- ಸರ್ಕಾರಿ ಬಾಲಿಕಾ ಪ್ರೌಢಶಾಲೆಯಲ್ಲಿ ವಿಜ್ಞಾನ ವಸ್ತು ಪ್ರದರ್ಶನ - - - ಚನ್ನಗಿರಿ: ಭಾರತೀಯ ವಿಜ್ಞಾನವು ಚಂದ್ರನ ಮೇಲೆ ಅನ್ವೇಷಣೆ ನಡೆಸಿ ಯಶಸ್ವಿಯನ್ನು ಕಂಡಿರುವುದು ದೇಶದ ಹೆಮ್ಮೆಯ ವಿಷಯವಾಗಿದೆ. ಈ ನಿಟ್ಟಿನಲ್ಲಿ ವಿದ್ಯಾರ್ಥಿ ದೆಸೆಯಲ್ಲಿಯೇ ಮಕ್ಕಳು ಇಂಥ ವೈಜ್ಞಾನಿಕ ಮನೋಭಾವನೆ ಬೆಳೆಸಿಕೊಂಡು, ದೇಶದ ಪ್ರಗತಿಗೆ ಸಹಕಾರಿಯಾಗಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಲ್.ಜಯಪ್ಪ ಹೇಳಿದರು.
ವಸ್ತು ಪ್ರದರ್ಶನ ಹಿನ್ನೆಲೆ ಶಾಲೆ ವಿದ್ಯಾರ್ಥಿಗಳು ವಿಜ್ಞಾನ ವಿಷಯಕ್ಕೆ ಸಂಬಂಧಪಟ್ಟಂತೆ ವಿವಿಧ ಅಕೃತಿಗಳನ್ನು ತಯಾರು ಮಾಡಿಕೊಂಡು ವಸ್ತು ಪ್ರದರ್ಶನ ವೀಕ್ಷಣೆಗೆ ಬರುತ್ತಿದ್ದ ವಿದ್ಯಾರ್ಥಿಗಳಿಗೆ, ಪೋಷಕರಿಗೆ ಮಾಹಿತಿ ನೀಡಿ, ಪ್ರತಿಭೆ ಮೆರೆದರು.
ವಸ್ತು ಪ್ರದರ್ಶನದ ತೀರ್ಪುಗಾರರಾಗಿ ವಿಜ್ಞಾನ ಶಿಕ್ಷಕರಾದ ಕೃಷ್ಣಮೂರ್ತಿ, ಶಶಿಧರ್ ಪಾಲ್ಗೊಂಡರು. ಸಮಾರಂಭದ ಅಧ್ಯಕ್ಷತೆಯನ್ನು ಶಾಲಾ ಮುಖ್ಯ ಶಿಕ್ಷಕ ಎಚ್.ಎಂ. ಬಸವರಾಜಪ್ಪ ವಹಿಸಿದ್ದರು.ಮುಖ್ಯ ಅತಿಥಿಗಳಾಗಿ ಶಿವಮೊಗ್ಗದ ಕುವೆಂಪು ಶತಮಾನೋತ್ಸವ ಶಿಕ್ಷಣ ಮಹಾವಿದ್ಯಾಲಯದ ಪ್ರಾಚಾರ್ಯ ಡಾ. ಜಿ.ಮಧು, ಕ್ಷೇತ್ರ ಸಮನ್ವಯಾಧಿಕಾರಿ ಡಾ.ಎಸ್.ಶಂಕರಪ್ಪ, ಜಿಲ್ಲಾ ಅಕ್ಷರ ದಾಸೋಹದ ನಿರ್ದೇಶಕ ಮಂಜುನಾಥ ಸ್ವಾಮಿ, ಮುಖ್ಯ ಶಿಕ್ಷಕರಾದ ರಾಜಪ್ಪ, ಸಂತೋಷ್, ಶಿಕ್ಷಕರು ಭಾಗವಹಿಸಿದ್ದರು.
- - - -22ಕೆಸಿಎನ್ಜಿ1.ಜೆಪಿಜಿ:ಚನ್ನಗಿರಿ ಪಟ್ಟಣದ ಸರ್ಕಾರಿ ಬಾಲಿಕಾ ಪ್ರೌಢಶಾಲೆಯಲ್ಲಿ ನಡೆದ ವಿಜ್ಞಾನ ವಸ್ತು ಪ್ರದರ್ಶನದ ಉದ್ಘಾಟನೆಯನ್ನು ಕ್ಷೇತ್ರ ಶಿಕ್ಷಣಾಧಿಕಾರಿ ಜಯಪ್ಪ ನೆರವೇರಿಸಿದರು. ವಿದ್ಯಾರ್ಥಿಗಳು ವಿಜ್ಞಾನ ವಿಷಯಕ್ಕೆ ಸಂಬಂಧಿಸಿದ ವಿವಿಧ ಆಕೃತಿಗಳನ್ನು ತಯಾರಿಸಿ, ಅವುಗಳ ಕುರಿತು ವೀಕ್ಷಕರಿಗೆ ಮಾಹಿತಿ ನೀಡಿದರು.