ತಾಕತ್ತಿದ್ದರೆ ರಾಜ್ಯಾಧ್ಯಕ್ಷ ವಿಜಯೇಂದ್ರರನ್ನು ಕೆಳಗಿಳಿಸಿ: ರೇಣು

KannadaprabhaNewsNetwork |  
Published : Jan 21, 2025, 12:30 AM IST
ಹೊನ್ನಾಳಿ ಫೋಟೋ 20ಎಚ್.ಎಲ್.ಐ1.ಪಟ್ಟಣದ ಗುರುಭವನದಲ್ಲಿ ತಾಲೂಕು ಬಿಜೆಪಿ ಪಕ್ಷದವತಿಯಿಂದ ಹಮ್ಮಿಕೊಂಡಿದ್ದ ನೂತನ ಅಧ್ಯಕ್ಷ ಎ.ಎಂ.ನಾಗರಾಜ್ ಅರಕೆರೆ ಅವರ ಪದಗ್ರಹಣ ಕಾರ್ಯಕ್ರಮದಲ್ಲಿ ನಿರ್ಗಮಿತ ಅಧ್ಯಕ್ಷ ಜೆ.ಕೆ.ಸುರೇಶ್ ಅವರು ನೂತನ ಅಧ್ಯಕ್ಷ ರಿಗೆ ಪಕ್ಷದ ಬಾವುಟ ನೀಡುವ ಮೂಲಕ ಅಧಿಕಾರ ಹಸ್ತಾಂತರಿಸಿದರು. ಮಾಜ ಸಚಿವ ಎಂ.ಪಿ. ರೇಣುಕಾಚಾರ್ಯ ಸೇರಿದಂತೆ ಜಿಲ್ಲಾ, ತಾಲೂಕು ಮುಖಂಡರು ಇದ್ದರು.   | Kannada Prabha

ಸಾರಾಂಶ

ರಾಜ್ಯದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೆಂದ್ರ ಅಧ್ಯಕ್ಷತೆಯಲ್ಲಿ ಅತ್ಯಂತ ಬಲಿಷ್ಠ ಸಂಘಟನೆಯೊಂದಿಗೆ ರಾಜ್ಯ ಸರ್ಕಾರದ ವಾಲ್ಮೀಕಿ ಹಗರಣ, ಮುಡಾ ಹಗರಣಗಳ ವಿರುದ್ಧ ಹೋರಾಟ, ಪಾದಯಾತ್ರೆ ಮಾಡಿ ಜನಜಾಗೃತಿ ಮೂಡಿಸುವ ಕೆಲಸವಾಗುತ್ತಿದೆ. ಇದೀಗ ಅಧ್ಯಕ್ಷರ ವಿರುದ್ಧವೇ ಹಲವರು ಅನಗತ್ಯ ದೂರುತ್ತಿದ್ದಾರೆ. ತಾಕತ್ತಿದ್ದರೆ ವಿಜಯೇಂದ್ರ ಅವರನ್ನು ಅಧ್ಯಕ್ಷ ಸ್ಥಾನದಿಂದ ಕೆಳಗಿಸಲಿ ನೊಡೋಣ ಎಂದು ಮಾಜಿ ಸಚಿವ ಎಂ.ಪಿ.ರೇಣುಕಾರ್ಯ ಹೊನ್ನಾಳಿಯಲ್ಲಿ ಸವಾಲು ಹಾಕಿದ್ದಾರೆ.

- ಹೊನ್ನಾಳಿ ತಾಲೂಕು ಬಿಜೆಪಿ ಅಧ್ಯಕ್ಷ ನಾಗರಾಜ್ ಅರಕೆರೆ ಪದಗ್ರಹಣ ಕಾರ್ಯಕ್ರಮ- - - ಕನ್ನಡಪ್ರಭ ವಾರ್ತೆ ಹೊನ್ನಾಳಿ

ರಾಜ್ಯದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೆಂದ್ರ ಅಧ್ಯಕ್ಷತೆಯಲ್ಲಿ ಅತ್ಯಂತ ಬಲಿಷ್ಠ ಸಂಘಟನೆಯೊಂದಿಗೆ ರಾಜ್ಯ ಸರ್ಕಾರದ ವಾಲ್ಮೀಕಿ ಹಗರಣ, ಮುಡಾ ಹಗರಣಗಳ ವಿರುದ್ಧ ಹೋರಾಟ, ಪಾದಯಾತ್ರೆ ಮಾಡಿ ಜನಜಾಗೃತಿ ಮೂಡಿಸುವ ಕೆಲಸವಾಗುತ್ತಿದೆ. ಇದೀಗ ಅಧ್ಯಕ್ಷರ ವಿರುದ್ಧವೇ ಹಲವರು ಅನಗತ್ಯ ದೂರುತ್ತಿದ್ದಾರೆ. ತಾಕತ್ತಿದ್ದರೆ ವಿಜಯೇಂದ್ರ ಅವರನ್ನು ಅಧ್ಯಕ್ಷ ಸ್ಥಾನದಿಂದ ಕೆಳಗಿಸಲಿ ನೊಡೋಣ ಎಂದು ಮಾಜಿ ಸಚಿವ ಎಂ.ಪಿ.ರೇಣುಕಾರ್ಯ ಸವಾಲು ಹಾಕಿದರು.

ಪಟ್ಟಣದ ಗುರುಭವನದಲ್ಲಿ ತಾಲೂಕು ಬಿಜೆಪಿ ಹಮ್ಮಿಕೊಂಡಿದ್ದ ನೂತನ ಅಧ್ಯಕ್ಷ ಎ.ಎಂ. ನಾಗರಾಜ್ ಅರಕೆರೆ ಪದಗ್ರಹಣ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಪಕ್ಷದಲ್ಲಿ ಬೂತ್ ಮಟ್ಟದ ಅಧ್ಯಕ್ಷರಿಂದ ಹಿಡಿದು ತಾಲೂಕು ಜಿಲ್ಲಾ ಮತ್ತು ರಾಜ್ಯಮಟ್ಟದ ಅಧ್ಯಕ್ಷರ ಆಯ್ಕೆ ಪಕ್ಷದ ತತ್ವ ಸಿದ್ಧಾಂತಗಳಡಿ ನಡೆಯುತ್ತದೆ. ಇಲ್ಲಿ ಯಾರ ಶಿಫಾರಸು ಕೂಡ ನಡೆಯುವುದಿಲ್ಲ. ಆದಾಗ್ಯೂ ಕೆಲವರು ಇಲ್ಲಸಲ್ಲದ ಆರೋಪ ಮಾಡುತ್ತಿರುವುದು ಸರಿಯಲ್ಲ ಎಂದರು.

ಸಿಎಂ ನೆತ್ತಿ ಮೇಲೆ ತೂಗುಗತ್ತಿ:

ಪ್ರಸ್ತುತ ಕಾಂಗ್ರೆಸ್ ಸರ್ಕಾರ ಆಡಳಿತದಲ್ಲಿ ವಿಫಲವಾಗಿದೆ. ಅನೇಕ ಹಗರಣಗಳ ಸುಳಿಯಲ್ಲಿ ಸಿಲುಕಿದೆ. ಇನ್ನೊಂದೆಡೆ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ. ಕುರ್ಚಿಗಾಗಿ ದಿನದಿಂದ ದಿನಕ್ಕೆ ಪೈಪೋಟಿ ತೀವ್ರವಾಗಿ ಸಿದ್ದರಾಮಯ್ಯರ ನೆತ್ತಿನ ಮೇಲೆ ತೂಗುಗತ್ತಿ ನೇತಾಡುತ್ತಿದೆ. ಯಾವ ಕ್ಷಣದಲ್ಲಿಯೂ ಸಿದ್ದರಾಮಯ್ಯ ಸರ್ಕಾರ ಬೀಳಬಹುದು. ವಾಸ್ತವವಾಗಿ ಸಂವಿಧಾನದ ವಿರೋಧಿಗಳು ಎಂದರೆ ಅದು ಕಾಂಗ್ರೆಸ್ ಮುಖಂಡರಾಗಿದ್ದಾರೆ. ರಾಹುಲ್ ಗಾಂಧಿ, ಸೋನಿಯಾ ಗಾಂಧಿಗೆ ದೇಶದ ಸಂವಿಧಾನದ ಮೇಲೆ ಯಾವ ಗೌರವವಿಲ್ಲ ಎಂದು ಟೀಕಿಸಿದರು.

ಕಾರ್ಯಕ್ರಮದಲ್ಲಿ ನಿರ್ಗಮಿತ ಅಧ್ಯಕ್ಷ ಜೆ.ಕೆ.ಸುರೇಶ್ ಅವರು ನೂತನ ಅಧ್ಯಕ್ಷ ಎ.ಎಂ.ನಾಗರಾಜ್ ಅರಕೆರೆ ಅವರಿಗೆ ಪಕ್ಷದ ಧ್ವಜ ನೀಡುವ ಮೂಲಕ ಅಧಿಕಾರ ಹಸ್ತಾಂತರಿಸಿದರು. ಪಕ್ಷದ ನಡವಳಿ ಪ್ರಕಾರ ಅಧ್ಯಕ್ಷರ ಅವಧಿ 3 ವರ್ಷಗಳಿರುತ್ತದೆ. ಆದರೆ, ಚುನಾವಣೆ ಮುಂತಾದ ಕಾರಣಗಳಿಂದ ತಾನು 5 ವರ್ಷ ಅಧ್ಯಕ್ಷನಾಗಿ ಮುಂದುವರಿಯಬೇಕಾಯಿತು. ತನಗೆ ನೀಡಿದ ಸಹಕಾರವನ್ನು ನೂತನ ಅಧ್ಯಕ್ಷರಿಗೂ ನೀಡುವಂತೆ ಮುಖಂಡರು, ಕಾರ್ಯಕರ್ತರಿಗೆ ಮನವಿ ಮಾಡಿದರು.

ಅಧ್ಯಕ್ಷರ ಚುನಾವಣೆ ಉಸ್ತುವಾರಿ ದತ್ತಾತ್ರೇಯ, ಚುನಾವಣಾ ವೀಕ್ಷಕ ಬೈರಪ್ಪ, ಬಿಜೆಪಿ ಜಿಲ್ಲಾ ಅಧ್ಯಕ್ಷ ರಾಜಶೇಖರ ನಾಗಪ್ಪ, ಮುಖಂಡ ಕೆ.ಪಿ.ಕುಬೇಂದ್ರಪ್ಪ ಮಾತನಾಡಿದರು. ಜಿಲ್ಲಾ ಪ್ರಧಾನ ಕಾರ್ಯದರ್ಶಿ ಕಡ್ಲೆಬಾಳು ಧನಂಜಯ, ಶ್ರೀನಿವಾಸ್, ಮುಖಂಡರಾದ ಸಿ.ಆರ್.ಶಿವಾನಂದ, ನೆಲಹೊನ್ನೆ ಮಂಜುನಾಥ್,ಕೆ.ರಂಗಪ್ಪ,ದಿಡಗೂರು ಫಾಲಾಕ್ಷಪ್ಪ,ಮಾಜಿ ಅಧ್ಯಕ್ಷ ಡಿ.ಜಿ.ರಾಜಪ್ಪ, ಟಿ.ಜಿ.ರಮೇಶ್ ಗೌಡ, ರವಿಕುಮಾರ್, ಶಿವುಹುಡೇದ್ ಸೇರಿದಂತೆ ನೂರಾರು ಮುಖಂಡರು, ಕಾರ್ಯಕರ್ತರು ಉಪಸ್ಥಿತರಿದ್ದರು.

- - -

ಕೋಟ್‌ ನ್ಯಾಮತಿ, ಹೊನ್ನಾಳಿ ಅವಳಿ ತಾಲೂಕುಗಳ ಬಿಜೆಪಿ ಮುಖಂಡರು, ಕಾರ್ಯಕರ್ತರ ಸಹಕಾರದಿಂದ ಅಧ್ಯಕ್ಷನಾಗಿ ಮುಂದುವರೆಯುತ್ತೇನೆ. ಎಲ್ಲರ ಸಲಹೆ- ಸಹಕಾರ ಅಗತ್ಯವಾಗಿದೆ

- ಎ.ಎಂ. ನಾಗರಾಜ್ ಅರಕರೆ, ತಾಲೂಕು ಅಧ್ಯಕ್ಷ, ಹೊನ್ನಾಳಿ - - -

-20ಎಚ್ಎಲ್.ಐ1ಜೆಪಿಜಿ:

ಹೊನ್ನಾಳಿ ಪಟ್ಟಣದ ಗುರುಭವನದಲ್ಲಿ ತಾಲೂಕು ಬಿಜೆಪಿ ನೂತನ ಅಧ್ಯಕ್ಷ ಎ.ಎಂ.ನಾಗರಾಜ್ ಅರಕೆರೆ ಪದಗ್ರಹಣ ಕಾರ್ಯಕ್ರಮದಲ್ಲಿ ನಿರ್ಗಮಿತ ಅಧ್ಯಕ್ಷ ಜೆ.ಕೆ.ಸುರೇಶ್ ಪಕ್ಷದ ಬಾವುಟ ನೀಡುವ ಮೂಲಕ ಅಧಿಕಾರ ಹಸ್ತಾಂತರಿಸಿದರು. ಮಾಜಿ ಸಚಿವ ಎಂ.ಪಿ. ರೇಣುಕಾಚಾರ್ಯ, ಜಿಲ್ಲಾ ಹಾಗೂ ತಾಲೂಕು ಮುಖಂಡರು ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಮಾನಸಿಕ ಖಿನ್ನತೆ ಸ್ವಯಂ ಮೌಲ್ಯಮಾಪನಕ್ಕೆ ನಿಮ್ಹಾನ್ಸ್‌ ಆ್ಯಪ್‌
ಒಂದೇ ದಿನ ಜಡ್ಜ್‌ ಮುಂದೆ 60 ಪರೋಲ್‌ ಅರ್ಜಿ!