ಅಕ್ರಮ ಅಕ್ಕಿ ಸಾಗಾಟ, ಚಾಲಕ ಪರಾರಿ: ಗೂಡ್ಸ್ ವಾಹನ ವಶಕ್ಕೆ

KannadaprabhaNewsNetwork |  
Published : Aug 05, 2026, 03:00 AM IST
04ದಸಚಸ,ಮದ | Kannada Prabha

ಸಾರಾಂಶ

ಕನ್ನಡಪ್ರಭ ವಾರ್ತೆ ಬಾದಾಮಿಸರ್ಕಾರದ ವಿವಿಧ ಯೋಜನೆಗಳಲ್ಲಿ ಫಲಾನುಭವಿಗಳಿಗೆ ವಿತರಿಸಲಾಗುತ್ತಿರುವ ಉಚಿತ ಅಕ್ಕಿಯನ್ನು ಕಡಿಮೆ ಬೆಲೆ ಖರೀದಿಸಿ ಹೆಚ್ಚಿನ ಬೆಲೆಗೆ ಮಾರಾಟ ಮಾಡಲು ಸಾಗಿಸುತ್ತಿದ್ದ ಅಕ್ರಮ ಅಕ್ಕಿ ಸಮೇತ ಗೂಡ್ಸ್ ವಾಹನವನ್ನು ತಾಲೂಕಿನ ಕುಟುಕನಕೇರಿ ಹತ್ತಿರ ಸೋಮವಾರ ರಾತ್ರಿ ವಶಕ್ಕೆ ಪಡೆಯಲಾಗಿದೆ.

ಕನ್ನಡಪ್ರಭ ವಾರ್ತೆ ಬಾದಾಮಿ

ಸರ್ಕಾರದ ವಿವಿಧ ಯೋಜನೆಗಳಲ್ಲಿ ಫಲಾನುಭವಿಗಳಿಗೆ ವಿತರಿಸಲಾಗುತ್ತಿರುವ ಉಚಿತ ಅಕ್ಕಿಯನ್ನು ಕಡಿಮೆ ಬೆಲೆ ಖರೀದಿಸಿ ಹೆಚ್ಚಿನ ಬೆಲೆಗೆ ಮಾರಾಟ ಮಾಡಲು ಸಾಗಿಸುತ್ತಿದ್ದ ಅಕ್ರಮ ಅಕ್ಕಿ ಸಮೇತ ಗೂಡ್ಸ್ ವಾಹನವನ್ನು ತಾಲೂಕಿನ ಕುಟುಕನಕೇರಿ ಹತ್ತಿರ ಸೋಮವಾರ ರಾತ್ರಿ ವಶಕ್ಕೆ ಪಡೆಯಲಾಗಿದೆ.

ಖಚಿತ ಮಾಹಿತಿ ಮೇರೆಗೆ ಆಹಾರ ಇಲಾಖೆಯ ನಿರೀಕ್ಷಕ ಮಂಜುನಾಥ ರೊಟ್ಟಿ ದಾಳಿ ನಡೆಸಿದಾಗ ವಾಹನ ಚಾಲಕ ಪರಾರಿಯಾಗಿದ್ದು, ಗೂಡ್ಸ್ ವಾಹನ ಮತ್ತು ₹ 26,600 ಮೌಲ್ಯದ ಅಕ್ಕಿಯನ್ನು ವಶಕ್ಕೆ ಪಡೆಯಲಾಗಿದೆ. ಮಾಲೀಕ ಮತ್ತು ಚಾಲಕ ಪರಾರಿಯಾಗಿದ್ದು, ಇಬ್ಬರು ವಿರುದ್ಧ ಆಹಾರ ಇಲಾಖೆಯ ನಿರೀಕ್ಷಕ ಮಂಜುನಾಥ ರೊಟ್ಟಿ ಇವರ ದೂರಿನನ್ವಯ ಸ್ಥಳೀಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ಪಿ.ಎಸ್.ಐ ಹನಮಂತ ನೆರಳೆ ತಿಳಿಸಿದ್ದಾರೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಚಿಕ್ಕಮಗಳೂರಲ್ಲಿ ಮಳೆ ಪ್ರಮಾಣ ಇಳಿಕೆ
ಕಾಫಿನಾಡಲ್ಲಿ ಅಕ್ರಮವಾಗಿ ನೆಲೆಸಿದ್ದ ಐವರು ಬಾಂಗ್ಲಾದೇಶಿಗಳ ಬಂಧನ