ಅಕ್ರಮ ಹಣ ವರ್ಗಾವಣೆ ಪ್ರಕರಣ: ತನಿಖೆಗೆ ಬಿಜೆಪಿ ಒತ್ತಾಯ

KannadaprabhaNewsNetwork |  
Published : May 31, 2024, 02:15 AM IST
ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಆಗಿರುವ ಅಕ್ರಮದ ಬಗ್ಗೆ ತನಿಖೆ ನಡೆಸಬೇಕೆಂದು ಆಗ್ರಹಿಸಿ ಗುರುವಾರ ಬಿಜೆಪಿ ಎಸ್ಸಿ. ಎಸ್ಟಿ. ಮೋರ್ಚಾದ ಪದಾಧಿಕಾರಿಗಳು ಜಿಲ್ಲಾಧಿಕಾರಿ ಮೀನಾ ನಾಗರಾಜ್‌ ಅವರಿಗೆ  ಮನವಿ ಸಲ್ಲಿಸಿದರು. | Kannada Prabha

ಸಾರಾಂಶ

ಚಿಕ್ಕಮಗಳೂರು, ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಅಕ್ರಮ ವಹಿವಾಟಿನ ಬಗ್ಗೆ ಸಮಗ್ರ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ಜಿಲ್ಲಾ ಬಿಜೆಪಿ ಎಸ್ಸಿ ಮತ್ತು ಎಸ್ಟಿ ಮೋರ್ಚಾದ ಮುಖಂಡರು ಜಿಲ್ಲಾಧಿಕಾರಿ ಸಿ.ಎನ್.ಮೀನಾ ನಾಗರಾಜ್ ಗೆ ಗುರುವಾರ ಮನವಿ ಸಲ್ಲಿಸಿದರು.

ಜಿಲ್ಲಾಧಿಕಾರಿ ಸಿ.ಎನ್.ಮೀನಾ ನಾಗರಾಜ್ ಗೆ ಮನವಿ

ಕನ್ನಡಪ್ರಭ ವಾರ್ತೆ, ಚಿಕ್ಕಮಗಳೂರು

ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಅಕ್ರಮ ವಹಿವಾಟಿನ ಬಗ್ಗೆ ಸಮಗ್ರ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ಜಿಲ್ಲಾ ಬಿಜೆಪಿ ಎಸ್ಸಿ ಮತ್ತು ಎಸ್ಟಿ ಮೋರ್ಚಾದ ಮುಖಂಡರು ಜಿಲ್ಲಾಧಿಕಾರಿ ಸಿ.ಎನ್.ಮೀನಾ ನಾಗರಾಜ್ ಗೆ ಗುರುವಾರ ಮನವಿ ಸಲ್ಲಿಸಿದರು.ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧಿಕಾರಿ ಚಂದ್ರಶೇಖರನ್‌ರವರ ಸಾವಿನ ತನಿಖೆ ನಡೆಸಿ, ನಿಗಮದಲ್ಲಿ ನಡೆದಿರುವ ಹಗರಣದಲ್ಲಿ ಪ್ರಮುಖ ಪಾತ್ರ ವಹಿಸಿರುವ ಸಚಿವ ನಾಗೇಂದ್ರ ಅವರನ್ನು ವಜಾಗೊಳಿಸಬೇಕು ಎಂದು ಮನವಿಯಲ್ಲಿ ಒತ್ತಾಯಿಸಿದ್ದಾರೆ.ರಾಜ್ಯ ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಸುಮಾರು 187 ಕೋಟಿ ರು. ಅಕ್ರಮ ಹಣ ವರ್ಗಾವಣೆಯಲ್ಲಿ ರಾಜ್ಯದ ಕಾಂಗ್ರೆಸ್ ಸರ್ಕಾರ ಭ್ರಷ್ಟಾಚಾರವೆಸಗಿರುವುದು ಸ್ಪಷ್ಟವಾಗಿ ವ್ಯಕ್ತವಾಗುತ್ತಿದೆ. ವರ್ಗಾವಣೆ ದಂಧೆಯಲ್ಲಿ ತೊಡಗಿರುವ ಸಚಿವ ನಾಗೇಂದ್ರ ನೇರವಾಗಿ ವರ್ಗಾವಣೆಗೆ ಮೌಖಿಕ ಆದೇಶ ನೀಡಿರುವುದು ಭ್ರಷ್ಟಾಚಾರಕ್ಕೆ ಜೀವಂತ ನಿದರ್ಶನವಾಗಿದೆ.

ಸಚಿವರ ಒತ್ತಡಕ್ಕೆ ಮಣಿದು ಅಭಿವೃದ್ಧಿ ನಿಗಮದ ಅಧೀಕ್ಷಕ ಚಂದ್ರಶೇಖರ್ ಹಣ ವರ್ಗಾವಣೆಗೊಳಿಸಿದ ಪರಿಣಾಮ ಮಾನಸಿಕ ಖಿನ್ನತೆಗೆ ಒಳಗಾಗಿ ಆತ್ಮಹತ್ಯೆಗೆ ಮಾಡಿಕೊಂಡಿರುವುದು ಸ್ಪಷ್ಟವಾಗಿದ್ದು, ಅಧೀಕ್ಷಕರ ಸಾವಿನ ಪ್ರಕರಣದಲ್ಲಿ ಸಚಿವರ ಪ್ರಚೋದನೆ ಇರುವ ಹಿನ್ನೆಲೆಯಲ್ಲಿ ಕೂಡಲೇ ಪ್ರಕರಣ ದಾಖಲಿಸಿ ಬಂಧಿಸಬೇಕು ಎಂದು ಆಗ್ರಹಿಸಿದ್ದಾರೆ.ಈ ಸಂದರ್ಭದಲ್ಲಿ ಜಿಲ್ಲಾ ಬಿಜೆಪಿ ಎಸ್ಪಿ ಮೋರ್ಚಾದ ಅಧ್ಯಕ್ಷ ಕುರುವಂಗಿ ವೆಂಕಟೇಶ್‌, ರಾಜ್ಯ ಎಸ್.ಸಿ ಮೋರ್ಚಾ ಕಾರ್ಯದರ್ಶಿ ಸೀತಾರಾಮ ಭರಣ್ಯ, ಎಸ್.ಟಿ ಮೋರ್ಚಾ ಪ್ರಧಾನ ಕಾರ್ಯದರ್ಶಿಗಳಾದ ಮಧುಕುಮಾರ್, ಶಂಕರ್, ಸಹ ಪ್ರಮುಖ್ ಕೇಶವ, ಗ್ರಾಮಾಂತರ ಮಂಡಲ ಸಹ ವಕ್ತಾರ ಹಂಪಯ್ಯ, ನಗರ ಎಸ್‌ಸಿ ಮೋರ್ಚಾ ಅಧ್ಯಕ್ಷ ಸಿ.ಆರ್.ಜಗದೀಶ, ಮುಖಂಡರಾದ ಜೀವನ್ ರಂಗನಾಥ್, ರಾಜಕುಮಾರ, ರೇವನಾಥ್, ಧರ್ಮರಾಜು, ಮಾರ್ಗೋಭೋವಿ, ಚನ್ನಕೇಶವ, ನವೀನ್, ನಂಜುಂಡಪ್ಪ ಉಪಸ್ಥಿತರಿದ್ದರು.

ಪೋಟೋ ಫೈಲ್‌ ನೇಮ್‌ 30 ಕೆಸಿಕೆಎಂ 2ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಆಗಿರುವ ಅಕ್ರಮದ ಬಗ್ಗೆ ತನಿಖೆ ನಡೆಸಬೇಕೆಂದು ಆಗ್ರಹಿಸಿ ಗುರುವಾರ ಬಿಜೆಪಿ ಎಸ್ಸಿ. ಎಸ್ಟಿ. ಮೋರ್ಚಾದ ಪದಾಧಿಕಾರಿಗಳು ಜಿಲ್ಲಾಧಿಕಾರಿ ಮೀನಾ ನಾಗರಾಜ್‌ ಅವರಿಗೆ ಮನವಿ ಸಲ್ಲಿಸಿದರು.

PREV

Recommended Stories

ವಿಶ್ವದಲ್ಲೇ ಮೊದಲ ಬಾರಿ ಬನ್ನೇರುಘಟ್ಟದಲ್ಲಿ ಕರಡಿಗೆ ಕೃತಕ ಕಾಲು ಜೋಡಣೆ
ರಾಜ್ಯದ ಸಿರಿಧಾನ್ಯ ಬೆಳೆಗಾರರಿಗೆ ರಾಜ್ಯ ಸರ್ಕಾರದ ಸಿಹಿ ಸುದ್ದಿ