ್ರಭ ವಾರ್ತೆ ನಾಪೋಕ್ಲು
ಕೊಡಗು ಜಿಲ್ಲಾಡಳಿತ ಹಾಗೂ ಹೊದ್ದೂರು ಗ್ರಾ. ಪಂ. ಸಹಯೋಗದಲ್ಲಿ ಬುಧವಾರ ಕಡಬಗೇರಿಯಲ್ಲಿ ನಡೆದ ಹಕ್ಕು ಪತ್ರ ವಿತರಣೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಮಂತರ್ ಗೌಡ ರವರು ಒಟ್ಟು 60 ಅರ್ಹ ಮತ್ತು ಆಯ್ದ ಫಲಾನುಭವಿಗಳನ್ನು ಗುರುತಿಸಿ ನಿವೇಶನ ನೀಡಲಾಗಿದ್ದು ಸದ್ಯದಲ್ಲಿ ಮನೆ ನಿರ್ಮಿಸಿಕೊಡುವುದಾಗಿ ಭರವಸೆ ನೀಡಿ ಯಾರು ಕೂಡ ನಿವೇಶನವನ್ನು ಇತರರಿಗೆ ಮಾರಾಟ ಮಾಡಬಾರದು. ಮಾರಾಟ ಮಾಡಿದಲ್ಲಿ ಕಾನೂನು ರೀತಿ ಕ್ರಮ ಜರುಗಿಸಲಾಗುವುದು ಎಂದು ಎಚ್ಚರಿಸಿದರು.
ನೂತನ ಬಡಾವಣೆಗೆ ಡಾ ಮಂತರ್ ಗೌಡ ಬಡಾವಣೆ ಎಂದು ನಾಮಕರಣ ಮಾಡಲು ಫಲಾನುಭವಿಗಳು ಕೋರಿಕೆಯನ್ನು ಡಾ ಮಂತರ್ ಗೌಡ ನಯವಾಗಿ ನಿರಾಕರಿಸಿದ್ದು ಬದಲಿಗೆ ಬಾಬಾ ಸಾಹೇಬ್ ಡಾ ಬಿ.ಆರ್.ಅಂಬೇಡ್ಕರ್ ಬಡಾವಣೆ ಎಂದು ನಾಮಕರಣ ಮಾಡುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.ಭಾರತ ರತ್ನ ಬಿ.ಆರ್.ಅಂಬೇಡ್ಕರ್ ರವರು ನಾವೆಲ್ಲ ಹತ್ತು ಜನ್ಮ ಎತ್ತಿದರೂ ಸಾಧಿಸಲು ಸಾಧ್ಯವಾಗದಂತಹ ಮಹಾನ್ ಸಾಧನೆಯನ್ನು ಈ ದೇಶದ ಜನತೆಗಾಗಿ ಮಾಡಿದ್ದಾರೆ. ಅಂತಹ ಮಹಾನ್ ವ್ಯಕ್ತಿಯ ಹೆಸರನ್ನು ಬಡಾವಣೆಗೆ ನಾಮಕರಣ ಮಾಡುವುದು ಒಳಿತು ಎಂದು ಡಾ ಮಂತರ್ ಗೌಡ ವಿವರಿಸಿದರು.
ಹೊದ್ದೂರು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಹೆಚ್.ಎ.ಹಂಸ ಅವರು, ಡಾ ಮಂತರ್ ಗೌಡ ರವರು ಶಾಸಕರಾಗಿ ಆಯ್ಕೆಗೊಂಡ ಎರಡೂವರೆ ವರ್ಷದಲ್ಲಿ 9 ಕೋಟಿ ರು. ಗಳಿಗೂ ಹೆಚ್ಚಿನ ಅನುದಾನವನ್ನು ಪಂಚಾಯತ್ ವ್ಯಾಪ್ತಿಯ ಗ್ರಾಮಗಳ ಅಭಿವೃದ್ಧಿ ಗೆ ನೀಡಿದನ್ನು ವಿವರಿಸಿದರು.
ಪ್ರಾಸ್ತಾವಿಕ ವಾಗಿ ಮಾತನಾಡಿದ ಗ್ರಾಮ ಪಂಚಾಯತ್ ಸದಸ್ಯರಾದ ಪಾಲೆಮಾಡು ಮೊಣ್ಣಪ್ಪ ನವರು ಚುನಾವಣೆ ಸಂದರ್ಭದಲ್ಲಿ ಹಕ್ಕುಪತ್ರ ನೀಡುವ ಭರವಸೆಯನ್ನು ಡಾ ಮಂತರ್ ಗೌಡ ರವರ ಮುಂದೆ ಇಟ್ಟಿದ್ದು ನೀಡಿದ ಭರವಸೆ ಈಡೇರಿಸುವ ಮೂಲಕ ನುಡಿದಂತೆ ನಡೆದಿದ್ದಾರೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.
ಮಂದ್ರಿರ ಮೋಹನ್ ದಾಸ್, ಅಲ್ಪ ಸಂಖ್ಯಾತ ಘಟಕದ ಜಿಲ್ಲಾಧ್ಯಕ್ಷರಾದ ಹನೀಫ್, ಹೊದ್ದೂರು ಗ್ರಾಮ ಪಂಚಾಯತ್ ಪಿ.ಡಿ.ಒ ವತ್ಸಲಾ ಕುಮಾರಿ, ಹೊಸ್ಕೇರಿ ಪಿ.ಡಿ.ಒ
ಕುಸುಮಾವತಿ , ಲಕ್ಷ್ಮೀ, ಅನುರಾಧ , ಕಡ್ಲೆರ ಟೈನಿ , ಮೊಯ್ದು, ಕೆ.ಆರ್, ಅನಿತಾ ಸೇರಿದಂತೆ ಕಂದಾಯ ಅಧಿಕಾರಿಗಳು, ಪಂಚಾಯಿತಿ ಸಿಬ್ಬಂದಿ, ಫಲಾನುಭವಿ