ರಾಜಕೀಯ ಮಾಡುವುದಾದರೆ ಚುನಾವಣೆಯಲ್ಲಿ ಮಾಡಿ

KannadaprabhaNewsNetwork |  
Published : Oct 21, 2025, 01:00 AM IST
ರಾಜುಗೌಡ | Kannada Prabha

ಸಾರಾಂಶ

ಕನ್ನಡಪ್ರಭ ವಾರ್ತೆ ದೇವರಹಿಪ್ಪರಗಿ ರಾಜಕೀಯ ಮಾಡಬೇಕಾದದ್ದು ಚುನಾವಣಾ ಸಮಯದಲ್ಲಿ. ಆದರೆ, ಚುನಾವಣೆಯ ಬಳಿಕ ಪಕ್ಷ ಬೇಧವಿಲ್ಲದೆ ಅಭಿವೃದ್ಧಿಗೆ ಕೈಜೋಡಿಸಬೇಕು ಎಂದು ಶಾಸಕ ರಾಜುಗೌಡ ಪಾಟೀಲ ಕುದರಿಸಾಲವಾಡಗಿ ಹೇಳಿದರು.

ಕನ್ನಡಪ್ರಭ ವಾರ್ತೆ ದೇವರಹಿಪ್ಪರಗಿ

ರಾಜಕೀಯ ಮಾಡಬೇಕಾದದ್ದು ಚುನಾವಣಾ ಸಮಯದಲ್ಲಿ. ಆದರೆ, ಚುನಾವಣೆಯ ಬಳಿಕ ಪಕ್ಷ ಬೇಧವಿಲ್ಲದೆ ಅಭಿವೃದ್ಧಿಗೆ ಕೈಜೋಡಿಸಬೇಕು ಎಂದು ಶಾಸಕ ರಾಜುಗೌಡ ಪಾಟೀಲ ಕುದರಿಸಾಲವಾಡಗಿ ಹೇಳಿದರು.

ತಾಲೂಕಿನ ಕೊಂಡಗೂಳಿ ಗ್ರಾಮದ ಸರ್ಕಾರಿ ಶಾಲೆಯ ಆವರಣದಲ್ಲಿ ಸೋಮವಾರ ಜಿಪಂ, ಶಾಲಾ ಶಿಕ್ಷಣ ಇಲಾಖೆ ವಿಜಯಪುರ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಹಾಗೂ ಸಿಂದಗಿ ಕ್ಷೇತ್ರ ಸಮನ್ವಯಾಧಿಕಾರಿಗಳ ಕಚೇರಿ ನೇತೃತ್ವದಲ್ಲಿ ಗ್ರಾಮದ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಯನ್ನು ಪ್ರೌಢಶಾಲೆಯನ್ನಾಗಿ ಉನ್ನತಿ ಕರಿಸಿದ ಪ್ರಯುಕ್ತ ಪ್ರಾರಂಭೋತ್ಸವದಲ್ಲಿ ಮಾತನಾಡಿದರು. ಅವರು. ಮತಕ್ಷೇತ್ರದ ಮಹಾಜನತೆಯ ಆಶೀರ್ವಾದದಿಂದ ಜನಸೇವೆ ಮಾಡುವ ಅವಕಾಶ ದೊರೆತಿದ್ದು, ಅವರ ನಿರೀಕ್ಷೆಗೆ ತಕ್ಕಂತೆ ಕೆಲಸ ಮಾಡುತ್ತಿದ್ದೇನೆ. ಸರ್ಕಾರದ ಯೋಜನೆಗಳನ್ನು ಜನತೆಯ ಬಳಿಗೆ ಕೊಂಡೊಯ್ಯಲು ಪ್ರಮಾಣಿಕವಾಗಿ ಪ್ರಯತ್ನಿಸುತ್ತಿದ್ದೇನೆ. ಶಿಕ್ಷಣ ಕ್ಷೇತ್ರದ ಅಭಿವೃದ್ಧಿಗೆ ಹೆಚ್ಚಿನ ಒತ್ತು ಕೊಟ್ಟಿದ್ದು, ಸರ್ಕಾರದ ಮಟ್ಟದಲ್ಲಿ ತಾಲೂಕಿನ ಕೋರವಾರ, ಕೊಂಡಗೂಳಿ ಹಾಗೂ ಬಮ್ಮನ ಜೋಗಿ ಶಾಲೆಗಳನ್ನು ಪ್ರೌಢಶಾಲೆಯಾಗಿ ಉನ್ನತಿಕರಿಸಲು ಪ್ರಾಮಾಣಿಕವಾಗಿ ಪ್ರಯತ್ನ ಮಾಡಿದ್ದೇನೆ. ಕೆಲ ತಾಂತ್ರಿಕ ಸಮಸ್ಯೆಗಳಿಂದ ಕೆಲವರು ನನ್ನ ಮೇಲೆ ಆರೋಪಿಸಿದರು. ಕುಗ್ಗದೆ ಪ್ರಾಮಾಣಿಕ ಪ್ರಯತ್ನ ಮಾಡಿದ್ದೇನೆ. ಹಲವರು ಪ್ರಯತ್ನಕ್ಕೆ ಪೂರಕವಾದ ಕೆಲಸ ಮಾಡಿದ್ದಾರೆ. ಯಾರೇ ಏನು ಮಾಡಿದರೂ ನನ್ನಿಂದ ಸಾಧ್ಯವಾದಷ್ಟು ಅನುದಾನವನ್ನು ತಂದು ಕ್ಷೇತ್ರದ ಅಭಿವೃದ್ಧಿ ಮಾಡುತ್ತೇನೆ. ಅಭಿವೃದ್ಧಿಯಲ್ಲಿ ನಾನು ಎಂದಿಗೂ ರಾಜಕೀಯ ಮಾಡಿಲ್ಲ. ಜೆಡಿಎಸ್, ಕಾಂಗ್ರೆಸ್, ಬಿಜೆಪಿ ಸೇರಿದಂತೆ ಎಲ್ಲಾ ಪಕ್ಷದ ಕಾರ್ಯಕರ್ತರು ನನ್ನ ಬಳಿಗೆ ಬರುತ್ತಾರೆ. ನನ್ನ ಕಚೇರಿಗೆ ಬರುವವರು ಪಕ್ಷ ಯಾವುದು ಎಂದು ಕೇಳುವುದಿಲ್ಲ, ಸಹಾಯ ಮಾಡುವುದೇ ನನ್ನ ಕೆಲಸ. ಗ್ರಾಮದ ಅಭಿವೃದ್ಧಿಗೆ ಈಗಾಗಲೇ ಸಿಸಿ ರಸ್ತೆ, ಕುಡಿಯುವ ನೀರಿನ ಯೋಜನೆ ಮಾಡಲಾಗಿದೆ. ಇಂದು ಪ್ರಗತಿ ಕಾಲೋನಿ ಯೋಜನೆ ಅಡಿಯಲ್ಲಿ ಸಿಸಿ ರಸ್ತೆ ಹಾಗೂ ಅಂಬೇಡ್ಕರ್ ಭವನ ನಿರ್ಮಾಣಕ್ಕೆ ಸುಮಾರು ₹ 20 ಲಕ್ಷ ವೆಚ್ಚದಲ್ಲಿ ಭೂಮಿ ಪೂಜೆ ನೆರವೇರಿಸಲಾಗಿದೆ. ಬಡ ಹಾಗೂ ಮಹಿಳಾ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಶಾಲೆಯನ್ನು ಉನ್ನತಿಕರಿಸಲಾಗಿದೆ. ಶಿಕ್ಷಣದ ಅಭಿವೃದ್ಧಿಗೆ ಎಲ್ಲರ ಸಹಕಾರದ ಅವಶ್ಯಕತೆಯಿದೆ ಎಂದು ಹೇಳಿದರು.ಕೆಪಿಸಿಸಿ ರಾಜ್ಯ ಪ್ರಧಾನ ಕಾರ್ಯದರ್ಶಿ ಡಾ.ಪ್ರಭುಗೌಡ ಲಿಂಗದಳ್ಳಿ ಚಬನೂರ ಮಾತನಾಡಿ, ಗ್ರಾಮದ ಶಾಲೆಯ ಸಲುವಾಗಿ ಗ್ರಾಮದ ಹಿರಿಯರ ಸ್ನೇಹ ಬಳಗದ ನಿವೇದನೆ ಹಾಗೂ ನಮ್ಮೆಲ್ಲರ ಮನವಿಗೆ ಸರ್ಕಾರದ ಮಟ್ಟದಲ್ಲಿ ಶಾಸಕರು, ಉಸ್ತುವಾರಿ ಸಚಿವರು ಪ್ರಯತ್ನಿಸಿ ಗ್ರಾಮಕ್ಕೆ ಪ್ರೌಢಶಾಲೆ ಮಂಜೂರಾತಿ ನೀಡಿದ್ದಾರೆ. ಬಡ ಮಕ್ಕಳ ಶೈಕ್ಷಣಿಕ ಸರ್ವಾಂಗೀಣ ಅಭಿವೃದ್ಧಿಗೆ ಪೂರಕವಾಗಲಿದೆ. ಮುಂದಿನ ದಿನಗಳಲ್ಲಿ ಕಾಲೇಜು, ಡಿಗ್ರಿ ಕಾಲೇಜು ಶಿಕ್ಷಣ ಪಡೆಯುವಂತಾಗಲಿ ಎಂದು ಶುಭ ಹಾರೈಸಿದರು.ಸಿಂದಗಿ ಕ್ಷೇತ್ರ ಶಿಕ್ಷಣಾಧಿಕಾರಿ ಮಾಹಾಂತೇಶ ಯಡ್ರಾಮಿ ಮಾತನಾಡಿ, ಶಾಲೆಯ ಕುರಿತು ಮಾತನಾಡಿ ಶಾಲೆಯ ಸೌಲಭ್ಯಗಳನ್ನು ಸದುಪಯೋಗಪಡಿಸಿಕೊಳ್ಳಲು ಗ್ರಾಮಸ್ಥರಿಗೆ ಕರೆ ನೀಡಿದರು. ಸಾನಿಧ್ಯವನ್ನು ಚಳಕಾಪುರ ಸಿದ್ದಾರೂಢ ಮಠದ ಶ್ರೀ ಶಂಕರಾನಂದ ಮಹಾಸ್ವಾಮಿಗಳು ವಹಿಸಿದ್ದರು. ಹಿರೇಮಠದ ಬಸಲಿಂಗಯ್ಯ ಗದಗಿಮಠ ವಹಿಸಿದ್ದರು.ಈ ಸಂದರ್ಭದಲ್ಲಿ ಎಸ್‌ಡಿಎಂಸಿ ಅಧ್ಯಕ್ಷ ವೀರಣ್ಣ ಗಾಣಿಗೇರ, ಉಪಾಧ್ಯಕ್ಷ ಶಿವಕುಮಾರ ಗೊಬ್ಬರ, ಪಿಕೆಪಿಎಸ್ ಅಧ್ಯಕ್ಷ ಜಗದೀಶ ಪಾಟೀಲ, ಎಸ್.ಎನ್.ಬಸವರಡ್ಡಿ, ಎಂ.ಬಿ.ಹರ್ಕಲ್, ಎಸ್.ಎಂ.ನಾಗಾವಿ, ಶಿವಾನಂದ ಕೊಳ್ಳಾರಿ, ತಿಪ್ಪಣ್ಣ ಹೆಬ್ಬಾಳ, ಶಿವಾನಂದ ಬಸವಪಟ್ಟಣ, ನಿಂಗಣ್ಣ ಕಲ್ಲೂರ, ಸೋಲಾಪುರ, ಸಂಗಮೇಶ ದಂಡೋತಿ, ಮಹೆಬೂಬ ಖಾಜಿ, ಕಮಲಸಾ ಕಾಟಮನಹಳ್ಳಿ, ಕಾಶಿಂಪಟೇಲ ಬಡೇಗರ, ಬಾಬು ನದಾಫ್, ಅಕ್ಷಯ ಗೊಬ್ಬರ, ರಾಜು ಕಂಠಿ ಸೇರಿದಂತೆ ಅಧಿಕಾರಿಗಳು,ಶಿಕ್ಷಕರು, ಗ್ರಾಪಂ ಸದಸ್ಯರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಸಿದ್ದರಾಮಯ್ಯ ಹಿರೇಮಠ ನಿರೂಪಿಸಿದರು. ಜಗದೀಶ ಪಾಟೀಲ ವಂದಿಸಿದರು.

PREV

Recommended Stories

ಮಲೆನಾಡು, ಕರಾವಳಿಯಲ್ಲಿ ಮಳೆ : ಜನಜೀವನ ಅಸ್ತವ್ಯಸ್ತ
ಚಿತ್ತಾಪುರದಲ್ಲಿ ನ.2ರಂದು ಪಥ ಸಂಚಲನ: ಅನುಮತಿ ಕೋರಿ ಹೊಸದಾಗಿ ಅರ್ಜಿ