ಬಸವಣ್ಣರ ತತ್ವ ಅರಿತರೆ ನೆಮ್ಮದಿ ಬದುಕು: ರಮೇಶ್‌ ಬಂಡಿಸಿದ್ದೇಗೌಡ

KannadaprabhaNewsNetwork |  
Published : Apr 21, 2026, 01:45 AM IST
20ಕೆಎಂಎನ್ ಡಿ27 | Kannada Prabha

ಸಾರಾಂಶ

ನಾವುಗಳು ಒಳ್ಳೆಯದನ್ನು ಆರಿಸಿಕೊಳ್ಳುವ ಮೂಲಕ ಮುಂದಿನ ಪೀಳಿಗೆಗಳಿಗೆ ಬಸವಣ್ಣರ ಆದರ್ಶ, ತತ್ವಗಳ ಅನುಸರಿಸಿ ವಚನಗಳ ಆಶಯಗಳನ್ನು ಅರಿತುಕೊಳ್ಳಬೇಕು. ಬಳಿಕ ಮಕ್ಕಳಿಗೆ ಮನಮುಟ್ಟುವಂತೆ ನಾವು ತಿಳಿ ಹೇಳಿದರೆ ಅವರು ಗ್ರಹಿಸಲು ಸಾಧ್ಯವಾಗುತ್ತದೆ.

ಕನ್ನಡಪ್ರಭ ವಾರ್ತೆ ಶ್ರೀರಂಗಪಟ್ಟಣ

ಬಸವಣ್ಣರ ತತ್ವಗಳ ಸಾರವನ್ನು ಅರಿತರೆ ಸಮಾಜದಲ್ಲಿ ನೆಮ್ಮದಿಯಿಂದ ಬದುಕಲು ಸಾಧ್ಯ ಎಂದು ಶಾಸಕ ರಮೇಶ್‌ ಬಂಡಿಸಿದ್ದೇಗೌಡ ಹೇಳಿದರು.

ಪಟ್ಟಣದ ಮಿನಿವಿಧಾನಸೌಧದ ಸಭಾಂಗಣದಲ್ಲಿ ತಾಲೂಕು ಆಡಳಿತ ಆಯೋಜಿಸಿದ್ದ ಬಸವ ಜಯಂತಿಯಲ್ಲಿ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಮಾತನಾಡಿ, ಬಸವಣ್ಣ ನವರು 12ನೇ ಶತಮಾನದಲ್ಲಿಯೇ ಪ್ರಪಂಚದ ಎಲ್ಲೆಡೆ ಸುತ್ತಾಡಿ ತಮ್ಮ ವಚನಗಳ ಪಸರಿಸುವ ಮೂಲಕ ಜನರಿಗೆ ಒಳ್ಳೆಯದು ಹಾಗೂ ಕೆಟ್ಟದನ್ನು ಅರಿವಿನ ಸಾರಗಳನ್ನು ತಿಳಿಸಿಕೊಟ್ಟಿದ್ದಾರೆ ಎಂದರು.

ನಾವುಗಳು ಒಳ್ಳೆಯದನ್ನು ಆರಿಸಿಕೊಳ್ಳುವ ಮೂಲಕ ಮುಂದಿನ ಪೀಳಿಗೆಗಳಿಗೆ ಅವರ ಆದರ್ಶ ತತ್ವಗಳ ಅನುಸರಿಸಿ ವಚನಗಳ ಆಶಯಗಳನ್ನು ಅರಿತುಕೊಳ್ಳಬೇಕು. ಬಳಿಕ ಮಕ್ಕಳಿಗೆ ಮನಮುಟ್ಟುವಂತೆ ನಾವು ತಿಳಿ ಹೇಳಿದರೆ ಅವರು ಗ್ರಹಿಸಲು ಸಾಧ್ಯವಾಗುತ್ತದೆ ಎಂದರು.

ನಂತರ ತಹಸೀಲ್ದಾರ್ ಚೇತನ ಯಾದವ್ ಮಾತನಾಡಿ, ಬಸವಣ್ಣನವರು ಕನ್ನಡ ಸಾಹಿತ್ಯ ಕ್ಷೇತ್ರಕ್ಕೆ ವಚನಗಳ ಮೂಲಕ ಅಪೂರ್ವ ಕೊಡುಗೆ ನೀಡಿದ್ದಾರೆ. ಸಮಾಜದಲ್ಲಿ ಎಲ್ಲರಿಗೂ ಸಮಾನತೆ ಇರಬೇಕು ಎಂದು ಬಸವಣ್ಣನವರು ಬಯಸಿದ್ದರು. ಸಾಮಾಜಿಕ ಜಾಗೃತಿಯನ್ನು ಎಲ್ಲೆಡೆ ಸಾರಿದ್ದಾರೆ ಎಂದರು.

ಈ ವೇಳೆ ವೀರಶೈವ ಮಹಾಸಭಾದ ಪದಾಧಿಕಾರಿಗಳು, ಸಮಾಜದ ಮುಖಂಡರು ವಿವಿಧ ಇಲಾಖೆ ಅಧಿಕಾರಿ ಸಿಬ್ಬಂದಿಗಳು ಹಾಗೂ ವಿವಿಧ ಕನ್ನಡ ಪರ ಸಂಘಟನೆ ಮುಖಂಡರು ಉಪಸ್ಥಿತರಿದ್ದರು.ಬಸವಣ್ಣ ವೃತ್ತ ನಾಮಕರಣ, ಫಲಕ ಸ್ಥಾಪನೆ

ಶ್ರೀರಂಗಪಟ್ಟಣ: ಪಟ್ಟಣದ ಜಯಲಕ್ಷ್ಮಿ ಕಲ್ಯಾಣ ಮಂಟಪ ಬಳಿಯ ವೃತ್ತಕ್ಕೆ ಸಾಂಸ್ಕೃತಿಕ ರಾಯಭಾರಿ ಬಸವಣ್ಣ ವೃತ್ತ ಎಂದು ನಾಮಕರಣ ಮಾಡಿ ಫಲಕವನ್ನು ಸ್ಥಾಪಿಸಲಾಯಿತು.ವೀರಶೈವ ಮುಖಂಡರು ಹಾಗೂ ವಿವಿಧಪರ ಸಂಘಟನೆಗಳ ಒತ್ತಾಯದ ಮೇರೆಗೆ ಪುರಸಭೆಯಿಂದ ಬಸವ ಜಯಂತಿ ಅಂಗವಾಗಿ ಈ ವೃತ್ತಕ್ಕೆ ನಾಮಕರಣ ಮಾಡಿ ಫಲಕವನ್ನು ಅಳವಡಿಸಿ ಬಸವಣ್ಣರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಲಾಯಿತು. ವೀರಶೈವ ಮುಖಂಡರು ಹಾಗೂ ವಿವಿಧ ಸಂಘಟನೆ ಮುಖಂಡರು ಹಾಜರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಹಳೆ ವೈಷಮ್ಯದಿಂದಾಗಿ ಪೊಲೀಸರಿಗೆ ಮಾಹಿತಿ ನೀಡುತ್ತಿದ್ದ ವ್ಯಕ್ತಿ ಕೊಲೆ
ಜನರಿಗೆ ವಚನಾಮೃತ ಉಣಬಡಿಸಿದ ಬಸವಣ್ಣನವರು: ಶಾಸಕ ಪುಟ್ಟರಂಗಶೆಟ್ಟಿ