ಸ್ತನಗಳಲ್ಲಿ ಗಟ್ಟಿ ಗಂಟು ಕಂಡು ಬಂದರೆ ಕೂಡಲೇ ವೈದ್ಯರನ್ನು ಸಂಪರ್ಕಿಸಿ: ಡಾ.ತಿಮ್ಮರಾಜು

KannadaprabhaNewsNetwork |  
Published : Feb 07, 2026, 01:30 AM IST
೬ಶಿರಾ೩: ಶಿರಾ ತಾಲೂಕಿನ ದ್ವಾರನಕುಂಟೆ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ನಡೆದ ವಿಶ್ವ ಕ್ಯಾನ್ಸರ್ ರೋಗ ದಿನಾಚರಣೆ ಕಾರ್ಯಕ್ರಮವನ್ನು ಡಾ.ತಿಮ್ಮರಾಜು ಉದ್ಘಾಟಿಸಿದರು. | Kannada Prabha

ಸಾರಾಂಶ

ತಂಬಾಕು ಉತ್ಪನ್ನಗಳ ಸೇವನೆ ಜೊತೆಗೆ, ಧೂಮಪಾನ ಕ್ಯಾನ್ಸರ್‌ಗೆ ಕಾರಣವಾಗುತ್ತದೆ. ದುಶ್ಚಟಗಳಿಂದ ದೂರವಿದ್ದು ಕ್ಯಾನ್ಸರ್ ರೋಗ ತಡೆಗಟ್ಟಬಹುದು,

ಕನ್ನಡಪ್ರಭ ವಾರ್ತೆ ಶಿರಾ

ಇತ್ತೀಚಿನ ದಿನಗಳಲ್ಲಿ ಮಹಿಳೆಯರಲ್ಲಿ ಗರ್ಭ ಕೋಶ ಮತ್ತು ಸ್ತನ ಕ್ಯಾನ್ಸರ್ ಹೆಚ್ಚು ಕಂಡು ಬರುತ್ತಿದೆ. ಸ್ತನಗಳಲ್ಲಿ ಗಟ್ಟಿ ಗಂಟು ಇರುವಿಕೆ, ಗರ್ಭಕೋಶದಲ್ಲಿ ಗಡ್ಡೆ ಇಂತಹ ಕುರುಹುಗಳು ಇದ್ದರೆ ತಕ್ಷಣ ವೈದ್ಯರನ್ನು ಸಂಪರ್ಕಿಸಿ ಚಿಕಿತ್ಸೆ ಪಡೆಯಬೇಕು ಎಂದು ವೈದ್ಯಾಧಿಕಾರಿ ಡಾ. ಕೆ.ಜೆ.ತಿಮ್ಮರಾಜು ಹೇಳಿದರು.ಶಿರಾ ತಾಲೂಕಿನ ದ್ವಾರನಕುಂಟೆ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ನಡೆದ ವಿಶ್ವ ಕ್ಯಾನ್ಸರ್ ರೋಗ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಬೀಡಿ, ಸಿಗರೇಟ್, ಗುಟ್ಕಾ, ತಂಬಾಕು ಉತ್ಪನ್ನಗಳ ಸೇವನೆಗಳಿಂದ ಹೆಚ್ಚು ಕ್ಯಾನ್ಸರ್ ರೋಗ ಹರಡುವ ಸಾಧ್ಯತೆ ಇರುತ್ತದೆ. ಇಂತಹ ವಸ್ತುಗಳು ಸೇವಿಸುವ ಮುನ್ನ ಎಚ್ಚರಿಕೆ ವಹಿಸಿದರೆ ಆರೋಗ್ಯವಂತ ಸಮಾಜ ನಿರ್ಮಾಣ ಮಾಡಲು ಸಾಧ್ಯವಾಗುತ್ತದೆ ಎಂದು ತಿಳಿಸಿದರು.

ದ್ವಾರಕುಂಟೆ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಗೌರಮ್ಮ ನಾಗರಾಜ್ ಮಾತನಾಡಿ, ತಂಬಾಕು ಉತ್ಪನ್ನಗಳ ಸೇವನೆ ಜೊತೆಗೆ, ಧೂಮಪಾನ ಕ್ಯಾನ್ಸರ್‌ಗೆ ಕಾರಣವಾಗುತ್ತದೆ. ದುಶ್ಚಟಗಳಿಂದ ದೂರವಿದ್ದು ಕ್ಯಾನ್ಸರ್ ರೋಗ ತಡೆಗಟ್ಟಬಹುದು ಎಂದು ತಿಳಿಸಿದರು.

ಮಹಿಳೆಯರಲ್ಲಿ ಹೆಚ್ಚು ಕ್ಯಾನ್ಸರ್ ರೋಗ ಕಾಣಿಸಿಕೊಳ್ಳುವ ಸಾಧ್ಯತೆಯಿದ್ದು, ಯಾವುದೇ ಸಂಕೋಚವಿಲ್ಲದೆ ವೈದ್ಯರ ಸಲಹೆಯೊಂದಿಗೆ ಚಿಕಿತ್ಸೆ ಪಡೆದು ರೋಗದಿಂದ ಗುಣಮುಖರಾಗಬಹುದು ಎಂದು ಅವರು ತಿಳಿಸಿದರು.

ಈ ಸಂದರ್ಭದಲ್ಲಿ ಕಾಳಿದಾಸ ಪ್ರೌಢಶಾಲೆ ಶಿಕ್ಷಕ ಮಹಾಲಿಂಗಪ್ಪ, ಆರೋಗ್ಯ ಇಲಾಖೆಯ ಸವಿತಾ, ರೋಜಾ, ರಘು, ಫಾತಿಮಾ, ವಿಜಯಲಕ್ಷ್ಮಿ, ನಿರಂಜನ್, ನರಸಿಂಹಮೂರ್ತಿ, ಲಲಿತಮ್ಮಸೇರಿದಂತೆ ಆಶಾ ಕಾರ್ಯಕರ್ತರು, ವಿದ್ಯಾರ್ಥಿಗಳು ಹಾಜರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಶಿವಶಂಕರ ಶ್ರೀಗಳ ಜ್ಞಾನಮಾರ್ಗ ನಮಗೆ ಆದರ್ಶ
ಮುಂದಿನ ಪೀಳಿಗೆ ಧರ್ಮವಂತರಾಗಿಸೋದೆ ಜೈನ ಧರ್ಮದ ಉದ್ದೇಶ: ಜೈನಮುನಿ ಕುಲರತ್ನಭೂಷಣ ಮಹಾರಾಜರು