ಕರಿಕೆ ಭಾಗದಲ್ಲಿ ಅಕ್ರಮ ಮದ್ಯ ಮಾರಾಟ : ಜಿಲ್ಲಾಧಿಕಾರಿಗಳಿಗೆ ದೂರು ನೀಡಿದ ಗ್ರಾಮಸ್ಥರು

KannadaprabhaNewsNetwork |  
Published : Apr 14, 2024, 01:47 AM IST
ಅಕ್ರಮ ಮದ್ಯ | Kannada Prabha

ಸಾರಾಂಶ

ಹಲವು ಗ್ರಾಮಸ್ಥರು ಸಹಿ ಮಾಡಿರುವ ಮನವಿ ಪತ್ರವನ್ನು ಜಿಲ್ಲಾಡಳಿತಕ್ಕೆ ಪ್ರಮುಖರು ನೀಡಿದರು. ಅಕ್ರಮ ಮದ್ಯ ಮಾರಾಟದಿಂದ ಆಗುವ ದುಷ್ಪರಿಣಾಮಗಳ ಬಗ್ಗೆ ವಿವರಿಸಿದರು.

ಕನ್ನಡಪ್ರಭ ವಾರ್ತೆ ಮಡಿಕೇರಿ

ಕರಿಕೆ ಗ್ರಾಮದಲ್ಲಿ ಅಕ್ರಮವಾಗಿ ದುಪ್ಪಟ್ಟು ಬೆಲೆಗೆ ಮದ್ಯ ಮಾರಾಟ ಮಾಡಲಾಗುತ್ತಿದೆ ಎಂದು ಆರೋಪಿಸಿ ಮತ್ತು ತಪ್ಪಿತಸ್ಥರ ವಿರುದ್ಧ ತಕ್ಷಣ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿ ಕರಿಕೆ ವ್ಯಾಪ್ತಿಯ ಕುಂಡತ್ತಿಕಾನ, ಬಾಳೆಬಳಪ್ಪು, ಕುಡಿಯಂಗಲ್ಲು ಸುತ್ತಮುತ್ತಲ ಗ್ರಾಮಸ್ಥರು ಜಿಲ್ಲಾಧಿಕಾರಿಗಳಿಗೆ ದೂರು ಸಲ್ಲಿಸಿದ್ದಾರೆ.

ಹಲವು ಗ್ರಾಮಸ್ಥರು ಸಹಿ ಮಾಡಿರುವ ಮನವಿ ಪತ್ರವನ್ನು ಜಿಲ್ಲಾಡಳಿತಕ್ಕೆ ನೀಡಿದ ಪ್ರಮುಖರು ಅಕ್ರಮ ಮದ್ಯ ಮಾರಾಟದಿಂದ ಗ್ರಾಮದಲ್ಲಾಗುತ್ತಿರುವ ದುಷ್ಪರಿಣಾಮಗಳ ಬಗ್ಗೆ ವಿವರಿಸಿದರು.

ಜನವಸತಿ ಪ್ರದೇಶದ ಕೆಲವು ಮನೆ ಮತ್ತು ಅಂಗಡಿಯಲ್ಲಿ ಅಕ್ರಮವಾಗಿ ಮದ್ಯವನ್ನು ದುಪ್ಪಟ್ಟು ದರದಲ್ಲಿ ಮಾರಾಟ ಮಾಡಲಾಗುತ್ತಿದೆ. ಈ ದಂದೆ ನಿರಂತರವಾಗಿ ನಡೆಯುತ್ತಿದ್ದು, ಸಂಬಂಧಪಟ್ಟ ಇಲಾಖೆಗೆ ದೂರು ನೀಡಿದರೆ ದಂದೆಕೋರರು ಅಧಿಕಾರಿಗಳು ಸ್ಥಳಕ್ಕೆ ಬರುವ ಮಾಹಿತಿ ಪಡೆದುಕೊಂಡು ಎಚ್ಚೆತ್ತುಕೊಳ್ಳುತ್ತಿದ್ದಾರೆ. ಸಾಕ್ಷಿ ಸಹಿತ ಎಲ್ಲೂ ಸಿಕ್ಕಿ ಹಾಕಿಕೊಳ್ಳುತ್ತಿಲ್ಲ ಎಂದು ಆರೋಪಿಸಿದರು.

ಈ ಭಾಗದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಕೂಲಿ ಕಾರ್ಮಿಕರೇ ಇದ್ದು, ದುಡಿದ ಹಣವನ್ನು ದುಪ್ಪಟ್ಟು ದರದ ಅಕ್ರಮ ಮದ್ಯಕ್ಕಾಗಿ ಖರ್ಚು ಮಾಡುತ್ತಿದ್ದಾರೆ. ಇದರಿಂದ ಮಹಿಳೆಯರು ಹಾಗೂ ಮಕ್ಕಳ ಜೀವನ ಸಂಕಷ್ಟಕ್ಕೆ ಸಿಲುಕುತ್ತಿದೆ. ಕುಂಡತ್ತಿಕಾನ, ಬಾಳಬಳಪ್ಪು, ಕುಡಿಯಂಗಲ್ಲು, ಆಲತ್ತಿಕಡವು, ಚೆತ್ತುಕಾಯ ಚೇರಿ ಮೊದಲಾದ ಕಡೆ ಮನೆ ಮತ್ತು ಸಣ್ಣ ಅಂಗಡಿಗಳಲ್ಲಿ ಮದ್ಯ ಮಾರಾಟ ಮಾಡಲಾಗುತ್ತಿದೆ. ಈ ಬಗ್ಗೆ ಗ್ರಾಮಸಭೆಗಳಲ್ಲಿ ಗಮನ ಸೆಳೆದಿದ್ದರು ಯಾವುದೇ ಕ್ರಮ ಕೈಗೊಂಡಿಲ್ಲ. ಅಲ್ಲದೆ ಈ ಬಗ್ಗೆ ಸಂಬಂಧಪಟ್ಟ ಇಲಾಖೆಗಳಿಗೆ ಮಾಹಿತಿ ನೀಡಿದರೂ ಸ್ಪಂದನೆ ದೊರೆತ್ತಿಲ್ಲ ಆರೋಪಿಸಿದ ಗ್ರಾಮಸ್ಥರು, ತಕ್ಷಣ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಮನವಿ ಮಾಡಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಅನುದಾನಿತ ಪಿಯು ಕಾಲೇಜು ನಿವೃತ್ತರ ಗಳಿಕೆ ರಜೆಗೆ 30 ಕೋಟಿ ರು.
ಮೇಲ್ಮನೆಗೆ ಪತ್ರಕರ್ತರ ಕರೆತರಲು ಎಂಎಲ್‌ಸಿ ಆಫರ್‌!