ಕನ್ನಡಪ್ರಭ ವಾರ್ತೆ ಬೆಳಗಾವಿ ಮಹಾರಾಷ್ಟ್ರ ವಿಧಾನಸಭಾ ಚುನಾವಣೆಯನ್ನು ಗುರಿಯಾಗಿಸಿ ಅಕ್ರಮವಾಗಿ ಗೋವಾ ಮದ್ಯವನ್ನು ಸಾಗಾಟ ಮಾಡುತ್ತಿದ್ದ ಜಾಲವನ್ನು ಬೆಳಗಾವಿ ಮಾಳಮಾರುತಿ ಪೊಲೀಸರು ಭೇದಿಸಿದ್ದಾರೆ. ಯಾವುದೇ ದಾಖಲೆಗಳಿಲ್ಲದೆ ಗೋವಾ ರಾಜ್ಯದಲ್ಲಿ ತಯಾರಾದ ಮದ್ಯವನ್ನು ತುಂಬಿಕೊಂಡು ಸಾಗಿಸುತ್ತಿದ್ದ ಲಾರಿಯನ್ನು ಮಾಳಮಾರುತಿ ಪೊಲೀಸರು ಕಾರ್ಯಾಚರಣೆ ನಡೆಸಿ ವಶಕ್ಕೆ ಪಡೆದಿದ್ದು, ಲಾರಿಯ ಚಾಲಕನನ್ನು ಬಂಧಿಸಿದ್ದಾರೆ.
ಕನ್ನಡಪ್ರಭ ವಾರ್ತೆ ಬೆಳಗಾವಿ
ಮಹಾರಾಷ್ಟ್ರ ವಿಧಾನಸಭಾ ಚುನಾವಣೆಯನ್ನು ಗುರಿಯಾಗಿಸಿ ಅಕ್ರಮವಾಗಿ ಗೋವಾ ಮದ್ಯವನ್ನು ಸಾಗಾಟ ಮಾಡುತ್ತಿದ್ದ ಜಾಲವನ್ನು ಬೆಳಗಾವಿ ಮಾಳಮಾರುತಿ ಪೊಲೀಸರು ಭೇದಿಸಿದ್ದಾರೆ. ಯಾವುದೇ ದಾಖಲೆಗಳಿಲ್ಲದೆ ಗೋವಾ ರಾಜ್ಯದಲ್ಲಿ ತಯಾರಾದ ಮದ್ಯವನ್ನು ತುಂಬಿಕೊಂಡು ಸಾಗಿಸುತ್ತಿದ್ದ ಲಾರಿಯನ್ನು ಮಾಳಮಾರುತಿ ಪೊಲೀಸರು ಕಾರ್ಯಾಚರಣೆ ನಡೆಸಿ ವಶಕ್ಕೆ ಪಡೆದಿದ್ದು, ಲಾರಿಯ ಚಾಲಕನನ್ನು ಬಂಧಿಸಿದ್ದಾರೆ.
ಬೆಳಗಾವಿ ನಗರ ಪ್ರವೇಶಿಸುವ ಮುನ್ನವೇ ರಾಷ್ಟ್ರೀಯ ಹೆದ್ದಾರಿ ಬಳಿ ಲಾರಿಯನ್ನು ತಡೆದು ತಪಾಸಣೆ ನಡೆಸಿದ ಪೊಲೀಸರಿಗೆ ಸುಮಾರು 7ಸಾವಿರ ಲೀಟರ್ ಅಕ್ರಮ ಗೋವಾ ಮದ್ಯ ಪತ್ತೆಯಾಗಿದೆ. ವಶಪಡಿಸಿಕೊಂಡ ಮದ್ಯದ ಅಂದಾಜು ಮೌಲ್ಯ ₹25 ರಿಂದ ₹30 ಲಕ್ಷ ಎಂದು ಅಂದಾಜಿಸಲಾಗಿದೆ.
ಕರ್ನಾಟಕದಲ್ಲಿ ತಯಾರಿಯಾಗದ, ಗೋವಾ ರಾಜ್ಯದಲ್ಲಿ ತಯಾರಾದ ಮದ್ಯವನ್ನು ಯಾವುದೇ ಮಾನ್ಯ ದಾಖಲಾತಿಗಳಿಲ್ಲದೆ ಸಾಗಿಸಲಾಗುತ್ತಿತ್ತು. ನಮಗೆ ಬಂದ ಮಾಹಿತಿ ಸಂಪೂರ್ಣ ಖಚಿತವಾಗಿತ್ತು ಎಂದು ಪೊಲೀಸ್ ಆಯುಕ್ತ ಭೂಷಣ ಬೋರಸೆ ತಿಳಿಸಿದ್ದಾರೆ.
ವಶಪಡಿಸಿಕೊಂಡ ಮದ್ಯದ ಮಾದರಿಗಳನ್ನು ಎಫ್‌ಎಸ್‌ಎಲ್‌ಗೆ ಕಳುಹಿಸಲಾಗುತ್ತಿದ್ದು, ಇದು ಎಲ್ಲಿಂದ ಬಂದಿದೆ? ಎಲ್ಲಿಗೆ ಸಾಗಿಸಲಾಗುತ್ತಿತ್ತು? ಈ ಜಾಲದ ಹಿಂದೆ ಯಾರಿದ್ದಾರೆ ಎಂಬುದರ ಬಗ್ಗೆ ತನಿಖೆ ನಡೆಸಲಾಗುತ್ತಿದೆ ಎಂದು ತಿಳಿಸಿದರು.
ಮಹಾರಾಷ್ಟ್ರ ಚುನಾವಣೆಯ ಹಿನ್ನೆಲೆ ಈ ಮದ್ಯ ಮಹಾರಾಷ್ಟ್ರಕ್ಕೆ ಸಾಗಿಸಲಾಗುತ್ತಿತ್ತು ಎಂಬ ಮಾಹಿತಿ ಇದೆ ಎಂದು ಹೇಳಲಾಗುತ್ತಿದೆ. ಅಕ್ರಮ ಮದ್ಯ ತಯಾರಿಕಾ ಜಾಲದ ಹಿಂದಿರುವ ಸಂಘಟಿತ ವ್ಯವಸ್ಥೆಯತ್ತ ತನಿಖೆ ದಿಕ್ಕು ಹಿಡಿದಿದೆ. ಲಾರಿ ಚಾಲಕನನ್ನು ಬಂಧಿಸಲಾಗಿದೆ.--------
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.