ಕನ್ನಡಪ್ರಭ ವಾರ್ತೆ ಹನೂರು
ತಾಲೂಕಿನ ಶ್ರೀ ಕ್ಷೇತ್ರ ಮಲೆ ಮಾದೇಶ್ವರ ಬೆಟ್ಟ ಧಾರ್ಮಿಕ ಕ್ಷೇತ್ರದಲ್ಲಿ ಅಕ್ರಮ ಮದ್ಯ ಮಾರಾಟ ದಂಧೆ ಪ್ರಕರಣವನ್ನು ಎಸ್ಪಿ ಬಿ.ಟಿ. ಕವಿತಾ ಹಾಗೂ ಅಬಕಾರಿ ವರಿಷ್ಠಾಧಿಕಾರಿ ಜಂಟಿ ಕಾರ್ಯಚರಣೆ ನಡೆಸಿ ಎಂಟು ಜನರನ್ನು ಬಂಧಿಸಿ ಐದು ಪ್ರಕರಣಗಳನ್ನು ಮಲೆಯ ಮಾದೇಶ್ವರ ಬೆಟ್ಟದಲ್ಲಿ ದಾಖಲಿಸಿ, 184 ಲೀ. ಅಕ್ರಮ ಮದ್ಯವನ್ನು ವಶಪಡಿಸಿಕೊಳ್ಳಲಾಗಿತ್ತು.
ಇಬ್ಬರ ಅಮಾನತು, ನಾಲ್ವರ ವರ್ಗಾವಣೆ: ಮಲೆ ಮಹದೇಶ್ವರ ಬೆಟ್ಟದಲ್ಲಿ ನಡೆಯುತ್ತಿದ್ದ ಅಕ್ರಮ ಮಧ್ಯ ಮಾರಾಟ ದಂಧೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್ಪಿ ಬಿ. ಟಿ. ಕವಿತಾ ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದು, ಪೊಲೀಸ್ ವೈಫಲ್ಯದಿಂದ ನಡೆಯುತ್ತಿದ್ದ ಅಕ್ರಮ ದಂಧೆಗೆ ಕಡಿವಾಣ ಹಾಕಲು ಶ್ರೀ ಕ್ಷೇತ್ರದಲ್ಲಿ ಅಕ್ರಮ ಮಧ್ಯ ಮಾರಾಟ ಮಾಡುತ್ತಿದ್ದ ಅಡ್ಡೆಗಳ ಮೇಲೆ ದಾಳಿ ಮಾಡಿ ಶಿಸ್ತು ಕ್ರಮ ಕೈಗೊಳ್ಳುವ ಮೂಲಕ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲೆಯ ಮಹದೇಶ್ವರ ಬೆಟ್ಟದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಮುಖ್ಯಪೇದೆಗಳಾದ ಮುತ್ತರಾಜು ಹಾಗೂ ಅಣ್ಣ ದೊರೆ ಅವರನ್ನು ಅಮಾನತು ಮಾಡಿ, ಅಪರಾಧ ವಿಭಾಗದ ಸಹಾಯಕ ಸಬ್ ಇನ್ಸ್‌ಪೆಕ್ಟರ್ ಚಿಕ್ಕ ಕಾಳೇಗೌಡ ಅವರನ್ನು ಚಾಮರಾಜನಗರ ಜಿಲ್ಲೆಯ ಬೇಗೂರು ಠಾಣೆಗೆ ವರ್ಗಾವಣೆ ಮಾಡಿದ್ದು, ಉಳಿದಂತೆ ಈ ಪ್ರಕರಣಕ್ಕೆ ಸಂಬಂಧಿಸಿದ ಪೊಲೀಸ್ ಪೇದೆಗಳಾದ ಗುರುಕಿರಣ್ ಚಾಮರಾಜನಗರ ಸೈಬರ್ ಠಾಣೆಗೆ, ಅಮರೇಶ್ ಚಾಮರಾಜನಗರ ಪಟ್ಟಣ ಪೊಲೀಸ್ ಠಾಣೆಗೆ, ಶ್ರೀಗಂಧ ಪೊಲೀಸ್ ಪೇದೆ ಕೊಳ್ಳೇಗಾಲ ಪಟ್ಟಣ ಠಾಣೆಗೆ ವರ್ಗಾವಣೆ ಮಾಡುವ ಮೂಲಕ ಶಿಸ್ತು ಕ್ರಮ ಕೈಗೊಂಡಿದ್ದಾರೆ.ಚುರುಕುಗೊಂಡ ಮಲೆ ಮಾದೇಶ್ವರ ಬೆಟ್ಟ ಪೊಲೀಸರು: ಮಲೆ ಮಾದೇಶ್ವರ ಬೆಟ್ಟದಲ್ಲಿ ನಡೆಯುತ್ತಿದ್ದ ಅಕ್ರಮ ಮದ್ಯ ಮಾರಾಟ ದಂಧೆಗೆ ಎಸ್ಪಿ ಕಡಿವಾಣ ಹಾಕುವ ಮೂಲಕ ಇಲ್ಲಿನ ಅಧಿಕಾರಿ, ಸಿಬ್ಬಂದಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ. ಮಲೆ ಮಾದೇಶ್ವರ ಬೆಟ್ಟದಲ್ಲಿ ಅಕ್ರಮ ಮಧ್ಯ ಮಾರಾಟ ಮಾಡಲು ಪೊಲೀಸ ಇಲಾಖೆ ಯಾವುದೇ ಕಾರಣಕ್ಕೂ ಅವಕಾಶ ನೀಡುವುದಿಲ್ಲ. ಶಿಸ್ತು ಕ್ರಮ ಕೈಗೊಳ್ಳುವ ಮೂಲಕ ಧಾರ್ಮಿಕ ಕ್ಷೇತ್ರದಲ್ಲಿ ಉತ್ತಮ ವಾತಾವರಣ ನಿರ್ಮಾಣ ಮಾಡುವ ಮೂಲಕ ಕ್ರಮ ಕೈಗೊಳ್ಳಲಿದೆ ಎಂದು ಎಸ್ಪಿ ಬಿ.ಟಿ. ಕವಿತಾ ತಿಳಿಸಿದರು.