ಕನ್ನಡಪ್ರಭ ವಾರ್ತೆ ಹನೂರು
ಶಿಶುಗಳು ಮತ್ತು ಗರ್ಭಿಣಿಯರಿಗೆ ಮಲೇರಿಯಾ ರೋಗವು ಅಪಾಯಕಾರಿಯಾಗಿದ್ದು, ಅಂತಹವರು ಯಾವುದೇ ಜ್ವರವಿರಲಿ ತಡಮಾಡದೆ ವೈದ್ಯರ ಸಲಹೆ ಪಡೆಯುವುದು ಸೂಕ್ತ. ಹಾಗಾಗಿ ನೀರು ಶೇಖರಣಾ ತೊಟ್ಟಿಗಳನ್ನು ಭದ್ರವಾದ ಮುಚ್ಚಳದಿಂದ ಯಾವಾಗಲೂ ಮುಚ್ಚಿರಬೇಕು, ವಾರಕ್ಕೊಮ್ಮೆ ನೀರನ್ನು ಸಂಪೂರ್ಣವಾಗಿ ಖಾಲಿ ಮಾಡಿ ಒಣಗಿಸಿ ಮತ್ತೆ ಭರ್ತಿಮಾಡಿಕೊಳ್ಳಿ, ರೋಗವಾಹಕ ಸೊಳ್ಳೆಗಳ ನಿಯಂತ್ರಣಕ್ಕೆ ಆರೋಗ್ಯ ಇಲಾಖೆಯು ಕೈಗೊಳ್ಳುವ ಕೀಟನಾಶಕ ಸಿಂಪಡಣಾ ಕಾರ್ಯಕ್ಕೆ ಎಲ್ಲಾ ಇಲಾಖೆಗಳ ಅಧಿಕಾರಿಗಳು, ಗ್ರಾಮ ಪಂಚಾಯಿತಿ ಅಧ್ಯಕ್ಷರು, ಉಪಾಧ್ಯಕ್ಷರು, ಸ್ಥಳೀಯ ಮುಖಂಡರು, ಸದಸ್ಯರಗಳ ಸಹಕಾರ ನೀಡಿದರೆ ಮಲೇರಿಯಾ ತಡೆಗಟ್ಟಲು ಸಾಧ್ಯ ಎಂದರು.
ತಾಲೂಕು ವೈದ್ಯಾಧಿಕಾರಿ ಡಾ.ಪ್ರಕಾಶ್ ಮಾತನಾಡಿ, ಮುನ್ನೆಚ್ಚರಿಕೆ ಕ್ರಮವಾಗಿ ಸಾರ್ವಜನಿಕರು ತಮ್ಮ ಮನೆ ಹಾಗೂ ಸುತ್ತಲಿನ ಪ್ರದೇಶಗಳಲ್ಲಿ ಹಾಗೂ ಇತರೆ ಹೊಂಡಗಳಲ್ಲಿ ನೀರು ನಿಲ್ಲದಂತೆ ಕ್ರಮವಹಿಸಬೇಕು ನೀರು ನಿಂತರೆ ಅದರಲ್ಲಿ ಸೊಳ್ಳೆಗಳು ಕುಳಿತು ರೋಗ ರೋಜಿನೆಗಳ ಆವಾಸಸ್ಥಾನವಾಗಿ ಕಂಡು ಬರುತ್ತದೆ ಅಂತಹ ಸ್ಥಳದಲ್ಲಿ ನಾಗರಿಕರು ಸ್ವಚ್ಛತೆಯಿಂದ ಪರಿಸರವನ್ನು ಉತ್ತಮಪಡಿಸಿ ಮುಂದಾಗಬೇಕು ನಾಗರಿಕರು ರೋಗದಿಂದ ದೂರಾಗಲು ಕ್ರಮವಹಿಸುವಂತೆ ತಿಳಿಸಿದರು. ಇದೇ ವೇಳೆ ತಹಸೀಲ್ದಾರ್ ಗುರುಪ್ರಸಾದ್, ಇಒ ಉಮೇಶ್, ವೈದ್ಯರಾದ ಪುಷ್ಪರಾಣಿ, ಉಲ್ಲಾಸ್, ಜಾಹ್ನವಿ, ಆಸ್ಪತ್ರೆಯ ಸಿಬ್ಬಂದಿಗಳು, ಆಶಾ ಕಾರ್ಯಕರ್ತೆಯರು ಹಾಜರಿದ್ದರು.