- ಮುಕ್ತನೇನಹಳ್ಳಿಯಲ್ಲಿ ಮತಯಾಚಿಸಿ ಕಾಂಗ್ರೆಸ್ ಅಭ್ಯರ್ಥಿ ಡಾ.ಪ್ರಭಾ ಭರವಸೆ - - - ಕನ್ನಡ ಪ್ರಭ ವಾರ್ತೆ ಹೊನ್ನಾಳಿ
ಗೆದ್ದ ತಕ್ಷಣ ಮನೆಯಲ್ಲಿ ಕೂರದೇ ಪ್ರತಿ ಗ್ರಾಮಗಳ ಸಮಸ್ಯೆಗಳನ್ನು ಪಟ್ಟಿ ಮಾಡಿಕೊಂಡು, ಸರ್ಕಾರದ ಹಂತದಲ್ಲಿ ಬಗೆಹರಿಸುವ ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ. ಈಗಲೂ ನಮ್ಮ ಕುಟುಂಬ ಸಮಾಜಮುಖಿ ಕಾರ್ಯಕ್ರಮಗಳನ್ನು ನಡೆಸಿಕೊಂಡು ಬರುತ್ತಿದೆ. ಜಿಲ್ಲೆ ಅಭಿವೃದ್ಧಿಯಲ್ಲಿ ನಾಗಾಲೋಟದಲ್ಲಿ ಹೋಗುವಂತೆ ನೋಡಿಕೊಳ್ಳುತ್ತೇನೆ. ಜನಸೇವೆಗೆ ಅವಕಾಶ ಕೊಡಿ ಎಂದು ದಾವಣಗೆರೆ ಲೋಕಸಭಾ ಕ್ಷೇತ್ರ ಕಾಂಗ್ರೆಸ್ ಅಭ್ಯರ್ಥಿ ಡಾ.ಪ್ರಭಾ ಮಲ್ಲಿಕಾರ್ಜುನ್ ಹೇಳಿದರು.ತಾಲೂಕಿನ ಮುಕ್ತನೇನಹಳ್ಳಿಯಲ್ಲಿ ಗುರುವಾರ ಪ್ರಚಾರ ಪ್ರಾರಂಭಿಸಿ, ಕೆಂಗಲಹಳ್ಳಿ, ಕೂಲಂಬಿ, ಕುಂದುರು ಹಾಗೂ ಇನ್ನಿತರ ಗ್ರಾಮಗಳಲ್ಲಿ ತಮ್ಮನ್ನು ಬೆಂಬಲಿಸುವಂತೆ ಮಾತಯಾಚಿಸಿ ಅವರು ಮಾತನಾಡಿದರು.
ನಮ್ಮ ಸರ್ಕಾರ ಇದೆ. ಜಿಲ್ಲೆಯಲ್ಲಿ ನಮ್ಮ ಉಸ್ತುವಾರಿ ಸಚಿವರಿದ್ದಾರೆ. ಅಲ್ಲದೇ ಜಿಲ್ಲೆಯಲ್ಲಿ ಬಹುತೇಕ ನಮ್ಮ ಪಕ್ಷದ ಶಾಸಕರಿದ್ದಾರೆ. ಹಾಗಾಗಿ ಅಭಿವೃದ್ಧಿಗೆ ಸಮಸ್ಯೆ ಆಗುವುದಿಲ್ಲ. ಮಧ್ಯಮ ವರ್ಗದ ಕಡುಬಡತನ ಕುಟುಂಬದವರು ಇಂದು 5 ಗ್ಯಾರಂಟಿ ಯೋಜನೆಗಳಿಂದ ಸಂತುಷ್ಟರಾಗಿದ್ದಾರೆ. ನಮ್ಮ ಸರ್ಕಾರ ಬಂದ ತಕ್ಷಣ ಎಲ್ಲ ಐದು ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದಿರುವ ಏಕೈಕ ಸರ್ಕಾರ ನಮ್ಮದು. ಈಗಲೂ ನಮ್ಮ ಪಕ್ಷ ಕೇಂದ್ರದಲ್ಲಿ ಅಧಿಕಾರಕ್ಕೆ ಬಂದ ತಕ್ಷಣ ಈಗ ನೀಡುವ ಎಲ್ಲ ಭರವಸೆಗಳನ್ನು ಈಡೇರಿಸುತ್ತೇವೆ ಎಂದರು.ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಎಚ್.ಬಿ.ಮಂಜಪ್ಪ ಮಾತನಾಡಿ, ನಾವು ಕೊಟ್ಟ ಗ್ಯಾರಂಟಿ ಯೋಜನೆಗಳಿಂದ ಬಡವರ ಬದುಕು ಸುಸ್ಥಿತಿಯಲ್ಲಿದೆ. ಇಡೀ ದೇಶ ಸುಸ್ಥಿಯಲ್ಲಿದೆ. ಜಿಲ್ಲೆಯಲ್ಲಿ ಪಕ್ಷದ ಸಂಸದರು ಆಯ್ಕೆಯಾದರೆ ಅಭಿವೃದ್ಧಿಗೆ ಮತ್ತಷ್ಟು ವೇಗ ಸಿಗಲಿದೆ ಎಂದರು,
ಬಿಜೆಪಿ ಜಾತಿ ಜಾತಿಗಳ ನಡುವೆ ವಿಷಬೀಜ ಬಿತ್ತಿ, ಕಲಹ ಸೃಷ್ಟಿಸಿ, ಸಮಾಜದಲ್ಲಿ ಅಶಾಂತಿಗೆ ಕಾರಣರಾಗಿದ್ದಾರೆ. ಮುಖ್ಯವಾಗಿ ಅವರ ಅಧಿಕಾರದ ಅವಧಿಯಲ್ಲಿ ಭ್ರಷ್ಟಾಚಾರ ತಾಂಡವಾಡುತಿತ್ತು. ಹಾಗಾಗಿ, ಕಳೆದ ವಿಧಾನಸಭಾ ಚುನಾವಣೆಯಲ್ಲಿ ಅವರನ್ನು ಮನೆಗೆ ಕಳುಹಿಸಿದ್ದಾರೆ. ಈಗ ಕೇಂದ್ರ ಸರ್ಕಾರದ ಸರದಿ ಅವರನ್ನು ಮನೆಗೆ ಕಳುಹಿಸುವ ಸಂದರ್ಭ ಬಂದಿದೆ. ದಯಮಾಡಿ ಕಾಂಗ್ರೆಸ್‍ಗೆ ಮತ ನೀಡಿ, ಬಿಜೆಪಿಗೆ ತಕ್ಕಪಾಠ ಕಲಿಸಿ ಎಂದು ಮನವಿ ಮಾಡಿದರು.ಕಾಂಗ್ರೆಸ್ ಮುಖಂಡರಾದ ಬಿ.ಸಿದ್ದಪ್ಪ, ಎಚ್.ಬಿ. ಶಿವಯೋಗಿ, ಡಾ. ಈಶ್ವರ ನಾಯ್ಕ್, ಎಚ್.ಎ. ಉಮಾಪತಿ, ಆರ್,ನಾಗಪ್ಪ, ಡಿ.ಜಿ.ವಿಶ್ವನಾಥ್, ಕೆಂಗಲಹಳ್ಳಿ ಷಣ್ಮುಖಪ್ಪ, ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಪುಷ್ಪಾ ರವೀಶ್ ಇತರರು ಇದ್ದರು.
- - -ಬಾಕ್ಸ್ 25 ಸಾವಿರ ಮತಗಳ ಲೀಡ್ ಶಾಸಕ ಡಿ.ಜಿ.ಶಾಂತನಗೌಡ ಮಾತನಾಡಿ, ಕಳೆದ 8 ತಿಂಗಳ ಹಿಂದೆ ಅಧಿಕಾರಕ್ಕೆ ಕಾಂಗ್ರೆಸ್ ಸರ್ಕಾರ ನುಡಿದಂತೆ ನಡೆದು ಎಲ್ಲ ಗ್ಯಾರಂಟಿ ಯೋಜನೆಗಳನ್ನು ನೀಡಿದ್ದೇವೆ. ಅಲ್ಲದೇ, ಈ ಬಾರಿ ವಿಶೇಷವಾಗಿ ಮೋದಿ ಮೋದಿ ಎನ್ನುತ್ತಿದ್ದ ಯುವಜನರೂ ಈಗ ಕಾಂಗ್ರೆಸ್ ಕಾಂಗ್ರೆಸ್ ಅನ್ನುತ್ತಿದ್ದಾರೆ. ಈ ಬಾರಿ ಪಕ್ಷದ ಅಭ್ಯರ್ಥಿ ಹೊನ್ನಾಳಿಯಲ್ಲಿ 25 ಸಾವಿರಕ್ಕೂ ಹೆಚ್ಚು ಲೀಡ್ ಪಡೆಯಲಿದ್ದಾರೆ. ಅಲ್ಲದೇ, ಇಡೀ ಜಿಲ್ಲೆಯಲ್ಲಿ 2 ಲಕ್ಷಕ್ಕೂ ಅಧಿಕ ಮತಗಳಿಂದು ಭರ್ಜರಿ ಜಯಗಳಿಸಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
- - - -11ಎಚ್.ಎಲ್.ಐ3:ಹೊನ್ನಾಳಿ ತಾಲೂಕಿನ ಮುಕ್ತನೇನಹಳ್ಳಿಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪ್ರಭಾ ಮಲ್ಲಿಕಾರ್ಜುನ್ ಮತಯಾಚನೆ ಮಾಡಿದರು. ಶಾಸಕ ಡಿ.ಜಿ.ಶಾಂತನಗೌಡ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಎಚ್.ಬಿ.ಮಂಜಪ್ಪ ಇತರರು ಇದ್ದರು.