ಕೆರೆಗೆ ಅಕ್ರಮವಾಗಿ ಪಂಪ್ ಸೆಟ್ ಅಳವಡಿಸಿ ತೋಟ, ಗದ್ದೆಗೆ ನೀರು: ಆಕ್ರೋಶ

KannadaprabhaNewsNetwork |  
Published : Jan 24, 2024, 02:06 AM IST
ಮುಂಡಗೋಡ: ತಾಲೂಕಿನ ಮಳಗಿ(ಜನಗೇರಿ) ಸರ್ವೇ ೩೫ ರಲ್ಲಿರುವ ಶೆಟ್ಟರ ಕೆರೆಗೆ ಅಕ್ರಮವಾಗಿ ಪಂಪ್ ಸೆಟ್ ಅಳವಡಿಸಿ ತೋಟ, ಗದ್ದೆ ಹಾಗೂ ವಾಣಿಜ್ಯ ಉತ್ಪನ್ನಗಳಿಗೆ ನೀರು ಬಳಸಿಕೊಳ್ಳುತ್ತಿರುವುದು ಸಾರ್ವಜನಿಕರ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. | Kannada Prabha

ಸಾರಾಂಶ

ಅರಣ್ಯದಂಚಿನಲ್ಲಿರುವ ಈ ಕೆರೆ ಏನಾದರೂ ಖಾಲಿಯಾದರೆ ಪ್ರಾಣಿ ಪಕ್ಷಿಗಳಿಗೂ ಕೂಡ ಕುಡಿಯಲು ನೀರಿಲ್ಲಂತಾಗಿ ತೊಂದರೆ ಅನುಭವಿಸಬೇಕಾಗುತ್ತದೆ, ಹಾಗಾಗಿ ತಕ್ಷಣ ಈ ಬಗ್ಗೆ ಸಂಬಂಧಿಸಿ ಅಧಿಕಾರಿಗಳು ಪರಿಶೀಲಿಸಿ ತಪ್ಪಿತಸ್ಥರ ಮೇಲೆ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಸಾರ್ವಜನಿಕರು ಆಗ್ರಹ

ಮುಂಡಗೋಡ:

ತಾಲೂಕಿನ ಮಳಗಿ ಗ್ರಾಪಂ ವ್ಯಾಪ್ತಿಯ ಜನಗೇರಿ ಸರ್ವೇ ನಂ.೩೫ ರಲ್ಲಿರುವ ಶೆಟ್ಟರ ಕೆರೆಗೆ ಅಕ್ರಮವಾಗಿ ಪಂಪ್ ಸೆಟ್ ಅಳವಡಿಸಿ ತೋಟ, ಗದ್ದೆ ಹಾಗೂ ವಾಣಿಜ್ಯ ಉತ್ಪನ್ನಗಳಿಗೆ ನೀರು ಬಳಸಿಕೊಳ್ಳುತ್ತಿರುವುದು ಸಾರ್ವಜನಿಕರ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ.

ಗ್ರಾಪಂ ಸದಸ್ಯೆಯೊಬ್ಬರ ಪತಿಯೇ ಈ ರೀತಿ ಅಕ್ರಮವಾಗಿ ಪಂಪ್ ಸೆಟ್ ಮೂಲಕ ಕೆರೆಯ ನೀರು ಬಳಸಿಕೊಳ್ಳುತ್ತಿರುವುದು ಎನ್ನಲಾಗಿದ್ದು, ಜನಪ್ರತಿನಿಧಿಯಾಗಿ ಜವಾಬ್ದಾರಿ ಸ್ಥಾನದಲ್ಲಿರುವವರ ಕುಟುಂಬಸ್ಥರೇ ಇಂತಹ ಕೆಲಸ ಮಾಡುತ್ತಿರುವುದು ಎಷ್ಟು ಸರಿ ಎಂದು ಪ್ರಶ್ನಿಸುತ್ತಿರುವ ಸಾರ್ವಜನಿಕರು, ಸಂಬಂಧಪಟ್ಟ ಅಧಿಕಾರಿಗಳು ಈ ಬಗ್ಗೆ ಗಮನಹರಿಸುತ್ತಿಲ್ಲ ಎಂದು ಆರೋಪಿಸಿದ್ದಾರೆ.

ಈ ಬಾರಿ ಮಳೆಯ ಕೊರತೆಯಿಂದ ಅಂತರ್ಜಲ ಕ್ಷೀಣಿಸಿದ್ದು, ಬೇಸಿಗೆ ಪ್ರಾರಂಭವಾಗುವ ಪೂರ್ವದಲ್ಲಿಯೇ ಕುಡಿವ ನೀರಿಗೆ ಆಹಾರ ಏರ್ಪಡುತ್ತಿದೆ. ಇಂತಹ ಸಂದರ್ಭದಲ್ಲಿ ಅರಣ್ಯದಂಚಿನಲ್ಲಿರುವ ಈ ಕೆರೆಗೆ ಪಂಪ್ ಸೆಟ್ ಅಳವಡಿಸಿ ನೀರು ಉಪಯೋಗಿಸಿಕೊಳ್ಳಲಾಗುತ್ತಿದೆ. ಈಗಾಗಲೇ ಕೆರೆಯ ನೀರು ಅರ್ಧದಷ್ಟು ಖಾಲಿಯಾಗಿದ್ದು, ಇದೇ ರೀತಿ ನೀರು ಉಪಯೋಗಿಸಿಕೊಂಡರೆ ಕೆಲವೇ ದಿನಗಳಲ್ಲಿ ಕೆರೆ ಸಂಪೂರ್ಣ ಖಾಲಿಯಾಗುವ ಸಾಧ್ಯತೆ ಇದೆ.

ಅರಣ್ಯದಂಚಿನಲ್ಲಿರುವ ಈ ಕೆರೆ ಏನಾದರೂ ಖಾಲಿಯಾದರೆ ಪ್ರಾಣಿ ಪಕ್ಷಿಗಳಿಗೂ ಕೂಡ ಕುಡಿಯಲು ನೀರಿಲ್ಲಂತಾಗಿ ತೊಂದರೆ ಅನುಭವಿಸಬೇಕಾಗುತ್ತದೆ, ಹಾಗಾಗಿ ತಕ್ಷಣ ಈ ಬಗ್ಗೆ ಸಂಬಂಧಿಸಿ ಅಧಿಕಾರಿಗಳು ಪರಿಶೀಲಿಸಿ ತಪ್ಪಿತಸ್ಥರ ಮೇಲೆ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.

ಸರ್ಕಾರಕ್ಕೆ ಸಂಬಂಧಿಸಿದ ಕೆರೆಗಳಲ್ಲಿ ಅಕ್ರಮವಾಗಿ ಪಂಪ್ ಅಳವಡಿಸಿ ನೀರು ಪಡೆಯಲು ಅವಕಾಶವಿಲ್ಲ. ಈ ಬಗ್ಗೆ ಮಾಹಿತಿ ಪಡೆದುಕೊಂಡು ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಸಂಬಂಧಪಟ್ಟವರಿಗೆ ಸೂಚಿಸಲಾಗುವುದು ಎಂದು ತಹಸೀಲ್ದಾರ್‌ ಶಂಕರ್‌ ಗೌಡಿ ಹೇಳಿದ್ದಾರೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಶೇ.11ರಷ್ಟು ಟೊಯೋಟಾ ಕಾರುಗಳು ರಾಜ್ಯದಲ್ಲೇ ಸೇಲ್‌
ರಾಜ್ಯದಲ್ಲಿ 2 ದಿನ ಮೋಡಕವಿದ ವಾತಾವರಣ, ಮಳೆ