ಕನ್ನಡಪ್ರಭ ವಾರ್ತೆ ಬಾಳೆಹೊನ್ನೂರು
ಇಲ್ಲಿಯ ರಂಭಾಪುರಿ ಪೀಠದಲ್ಲಿ ಶ್ರೀ ಜಗದ್ಗುರು ರೇಣುಕಾಚಾರ್ಯ ಜಯಂತಿ ಯುಗಮಾನೋತ್ಸವ ಹಾಗೂ ಕ್ಷೇತ್ರನಾಥ ಶ್ರೀ ವೀರಭದ್ರಸ್ವಾಮಿ ಮಹಾರಥೋತ್ಸವದ ಅಂಗವಾಗಿ ಮಂಗಳವಾರ ನಡೆದ ಪೌರ್ಣಿಮೆ ವಸಂತೋತ್ಸವ ಮತ್ತು ಸುರಗಿ ಸಮಾರಾಧನಾ ಧರ್ಮ ಸಮಾರಂಭದ ಸಾನ್ನಿಧ್ಯ ವಹಿಸಿ ಆಶೀರ್ವಚನ ನೀಡಿದರು.
ಮನುಷ್ಯನಾಗಿ ಬಾಳುವುದು ಸುಲಭ. ಆದರೆ ಮಾನವೀಯತೆಯಿಂದ ನಡೆಯುವುದು ತುಂಬಾ ಕಷ್ಟ. ಜಾತಿ ಮತ ಭ್ರಾಂತಿಯಲ್ಲಿ ಶಾಂತಿ ಎಂದಿಗೂ ಸಿಗಲಾರದು. ಮೌಲ್ಯಗಳ ಉಳಿವು ಅಳಿವು ಮಾನವನ ಆಚರಣೆಯಲ್ಲಿದೆ. ನೀತಿವಂತರು ನಿರಾ|ಶರಾಗದೇ ಧರ್ಮವಂತರಾಗಿ ನಡೆಯಬೇಕಾಗುತ್ತದೆ. ನೀತಿ ಸಂಹಿತೆಯನ್ನು ಅರಿತವನಿಗೆ ನೆಮ್ಮದಿಯ ಫಲ. ಬರುವ ಅಡ್ಡಿ ಆತಂಕಗಳನ್ನು ದಿಟ್ಟತನದಿಂದ ಎದುರಿಸಿ ಶುದ್ಧ ಮನಸ್ಸಿನಿಂದ ಮುನ್ನಡೆದರೆ ಶ್ರೇಯಸ್ಸು ಪ್ರಾಪ್ತವಾಗುವುದರಲ್ಲಿ ಯಾವುದೇ ಸಂದೇಹವಿಲ್ಲ. ಮನಸ್ಸನ್ನು ಕೂಡಿಸುವ ಮತ್ತು ಧರ್ಮ ಕಟ್ಟುವ ಕಾರ್ಯ ಅಮೋಘವಾದುದು. ಸಮಾಜ ಘಾತಕ ವ್ಯಕ್ತಿಗಳ ಮಾತಿಗೆ ಮರುಳಾಗಬಾರದು. ದೈವ ಸಾನ್ನಿಧ್ಯದಲ್ಲಿ ನಮ್ಮ ಭಕ್ತಿ ಶ್ರದ್ಧೆ ನಿಷ್ಠೆ ಗಟ್ಟಿಯಾಗಿದ್ದರೆ ಬದುಕು ಉಜ್ವಲಗೊಳ್ಳುತ್ತದೆ ಎಂದರು.ಜಾತ್ರಾ ಮಹೋತ್ಸವದ ಅಂಗವಾಗಿ ನಡೆದ ಕೊನೆಯ ದಿನ ಪೌರ್ಣಿಮೆ ವಸಂತೋತ್ಸವ ಆಚರಿಸಿ ಭದ್ರಾ ನದಿ ತೀರದಲ್ಲಿ ಸುರಗಿ ಸಮಾರಾಧನಾ ಅಂಗವಾಗಿ ಇಷ್ಟಲಿಂಗ ಮಹಾಪೂಜಾ ನೆರವೇರಿಸಿ ಶ್ರೀ ರಂಭಾಪುರಿ ಜಗದ್ಗುರುಗಳು ಭಕ್ತ ಸಂಕುಲಕ್ಕೆ ಶುಭ ಹಾರೈಸಿದರು. ಸಹಸ್ರಾರು ಜನರು ಪೂಜೆಯಲ್ಲಿ ಪಾಲ್ಗೊಂಡು ಧನ್ಯತೆ ಪಡೆದರು.
೦೩ಬಿಹೆಚ್‌ಆರ್ ೩: ಬಾಳೆಹೊನ್ನೂರಿನ ಭದ್ರಾ ನದಿ ತೀರದಲ್ಲಿ ಸುರಗಿ ಸಮಾರಾಧನಾ ಅಂಗವಾಗಿ ರಂಭಾಪುರಿ ಜಗದ್ಗುರುಗಳು ಇಷ್ಟಲಿಂಗ ಪೂಜಾ ನಡೆಸಿದರು.