ಕನ್ನಡಪ್ರಭವಾರ್ತೆ ಸುಂಟಿಕೊಪ್ಪ
ಚೆಟ್ಟಳ್ಳಿ ಪ್ರೌಢಶಾಲೆ ಸಭಾಂಗಣದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಭಿವೃದ್ಧಿ ಯೋಜನೆ ಮಡಿಕೇರಿ ತಾಲೂಕು ಬಿ ಸಿ ಟ್ರಸ್ಟ್ ಹಾಗೂ ಸುಂಟಿಕೊಪ್ಪ ವಲಯದ ವತಿಯಿಂದ ಸ್ವಾಸ್ಥ್ಯ ಸಂಕಲ್ಪ ಮಾಹಿತಿ ಕಾರ್ಯಾಗಾರದಲ್ಲಿ ಅವರು ಮಾತನಾಡಿದರು. ದುಶ್ಚಟ ನಮ್ಮನ್ನು ಆರೋಗ್ಯ ಕುಟುಂಬ ಮತ್ತು ಸಮಾಜದಿಂದ ದೂರವಿರಿಸುತ್ತದೆ. ಮೊಬೈಲ್ ಸೋಶಿಯಲ್ ಮೀಡಿಯಾ ಅತಿಯಾದ ಬಳಕೆ ನಿದ್ರಾಹೀನತೆ, ಏಕಾಗ್ರತೆ ಕೊರತೆ ಉಂಟಾಗುತ್ತದೆ. ದುಶ್ಚಟಗಳಿಂದ ಸಮಾಜದಲ್ಲಿ ಗೌರವ ಕಡಿಮೆಯಾಗುತ್ತದೆ ಎಂದು ಮಾಹಿತಿ ನೀಡಿದರು.ಪ್ರಭಾರ ಮುಖ್ಯೋಪಾಧ್ಯಾಯ ಸತ್ಯನಾರಾಯಣ ಉದ್ಘಾಟಿಸಿದರು. ಸಂಪನ್ಮೂಲ ವ್ಯಕ್ತಿ ವಕೀಲ ರೇವತಿ ಮಾತನಾಡಿ ಲೈಂಗಿಕ ಕಿರುಕುಳ ಬಂದಲ್ಲಿ ತಕ್ಷಣವೇ ೧೦೯೮ ಕರೆ ಮಾಡಿ ಮಾಹಿತಿ ಹಂಚಿಕೊಳ್ಳಿ, ನಿಮ್ಮ ಸುತ್ತ ಮುತ್ತಲಿನಲ್ಲಿ ಬಾಲ್ಯ ವಿವಾಹಕ್ಕೆ ಆಸ್ಪದ ಕೊಡಬಾರದು ಎಂದು ತಿಳಿಸಿದರು.
ಒಕ್ಕೂಟ ಅಧ್ಯಕ್ಷೆ ಕಾಶಿ ಅಧ್ಯಕ್ಷತೆ ವಹಿಸಿದ್ದರು. ಪದಾಧಿಕಾರಿಗಳಾದ ಆಶಾ, ಮಂಜುಳಾ, ಉದಯ, ಶಾಲಾ ಶಿಕ್ಷಕರು ಇದ್ದರು. ವಲಯ ಮೇಲ್ವಿಚಾರಕ ಸಂತೋಷ ನಾಯ್ಕ್ ನಿರೂಪಿಸಿದರು. ಶಿಕ್ಷಕಿ ಯು.ಸುನಂದಾ ಸ್ವಾಗತಿಸಿದರು. ಸೇವಾಪ್ರತಿನಿಧಿ ಚೆಲ್ವಿ ವಂದಿಸಿದರು.