ಮಾಡಿದರೆ ಮಾತ್ರ ಯಶಸ್ಸು ಸಾಧಿಸಲು ಸಾಧ್ಯ ಎಂದು ಶ್ರೀದೇವಿ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಡಾ.ಎಂ.ಆರ್.ಹುಲಿನಾಯ್ಕರ್ ತಿಳಿಸಿದರು.
ಕನ್ನಡಪ್ರಭ ವಾರ್ತೆ ತುಮಕೂರುಇಂದಿನ ಸ್ಪರ್ಧಾತ್ಮಕ ಜಗತ್ತಿನಲ್ಲಿ ಪರಿಶ್ರಮ, ಪ್ರಾಮಾಣಿಕತೆ ಹಾಗೂ ಆತ್ಮವಿಶ್ವಾಸದಿಂದ ವಿದ್ಯಾಭ್ಯಾಸ ಮಾಡಿದರೆ ಮಾತ್ರ ಯಶಸ್ಸು ಸಾಧಿಸಲು ಸಾಧ್ಯ ಎಂದು ಶ್ರೀದೇವಿ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಡಾ.ಎಂ.ಆರ್.ಹುಲಿನಾಯ್ಕರ್ ತಿಳಿಸಿದರು.ನಗರದ ಶಿರಾರಸ್ತೆಯ ಶ್ರೀದೇವಿ ಪಿ.ಯು. ಕಾಲೇಜಿನ ವತಿಯಿಂದ ಗುರುವಾರ ಬೆಳಿಗ್ಗೆ ಶ್ರೀ ಅನುಷ್ಠಾನ ಓರಿಯೆಂಟೇಷನ್ ಕಾರ್ಯಕ್ರಮದಲ್ಲಿ ಮಾತನಾಡಿದರು.ಇಂದಿನ ಜಗತ್ತು ಅತ್ಯಂತ ಸ್ಪರ್ಧಾತ್ಮಕವಾಗಿದ್ದು, ಪಿಯುಸಿ ನಂತರ ವೈದ್ಯಕೀಯ ಮತ್ತು ಎಂಜಿನಿಯರಿಂಗ್ ಕ್ಷೇತ್ರಗಳಲ್ಲಿ ಸೀಟುಗಳನ್ನು ಪಡೆಯಲು ಲಕ್ಷಾಂತರ ವಿದ್ಯಾರ್ಥಿಗಳು ಸ್ಪರ್ಧಿಸುತ್ತಾರೆ. ಆದ್ದರಿಂದ ವಿದ್ಯಾರ್ಥಿಗಳು ಆರಂಭದಿಂದಲೇ ಗುರಿ ಇಟ್ಟುಕೊಂಡು ಪರಿಶ್ರಮದಿಂದ ಓದಿ ಉತ್ತಮ ಅಂಕಗಳನ್ನು ಗಳಿಸಬೇಕು. ನಗರ, ಗ್ರಾಮೀಣ, ಆರ್ಥಿಕ ಸಬಲರು,ಆರ್ಥಿಕ ದುರ್ಬಲರು ಹೀಗೆ ಎಲ್ಲ ಹಿನ್ನೆಲೆಯ ವಿದ್ಯಾರ್ಥಿಗಳಿಗೂ ಸಮಾನ ಅವಕಾಶಳಿವೆ. ಪಠ್ಯದ ಜೊತೆಗೆ ಕಲಾ ಸಾಂಸ್ಕೃತಿಕ ಕ್ರೀಡಾ ಚಟುವಟಿಕೆಗಳನ್ನೂ ಉತ್ತೇಜಿಸಲಾಗುತ್ತದೆ. ಸ್ಪರ್ಧೆ ಎಂಬುದು ಬದುಕಿನ ಅವಿಭಾಜ್ಯ ಅಂಗ. ಇದಕ್ಕಾಗಿ ಎದೆಗುಂದುವ ಅಗತ್ಯವಿಲ್ಲ. ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಸಿದ್ಧಗೊಳಿಸುವ ಜೊತೆಗೆ ವಿದ್ಯಾರ್ಥಿಗಳ ಸಮಗ್ರ ವ್ಯಕ್ತಿತ್ವ ವಿಕಸನವೇ ಸಂಸ್ಥೆಯ ಧ್ಯೇಯವಾಗಿದೆ ಎಂದು ಅವರು ಹೇಳಿದರು.
ಸಂಸ್ಥೆಯ ನಿರ್ದೇಶಕ ಹಾಗೂ ಟ್ರಸ್ಟಿ ಡಾ. ರಮಣ್ ಹುಲಿನಾಯ್ಕರ್ ಮಾತನಾಡಿ, ಪಿ.ಯು.ಸಿ. ಜೀವನವು ಭವಿಷ್ಯದ ಶಿಕ್ಷಣಕ್ಕೆ ಅತ್ಯಂತ ಮಹತ್ವದ ಹಂತವಾಗಿದೆ. ವಿದ್ಯಾರ್ಥಿಗಳು ಆತ್ಮವಿಶ್ವಾಸದಿಂದ ವಿದ್ಯಾಭ್ಯಾಸ ಮಾಡಿ ಉತ್ತಮ ಅಂಕಗಳನ್ನು ಗಳಿಸಿದರೆ ವೈದ್ಯಕೀಯ ಮತ್ತು ಇಂಜಿನಿಯರಿಂಗ್ ಕ್ಷೇತ್ರಗಳಲ್ಲಿ ಉಜ್ವಲ ಭವಿಷ್ಯ ನಿರ್ಮಿಸಿಕೊಳ್ಳಬಹುದು ಎಂದರು.ಇದೇ ಸಂದರ್ಭದಲ್ಲಿ ಶ್ರೀದೇವಿ ಸಂಸ್ಥೆಯ ಮಾನವ ಸಂಪನ್ಮೂಲ ವಿಭಾಗದ ನಿರ್ದೇಶಕ ಎಂ.ಎಸ್.ಪಾಟೀಲ್ ಮಾತನಾಡಿ ವಿದ್ಯಾರ್ಥಿಗಳಿಗೆ ಯಾವುದೇ ವಿಷಯದಲ್ಲಿ ಸಂದೇಹಗಳಿದ್ದರೆ ಶಿಕ್ಷಕರಿಂದ ತಕ್ಷಣ ಪರಿಹಾರ ಪಡೆದುಕೊಳ್ಳಬೇಕು. ಕಾಲೇಜಿನ ಎಲ್ಲಾ ಶಿಕ್ಷಕರು ವಿದ್ಯಾರ್ಥಿಗಳೊಂದಿಗೆ ಸ್ನೇಹ ಪರವಾಗಿ ನಡೆದುಕೊಳ್ಳುತ್ತಿದ್ದು, ಅವರ ವಿದ್ಯಾಭ್ಯಾಸಕ್ಕೆ ಸಂಪೂರ್ಣ ಸಹಕಾರ ನೀಡುತ್ತಾರೆ ಪಿ.ಯು.ಸಿ. ಶಿಕ್ಷಣದ ಎರಡು ವರ್ಷಗಳನ್ನು ಸಂಪೂರ್ಣವಾಗಿ ಓದಿಗೆ ಮೀಸಲಿಟ್ಟು ಮೊಬೈಲ್ ಫೋನ್, ಇಂಟರ್ನೆಟ್ ಹಾಗೂ ಇತರ ಆಕರ್ಷಣೆಗಳಿಂದ ದೂರವಿದ್ದರೆ ಉತ್ತಮ ರ್ಯಾಂಕ್ ಹಾಗೂ ಉನ್ನತ ಸಾಧನೆ ಸಾಧ್ಯವಾಗುತ್ತದೆ ಹಾಗೂ ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಗೆ ಮ್ಯಾನೇಜ್ಮೆಂಟ್‌ನ ಸಂಪೂರ್ಣ ಬೆಂಬಲ ದೊರೆಯಲಿದ್ದು, ಓದಿಗೆ ಅಗತ್ಯವಿರುವ ಎಲ್ಲಾ ಸೌಲಭ್ಯಗಳನ್ನು ಸಂಸ್ಥೆ ಒದಗಿಸುತ್ತಿದೆ ಎಂದರು. ಕಾರ್ಯಕ್ರಮದಲ್ಲಿ ಶ್ರೀದೇವಿ ಪಿ.ಯು.ಕಾಲೇಜಿನ ಪ್ರಾಂಶುಪಾಲ ಪ್ರೊ.ಅಜಯ್.ಸಿ ವಾರ್ಷಿಕ ವರದಿಯನ್ನು ಮಂಡಿಸುತ್ತಾ ಕಾಲೇಜಿನ ಸೈನ್ಸ್ ಮತ್ತು ಕಾಮರ್ಸ್ ವಿದ್ಯಾರ್ಥಿಗಳಿಗಾಗಿ ಅನುಭವಿ ಹಾಗೂ ತಜ್ಞರಿಂದ ವಿಶೇಷ ತರಬೇತಿ ಸೌಲಭ್ಯವನ್ನು ಕಲ್ಪಿಸಿದೆ. ಸೈನ್ಸ್ ವಿದ್ಯಾರ್ಥಿಗಳ ಉಜ್ವಲ ಭವಿಷ್ಯಕ್ಕಾಗಿ ಜಿಲ್ಲೆಯ ಇತಿಹಾಸದಲ್ಲಿಯೇ ಇದೇ ಮೊದಲ ಬಾರಿಗೆ ರೂರ್ಕೆಲಾ, ದೆಹಲಿ, ಪಶ್ಚಿಮ ಬಂಗಾಳ ಮತ್ತು ವಿಶಾಖಪಟ್ಟಣದ ಐ.ಐ.ಟಿ ತಜ್ಞರು ಸಿ.ಇ.ಟಿ., ನೀಟ್ ಹಾಗೂ ಜೆ.ಇ.ಇ. ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ವಿದ್ಯಾರ್ಥಿಗಳನ್ನು ಸಮರ್ಥವಾಗಿ ಸಜ್ಜುಗೊಳಿಸಲಿದ್ದಾರೆ ಎಂದರು. ಇದೇ ಸಂದರ್ಭದಲ್ಲಿ ಶ್ರೀದೇವಿ ಚಾರಿಟೇಬಲ್ ಟ್ರಸ್ಟಿ ಹಾಗೂ ನೇತ್ರತಜ್ಞೆ ಡಾ.ಲಾವಣ್ಯ, ಶ್ರೀದೇವಿ ಪಿ.ಯು.ಕಾಲೇಜಿನ ಡೀನ್ ಎ.ಕೆ.ಸಾಹ ಹಾಗೂ ಶ್ರೀದೇವಿ ಪಿ.ಯು.ಕಾಲೇಜಿನ ಬೋಧಕ-ಬೋಧಕೇತರ ಸಿಬ್ಬಂದಿ ವರ್ಗದವರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.