ಬಾಲಕಾರ್ಮಿಕರು ಕಂಡುಬಂದರೆ 1098ಕ್ಕೆ ಕರೆ ಮಾಡಿ

KannadaprabhaNewsNetwork |  
Published : Jun 17, 2025, 03:00 AM IST
ಮಕ್ಕಳು ಕೆಲಸ ಮಾಡುವುದು ಕಂಡರೆ ಮಕ್ಕಳೇ ೧೦೯೮ ಕ್ಕೆ ಕರೆ ಮಾಡಿ | Kannada Prabha

ಸಾರಾಂಶ

ಮಕ್ಕಳು ಬಾಲ್ಯ ಕಳೆಯಬೇಕು. ಶಿಕ್ಷಣ ಪಡೆಯಬೇಕು. ಕ್ರೀಡೆಗಳಲ್ಲಿ ಭಾಗವಹಿಸಬೇಕು. ಆದರೆ ಮಕ್ಕಳು ಬಾಲ ಕಾರ್ಮಿಕರಾಗಿ ದುಡಿಯುವುದು ಸರಿಯಲ್ಲ,

ಕನ್ನಡಪ್ರಭ ವಾರ್ತೆ ಗುಂಡ್ಲುಪೇಟೆಬಡತನ, ನಿರುದ್ಯೋಗ, ಆರ್ಥಿಕ ಸಮಸ್ಯೆಗೆ ಪೋಷಕರು ಮಕ್ಕಳನ್ನು ಶಾಲೆಗೆ ಕಳುಹಿಸುತ್ತಿಲ್ಲ. ಮಕ್ಕಳ ಕೆಲಸ ಮಾಡುವುದನ್ನು ಕಂಡರೆ ಮಕ್ಕಳೇ 1098 ಸಹಾಯವಾಣಿಗೆ ಕರೆ ಮಾಡಿ ಎಂದು ಗುಂಡ್ಲುಪೇಟೆ ಹಿರಿಯ ಸಿವಿಲ್‌ ಮತ್ತು ಜೆಎಂಎಫ್‌ಸಿ ನ್ಯಾಯಾಧೀಶ ಬಸವರಾಜ ತಳವಾರ ಸಲಹೆ ನೀಡಿದರು.

ಪಟ್ಟಣದ ತಾಲೂಕು ಕಚೇರಿ ಸಭಾ ಭವನದಲ್ಲಿ ತಾಲೂಕು ಕಾನೂನು ಸೇವೆಗಳ ಸಮಿತಿ, ತಾಲೂಕು ವಕೀಲರ ಸಂಘ, ತಾಲೂಕು ಆಡಳಿತ, ತಾಲೂಕು ಪಂಚಾಯಿತಿ, ಶಾಲಾ ಶಿಕ್ಷಣ ಇಲಾಖೆ, ಕಾರ್ಮಿಕ ಇಲಾಖೆ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಪೊಲೀಸ್‌ ಇಲಾಖೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಕೈಲಾಸ್‌ ಸತ್ಯಾರ್ಥಿ ಚಿಲ್ಡ್ರನ್‌ ಪೌಂಡೇಶನ್‌ ಹಾಗೂ ಸಾಂತ್ವನ ಮಹಿಳಾ ಸಹಾಯವಾಣಿ ಕೇಂದ್ರದ ಸಹಯೋಗದಲ್ಲಿ ವಿಶ್ವ ಬಾಲ ಕಾರ್ಮಿಕ ಪದ್ಧತಿ ವಿರೋಧಿ ಜಾಥಾಗೆ ಚಾಲನೆ ನೀಡಿದ ಬಳಿಕ ಕಾನೂನು ಅರಿವು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಮಕ್ಕಳು ಬಾಲ್ಯ ಕಳೆಯಬೇಕು. ಶಿಕ್ಷಣ ಪಡೆಯಬೇಕು. ಕ್ರೀಡೆಗಳಲ್ಲಿ ಭಾಗವಹಿಸಬೇಕು. ಆದರೆ ಮಕ್ಕಳು ಬಾಲ ಕಾರ್ಮಿಕರಾಗಿ ದುಡಿಯುವುದು ಸರಿಯಲ್ಲ, ಪೋಷಕರು ಅರ್ಥ ಮಾಡಿಕೊಂಡು ಶಿಕ್ಷಣ ಕೊಡಿಸುವ ಮೂಲಕ ದೇಶದ ಪ್ರಗತಿಗೆ ಮುಂದಾಗಿ ಎಂದರು.

ಯಾವುದೇ ಕಾರ್ಯಕ್ರಮಗಳಿರಲಿ, ಪೂರ್ವ ತಯಾರಿ ಇಲ್ಲದೆ ಇದ್ದರೆ ಆ ಕಾರ್ಯಕ್ರಮದ ಉದ್ದೇಶ ಈಡೇರುವುದಿಲ್ಲ. ಹಾಗಾಗಿ ಕಾರ್ಯಗಳಿಗೆ ಪೂರ್ವ ತಯಾರಿ ಬೇಕು. ಮಕ್ಕಳ ಹಕ್ಕುಗಳನ್ನು ರಕ್ಷಿಸಲು ಜನರಲ್ಲಿ ಜಾಗೃತಿ ಮೂಡಿಸಬೇಕು. ಆ ಕೆಲಸ ಸರ್ಕಾರ ಇಲಾಖೆಗಳ ಮೂಲಕ ಮಾಡಿಸುತ್ತಿದೆ ಎಂದರು.

ಜಾಥಾ ಹಾಗೂ ಕಾರ್ಯಕ್ರಮದಲ್ಲಿ ಪ್ರಧಾನ ಸಿವಿಲ್‌ ಮತ್ತು ಜೆಎಂಎಫ್‌ಸಿ ನ್ಯಾಯಾಧೀಶ ದೀಪು ಎಂ.ಟಿ. ಅಪರ ಸಿವಿಲ್‌ ಮತ್ತು ಜೆಎಂಎಫ್‌ಸಿ ನ್ಯಾಯಾಧೀಶ ಗಿರೀಶ್‌ ಆರ್.ಬಿ. ತಹಸೀಲ್ದಾರ್‌ ಟಿ.ರಮೇಶ್‌ ಬಾಬು, ಬಾಲ ನ್ಯಾಯ ಮಂಡಳಿ ಸದಸ್ಯೆ ಸರಸ್ವತಿ, ಎಂ.ಎನ್‌,ವಕೀಲರ ಸಂಘದ ಅಧ್ಯಕ್ಷ ಟಿ.ಎಸ್.ವೆಂಕಟೇಶ್‌, ಕಾರ್ಯದರ್ಶಿ ಎಂ.ಬೀರೇಗೌಡ, ಪೊಲೀಸ್‌ ಇನ್‌ಸ್ಪೆಕ್ಟರ್‌ ಎನ್.ಜಯಕುಮಾರ್‌, ಸಿಡಿವಿಓಎನ್‌ಐ ಕಾರ್ಯದರ್ಶಿ ಸಿ.ಸುರೇಶ್‌ ಕುಮಾರ್‌, ಕಾರ್ಮಿಕ ನಿರೀಕ್ಷಕ ನಾರಾಯಣಮೂರ್ತಿ, ಗುಂಡ್ಲುಪೇಟೆ ಬಾಲಕಿಯರ ಸರ್ಕಾರಿ ಪ್ರೌಢ ಶಾಲೆ ಮುಖ್ಯ ಶಿಕ್ಷಕ ರಮೇಶ್‌ ಆರ್‌, ಕೆಎಸ್‌ಸಿಎಫ್‌ ಜಿಲ್ಲಾ ಸಂಯೋಜಕ ಜಿ.ಸಿ.ನಾರಾಯಣಸ್ವಾಮಿ ಸೇರಿದಂತೆ ಸರ್ಕಾರಿ ಬಾಲಕಿಯರು ಪ್ರೌಢ ಶಾಲೆಯ ವಿದ್ಯಾರ್ಥಿಗಳಿದ್ದರು.

೧೬ಜಿಪಿಟಿ೧

ಗುಂಡ್ಲುಪೇಟೆಯಲ್ಲಿ ವಿಶ್ವ ಬಾಲ ಕಾರ್ಮಿಕ ಪದ್ಧತಿ ವಿರೋಧಿ ದಿನಾಚರಣೆಯನ್ನು ನ್ಯಾಯಾಧೀಶ ಬಸವರಾಜ ತಳವಾರ ಉದ್ಘಾಟಿಸಿದರು.

PREV

Recommended Stories

ರೈತರ ಅನುಕೂಲಕ್ಕೆ ಶ್ರಮಿಸಿದ್ದ ದಿ.ಸಿದ್ದು ನ್ಯಾಮಗೌಡ
ಮುಧೋಳದಲ್ಲಿ ಮುಷ್ಕರಕ್ಕೆ ನೋ ರಿಸ್ಪಾನ್ಸ್‌