ಗಾರೆನರಸಯ್ಯನಕಟ್ಟೆಯಲ್ಲಿ ಅಕ್ರಮ ಕಟ್ಟಡ ನಿರ್ಮಾಣಕ್ಕೆ ಚಾಲನೆ

KannadaprabhaNewsNetwork |  
Published : Jan 28, 2026, 01:30 AM IST
್ಿ್ಿ್ಿ | Kannada Prabha

ಸಾರಾಂಶ

ತುಮಕೂರು ನಗರದ ಸಪ್ತಗಿರಿ ಬಡಾವಣೆಯಲ್ಲಿರುವ ಗಾರೆನರಸಯ್ಯನ ಕಟ್ಟೆಯ ಖರಾಬು ಜಾಗದಲ್ಲಿ ಅಕ್ರಮ ಕಟ್ಟಡ ನಿರ್ಮಾಣವಾಗುತ್ತಿದ್ದು ತುಮಕೂರು ಮಹಾನಗರಪಾಲಿಕೆಯ ಆಯುಕ್ತರು ತಕ್ಷಣ ಎಚ್ಚೆತ್ತುಕೊಂಡು ಕಟ್ಟಡ ನಿರ್ಮಾಣ ಸ್ಥಗಿತಗೊಳಿಸಬೇಕೆಂದು ವನ್ಯಜೀವಿ ಜಾಗೃತಿ ನಿಸರ್ಗ ಸಂಸ್ಥೆಯ ಅಧ್ಯಕ್ಷ ಬಿ.ವಿ.ಗುಂಡಪ್ಪ ಒತ್ತಾಯಿಸಿದ್ದಾರೆ.

ಕನ್ನಡಪ್ರಭ ವಾರ್ತೆ, ತುಮಕೂರುತುಮಕೂರು ನಗರದ ಸಪ್ತಗಿರಿ ಬಡಾವಣೆಯಲ್ಲಿರುವ ಗಾರೆನರಸಯ್ಯನ ಕಟ್ಟೆಯ ಖರಾಬು ಜಾಗದಲ್ಲಿ ಅಕ್ರಮ ಕಟ್ಟಡ ನಿರ್ಮಾಣವಾಗುತ್ತಿದ್ದು ತುಮಕೂರು ಮಹಾನಗರಪಾಲಿಕೆಯ ಆಯುಕ್ತರು ತಕ್ಷಣ ಎಚ್ಚೆತ್ತುಕೊಂಡು ಕಟ್ಟಡ ನಿರ್ಮಾಣ ಸ್ಥಗಿತಗೊಳಿಸಬೇಕೆಂದು ವನ್ಯಜೀವಿ ಜಾಗೃತಿ ನಿಸರ್ಗ ಸಂಸ್ಥೆಯ ಅಧ್ಯಕ್ಷ ಬಿ.ವಿ.ಗುಂಡಪ್ಪ ಒತ್ತಾಯಿಸಿದ್ದಾರೆ.

ಕರ್ನಾಟಕ ಸರ್ಕಾರದ ಕೆರೆ ಸಂರಕ್ಷಣೆ ಮತ್ತು ಅಭಿವೃದ್ಧಿ ಪ್ರಾಧಿಕಾರದ ನಿಯಮದ ಪ್ರಕಾರ ಯಾವುದೇ ಕೆರೆಕಟ್ಟೆ ಅಂಗಳದಿಂದ 30 ಮೀಟರ್ ಒಳಗಿನ ಬಪರ್ ವಲಯದಲ್ಲಿ ಯಾವುದೇ ಅಭಿವೃದ್ಧಿ ಚಟುವಟಿಕೆಗಳು ಮತ್ತು ಕಟ್ಟಡಗಳನ್ನು ನಿರ್ಮಾಣ ಮಾಡಲು ಅವಕಾಶವಿಲ್ಲ. ಗಾರೆನರಸಯ್ಯನ ಕಟ್ಟೆ 19.1 ಎಕರೆ ವಿಸ್ತೀರ್ಣ ಹೊಂದಿದ್ದು, ಹೊಸ ಕಾನೂನಿನ ಪ್ರಕಾರ ಇದರ ಕೆರೆ ಅಂಗಳದಿಂದ 12 ಮೀಟರ್ ಬಪರ್ ವಲಯದಲ್ಲಿ ಕಟ್ಟಡ ನಿರ್ಮಾಣ ಮಾಡಲು ಅವಕಾಶವಿಲ್ಲ. ಆದರೆ ಮಹಾನಗರ ಪಾಲಿಕೆಯವರು ಇಲ್ಲಿ ಕಟ್ಟಡ ಕಟ್ಟಲು ಪರವಾನಗಿ ಕೊಟ್ಟಿರುವುದು ಸರ್ಕಾರ ಹಾಗೂ ನ್ಯಾಯಾಲಯದ ಅದೇಶದ ಉಲ್ಲಂಘನೆ ಮಾಡಿದ್ದಾರೆ ಎಂದರು. ಗಾರೆನರಸಯ್ಯನ ಕಟ್ಟೆ ನೂರಾರು ವಲಸೆ ಬರುವ ಹಾಗೂ ಸ್ಥಳಿಯ ಪಕ್ಷಿಗಳಿಗೆ ಆವಾಸ ಹೊದಗಿಸುತ್ತದೆ. ಅಂತರ್ಜಲ ವೃದ್ದಿಗೆ ಕಾರಣವಾದ ಈ ಕೆರೆ ಸುತ್ತಮುತ್ತಲ ಬಾಡಾವಣೆ ಜನರಿಗೆ ನೈಸರ್ಗಿಕ ಹವಾನಿಯಂತ್ರಣ ಜಾಗವಾಗಿದೆ. ಆದ್ದರಿಂದ ಮಹಾನಗರ ಪಾಲಿಕೆ ಆಯುಕ್ತರು ಬಫರ್ ವಲಯದಲ್ಲಿ ಅಕ್ರಮ ಕಟ್ಟಡ ನಿರ್ಮಾಣ ಮಾಡಲು ನೀಡಿರುವ ಪರವಾನಗಿ ರದ್ದುಗೊಳಿಸಬೇಕು ಮತ್ತು ಪರವಾನಗಿ ನೀಡಲು ಸಹಕರಿಸಿರುವ ಸಿಬ್ಬಂದಿಯ ಮೇಲೆ ಸಿಸ್ತು ಕ್ರಮ ತೆಗೆದುಕೊಂಡು ಕೆರೆಯನ್ನು ಸಂರಕ್ಷಿಸಬೇಕೆಂದು ಬಿ.ವಿ.ಗುಂಡಪ್ಪ ಪ್ರಕಟಣೆಯಲ್ಲಿ ಒತ್ತಾಯಿಸಿದ್ದಾರೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಮುಖ್ಯಮಂತ್ರಿ ಸಿದ್ದರಾಮಯ್ಯ ನನ್ನ ಪಾಲಿನ ಶ್ರೀರಾಮ : ಶಾಸಕ ಪ್ರದೀಪ್‌ ಈಶ್ವರ್‌
ಜಿ ರಾಮ್‌ ಜಿ ವಿರುದ್ಧ ಸಿಡಿದೆದ್ದ ಕಾಂಗ್ರೆಸ್‌ ಪಡೆ - ದುಡಿವ ಕೈಗಳ ಅನ್ನ ಕಸಿವ ಕಾಯ್ದೆ