ಸಂಸತ್ ಅಕ್ರಮ ಪ್ರವೇಶ<bha>;</bha> ದೇಶವೇ ತಲೆ ತಗ್ಗಿಸುವಂತಾಗಿದೆ- ಉಗ್ರಪ್ಪ

KannadaprabhaNewsNetwork |  
Published : Dec 16, 2023, 02:00 AM IST
ಉಗ್ರಪ್ಪ | Kannada Prabha

ಸಾರಾಂಶ

ಸಂಸತ್ ರಕ್ಷಣೆ ಮಾಡದ ಪ್ರಧಾನಮಂತ್ರಿಗಳಿಂದ ಈ ದೇಶದ ರಕ್ಷಣೆ ಹೇಗೆ ಎಂಬ ಪ್ರಶ್ನೆ ಮೂಡುತ್ತಿದೆ. ದೇಶದ ಕಾವಲುಗಾರ ಪ್ರಧಾನಿ ನರೇಂದ್ರ ಮೋದಿ ಅವರು ಸಂಸತ್ ರಕ್ಷಣೆ ಮಾಡಲು ವಿಫಲರಾಗಿರುವುದು ಕಂಡುಬರುತ್ತಿದೆ.

ಬಳ್ಳಾರಿ: ಸಂಸತ್ ಅಕ್ರಮ ಪ್ರವೇಶ ಭದ್ರತಾ ವೈಫಲ್ಯಕ್ಕೆ ಹಿಡಿದ ಕನ್ನಡಿಯಾಗಿದ್ದು, ಈ ಪ್ರಕರಣದಿಂದ ಇಡೀ ದೇಶವೇ ತಲೆ ತಗ್ಗಿಸುವಂತಾಗಿದೆ ಎಂದು ಮಾಜಿ ಸಂಸದ ವಿ.ಎಸ್. ಉಗ್ರಪ್ಪ ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಸಂಸತ್ ಒಳಗೆ ಪ್ರವೇಶವಾಗಲು ನಾಲ್ಕು ಹಂತದ ತಪಾಸಣೆ ಇರುತ್ತದೆ. ಎಲ್ಲ ತಪಾಸಣೆಗಳನ್ನು ಭೇದಿಸಿಕೊಂಡು ಯುವಕರು ಒಳ ನುಗ್ಗಿದ್ದಾರೆ ಎಂದಾದರೆ ಬೇಹುಗಾರಿಕೆ ಇಲಾಖೆ ಏನು ಮಾಡುತ್ತಿತ್ತು. ದೇಶದಲ್ಲಿ ಎಲ್ಲೋ ನಡೆಯುವ ದಾಳಿಯ ಬಗ್ಗೆ ಮೊದಲೇ ಬೇಹುಗಾರಿಕೆ ಇಲಾಖೆಗೆ ಮಾಹಿತಿ ಇರುತ್ತದೆ. ಆದರೆ, ಸಂಸತ್ ನಲ್ಲಿ ನಡೆಯುವ ದಾಳಿಯ ಬಗ್ಗೆ ಯಾಕೆ ಮಾಹಿತಿ ಇರಲಿಲ್ಲ ಎಂದು ಪ್ರಶ್ನಿಸಿದರು.

ಇಡೀ ಘಟನೆಯ ಬಳಿಕದ ಬೆಳವಣಿಗೆ ನೋಡಿದರೆ ಬಿಜೆಪಿ ನಾಯಕರು ಏನೂ ಆಗಿಲ್ಲ ಎಂಬಂತೆ ವರ್ತಿಸುತ್ತಿದ್ದಾರೆ. ಸಂಸತ್ ರಕ್ಷಣೆ ಮಾಡದ ಪ್ರಧಾನಮಂತ್ರಿಗಳಿಂದ ಈ ದೇಶದ ರಕ್ಷಣೆ ಹೇಗೆ ಎಂಬ ಪ್ರಶ್ನೆ ಮೂಡುತ್ತಿದೆ. ದೇಶದ ಕಾವಲುಗಾರ ಪ್ರಧಾನಿ ನರೇಂದ್ರ ಮೋದಿ ಅವರು ಸಂಸತ್ ರಕ್ಷಣೆ ಮಾಡಲು ವಿಫಲರಾಗಿರುವುದು ಕಂಡುಬರುತ್ತಿದೆ ಎಂದರಲ್ಲದೆ, ಈ ಪ್ರಕರಣದಲ್ಲಿ ಮೈಸೂರು ಸಂಸದ, ಬೇಹುಗಾರಿಕೆ ಇಲಾಖೆ ಹಿರಿಯ ಅಧಿಕಾರಿಗಳು, ಪ್ರಧಾನಮಂತ್ರಿಗಳು ಹಾಗೂ ಕೇಂದ್ರ ಗೃಹ ಸಚಿವರು ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿದರು.

ಕಾಂಗ್ರೆಸ್ ಮುಖಂಡ ವೆಂಕಟೇಶ್ ಹೆಗಡೆ, ಕಲ್ಲುಕಂಬ ಪಂಪಾಪತಿ ಸುದ್ದಿಗೋಷ್ಠಿಯಲ್ಲಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

5 ಪಾಲಿಕೆಗಳಲ್ಲಿ ಜಯಭೇರಿ ಬಾರಿಸಲು ಬಿಜೆಪಿಗೆ ಒಳ್ಳೆ ಅವಕಾಶ
ಸಿಎಂ ಗಾದಿ ಸಂಚಲನ : ನಾನು ಸಿಎಂ ಆಗಲಿ ಎಂಬುದು ಜನರ ಬಯಕೆ ಎಂದರು ಡಿಕೆಶಿ