ಕೊಪ್ಪಳ:
ರೈತರಿಗೆ ಯೂರಿಯಾ ಗೊಬ್ಬರ ಪೂರೈಸುವಲ್ಲಿ ರಾಜ್ಯ ಸರ್ಕಾರ ವಿಫಲವಾಗಿದೆ ಎಂದು ಆರೋಪಿಸಿ ಬಿಜೆಪಿ ಆರಂಭಿಸಿರುವ ಪ್ರತಿಭಟನೆಗೆ ನಗರದಲ್ಲಿ ತಿರುಗೇಟು ನೀಡಿದ ಅವರು, ಬಿಜೆಪಿಗೆ ಪ್ರತಿಭಟಿಸುವ ನೈತಿಕತೆ ಇಲ್ಲ. ತುಮಕೂರಿನಲ್ಲಿ ಪ್ರತಿಭಟನೆ ಮಾಡುವುದನ್ನು ಬಿಟ್ಟು ಪ್ರಧಾನಿ ಬಳಿ ಕುಳಿತುಕೊಂಡು ಗೊಬ್ಬರ ಕೇಳಲಿ ಎಂದರು.
ವ್ಯವಸ್ಥೆಯ ಅರಿವಿಲ್ಲ:ಬಿಜೆಪಿ ನಾಯಕರಿಗೆ ವ್ಯವಸ್ಥೆ ಬಗ್ಗೆ ಅರಿವಿದೆಯೇ? ಯೂರಿಯಾ ಪೂರೈಕೆ ಮಾಡುವುದು ಯಾರು? ರಾಜ್ಯ ಸರ್ಕಾರನಾ? ಕೇಂದ್ರ ಸರ್ಕಾರನಾ? ಕರ್ನಾಟಕದಲ್ಲಿ ಯೂರಿಯಾ ಉತ್ಪಾದನೆ ಇದೆಯೇ? ಎಂದು ಪ್ರಶ್ನಿಸಿದ ಅವರು, ಯಾವ ಮುಖ ಇಟ್ಟುಕೊಂಡು ನಮ್ಮ ವಿರುದ್ಧ ಮಾತನಾಡುತ್ತಾರೆಂದು ಕಿಡಿಕಾರಿದರು.
ಕೇಂದ್ರ ಪೂರೈಸಿಲ್ಲ:ಈ ಬಾರಿ ಉತ್ತಮ ಮಳೆಯಾಗಿದ್ದು ಬೇಗೆ ಬಿತ್ತನೆ ಮಾಡಲಾಗಿದೆ. ಆದರಿಂದ ನಮಗೆ ಯೂರಿಯಾ ಗೊಬ್ಬರ ನೀಡುವಂತೆ ವರದಿ ಕೊಟ್ಟರೂ ಪೂರೈಸಿಲ್ಲ. ರೈತರ ವಿಚಾರದಲ್ಲಿ ರಾಜಕೀಯ ಮಾಡುವುದನ್ನು ಬಿಟ್ಟು ಸಮರ್ಪಕವಾಗಿ ಗೊಬ್ಬರ ಪೂರೈಸಬೇಕು. ರೈತರು ಯಾವುದೇ ಕಾರಣಕ್ಕೂ ಯೂರಿಯಾ ಗೊಬ್ಬರ ದೊರೆತಿಲ್ಲವೆಂದು ಆತಂಕ ಪಡಬಾರದು. ಒಂದು ದಿನ ತಡವಾದರೂ ಸಹ ನಿಮಗೆ ಗೊಬ್ಬರ ಕೊಟ್ಟೇ ಕೊಡತ್ತೀವಿ. ಯೂರಿಯಾ ಬೇಡಿಕೆ ಬಗ್ಗೆ ಅಧಿಕಾರಿಗಳ ಸಭೆ ನಡೆಸಿ ಮಾಹಿತಿ ಪಡೆಯಲಾಗುವುದು. ಹೀಗಾಗಿ ಯಾರೂ ಸಹ ಆತಂಕಕ್ಕೆ ಒಳಗಾಗಬಾರದೆಂದು ಸಚಿವರು ಮನವಿ ಮಾಡಿದರು.
ಜಿಲ್ಲೆಯಲ್ಲಿ ವಾಡಿಕೆಯಂತೆ 2.45 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಬಿತ್ತನೆಯಾಗಬೇಕಿತ್ತು. ಈ ವರ್ಷ ಉತ್ತಮ ಮಳೆಯಾಗಿದ್ದರಿಂದ ಜಿಲ್ಲೆಯಲ್ಲಿ 3.65 ಲಕ್ಷ ಹೆಕ್ಟೇರ್ ಪ್ರದೇಶ ಬಿತ್ತನೆಯಾಗಿದೆ. ಜುಲೈನಲ್ಲಿ 9600 ಟನ್ ಗೊಬ್ಬರ ಬೇಕಿತ್ತು, 11253 ಟನ್ ಬಂದಿದೆ. ಆದರೆ, ಬಿತ್ತನೆ ಪ್ರಮಾಣ ಹೆಚ್ಚಾದ ಕಾರಣ ಕೊರೆತೆಯಾಗಿದೆ. ಆಗಸ್ಟ್ ತಿಂಗಳಲ್ಲಿ ಸಾಕಷ್ಟು ಯೂರಿಯಾ ಗೊಬ್ಬರ ಸಿಗಲಿದೆ. ಆ 3ರೊಳಗಾಗಿ 3431 ಟನ್ ಕೊಪ್ಪಳಕ್ಕೆ ಬರಲಿದ್ದು, ಆ ತಿಂಗಳಲ್ಲಿ 10 ಸಾವಿರ ಟನ್ ಬೇಡಿಕೆ ಇದ್ದು ಇನ್ನೂ 7 ಸಾವಿರ ಟನ್ ಮುಂಗಡವಾಗಿ ನೀಡಲು ಮನವಿ ಮಾಡಿಕೊಂಡಿದ್ದೇವೆಂದು ಸಚಿವರು ಹೇಳಿದರು.
ಜಿಲ್ಲೆಯ 73 ಸೊಸೈಟಿಗಳಿದ್ದು ಅವುಗಳಿಗೆ 3500 ಟನ್ ಯೂರಿಯಾ ಗೊಬ್ಬರ ನೀಡಲಾಗಿದೆ ಎಂದು ಸಚಿವರು ತಿಳಿಸಿದರು.