ಕನ್ನಡಪ್ರಭ ವಾರ್ತೆ ಕುಂದಾಪುರ
ದಕ್ಷಿಣ ಭಾರತದ ಖ್ಯಾತ ಸಂಗೀತ ನಿರ್ದೇಶಕ ಇಳಯರಾಜ ಸೋಮವಾರ ಕೊಲ್ಲೂರು ದೇಗುಲಕ್ಕೆ ಭೇಟಿ ನೀಡಿ ಮೂಕಾಂಬಿಕೆಯ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು.ಮಧ್ಯಾಹ್ನದ ವೇಳೆಗೆ ಆಗಮಿಸಿದ ಅವರನ್ನು ದೇವಸ್ಥಾನದ ಆಡಳಿತ ಸಮಿತಿ ವತಿಯಿಂದ ಸ್ವಾಗತಿಸಲಾಯಿತು. ಬಳಿಕ ಸಂಜೆ ದೇವಸ್ಥಾನದಲ್ಲಿ ನಡೆದ ನವಚಂಡಿ ಯಾಗದಲ್ಲಿ ಇಳಯರಾಜ ಭಾಗಿಯಾದರು.
ಕೊಲ್ಲೂರು ದೇವಿಯ ಪರಮ ಭಕ್ತ ಇಳಯರಾಜ ಸಾಮಾನ್ಯವಾಗಿ ಪ್ರತಿವರ್ಷವೂ ಕೊಲ್ಲೂರಿಗೆ ಭೇಟಿ ನೀಡುತ್ತಾರೆ. ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಕೆ. ಬಾಬು ಶೆಟ್ಟಿ, ಸದಸ್ಯರಾದ ರಘುರಾಮ ದೇವಾಡಿಗ, ಕಾರ್ಯನಿರ್ವಹಣಾಧಿಕಾರಿ ಪ್ರಶಾಂತ್ ಶೆಟ್ಟಿ ಅವರನ್ನು ಗೌರವಿಸಿದರು.................ಕೆ.ಗೋವಿಂದ ಭಟ್‌ಗೆ ‘ಯಕ್ಷವಿದ್ಯಾ ಮಾನ್ಯ’ ಪ್ರಶಸ್ತಿಉಡುಪಿಯ ಯತಿಶ್ರೇಷ್ಠ ಶ್ರೀ ವಿದ್ಯಾಮಾನ್ಯ ತೀರ್ಥ ಶ್ರೀಪಾದರ ಹೆಸರಿನಲ್ಲಿ ಅವರ ಕರಕಮಲ ಸಂಜಾತ ಪಲಿಮಾರು ಮಠಾಧೀಶ ಶ್ರೀ ವಿದ್ಯಾಧೀಶ ತೀರ್ಥ ಶ್ರೀಪಾದರು ಅನುಗ್ರಹ ಪೂರ್ವಕವಾಗಿ ಕೊಡ ಮಾಡುವ ‘ಯಕ್ಷ ವಿದ್ಯಾಮಾನ್ಯ’ ಪ್ರಶಸ್ತಿಗೆ ತೆಂಕುತಿಟ್ಟಿನ ಶ್ರೇಷ್ಠ ಕಲಾವಿದ ಕೆ. ಗೋವಿಂದ ಭಟ್ ಅವರನ್ನು ಆಯ್ಕೆ ಮಾಡಲಾಗಿದೆ.ಗೋವಿಂದ ಭಟ್ಟರು ಕೂಡ್ಲು, ಇರಾ, ಸುರತ್ಕಲ್ ಮತ್ತು ದೀರ್ಘಕಾಲ ಧರ್ಮಸ್ಥಳ ಮೇಳದಲ್ಲಿ ಪ್ರಧಾಾನ ವೇಷಧಾರಿಯಾಗಿ ಒಟ್ಟು ಸುಮಾರು ಆರೂವರೆ ದಶಕಗಳಿಗೂ ಅಧಿಕ ಕಾಲ ಯಕ್ಷ ತಿರುಗಾಟ ಮಾಡಿದ್ದಾರೆ. ಎಲ್ಲಾ ರೀತಿಯ ವೇಷಗಳನ್ನು ಮಾಡಿರುವ ಅವರು ಹಲವು ಪೌರಾಣಿಕ ಪಾತ್ರಗಳನ್ನು ಅಪೂರ್ವವಾಗಿ ಚಿತ್ರಿಸಿದ್ದಾರೆ. ಯಕ್ಷಗುರುಗಳಾಗಿ ನೂರಾರು ವಿದ್ಯಾರ್ಥಿಗಳನ್ನು ಈ ಕ್ಷೇತ್ರಕ್ಕೆ ನೀಡಿದ ಇವರಿಗೆ ಏ.೧೦ ರಂದು ಪೂರ್ವಾಹ್ನ ೧೦.೩೦ಕ್ಕೆ ಪಲಿಮಾರಿನಲ್ಲಿ ನಡೆಯಲಿರುವ ಶ್ರೀ ವಿದ್ಯಾಮಾನ್ಯ ತೀರ್ಥರ ಆರಾಧನಾ ಮಹೋತ್ಸವದ ಸಂದರ್ಭದಲ್ಲಿ ಪುರಸ್ಕಾರವನ್ನು ಪ್ರಶಸ್ತಿ ಫಲಕ ಮತ್ತು ರು. ೫೦ ಸಾವಿರ ನಿಧಿಯೊಂದಿಗೆ ಪ್ರದಾನ ಮಾಡಲಾಗುವುದು ಎಂದು ಪಲಿಮಾರು ಮಠದ ದಿವಾನರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.