ಕನ್ನಡಪ್ರಭ ವಾರ್ತೆ ದೊಡ್ಡಬಳ್ಳಾಪುರ
ಈ ಕುರಿತು ಮಾತನಾಡಿರುವ ಗ್ರಾಪಂ ಸದಸ್ಯ ಸಿದ್ದೆನಾಯಕ, ಯುವ ಮುಖಂಡ ಶಾಂತಕುಮಾರ್, ಗ್ರಾಮದಲ್ಲಿ ಮದ್ಯ ಅಕ್ರಮ ಮಾರಾಟ ತೀವ್ರವಾಗಿದ್ದು, ಯಾರಿಗೆ ದೂರು ನೀಡಿದರೂ ಕ್ರಮಕೈಗೊಳ್ಳುತ್ತಿಲ್ಲ. ಗ್ರಾಮದಲ್ಲಿನ ಚಿಲ್ಲರೆ ಅಂಗಡಿಗಳಲ್ಲಿ ಬೇಕಾಬಿಟ್ಟಿಯಾಗಿ ಮದ್ಯ ಅಕ್ರಮ ಮಾರಾಟ ನಡೆಯುತ್ತಿದ್ದು, ರಾತ್ರಿ ವೇಳೆ ಯಾವ ಸಮಯದಲ್ಲಿಯಾದರೂ ಮದ್ಯ ದೊರೆಯುತ್ತದೆ. ಇದರಿಂದಾಗಿ ಗ್ರಾಮದಲ್ಲಿ ಗಲಾಟೆ, ಆತ್ಮಹತ್ಯೆ ಪ್ರಕರಣಗಳು ಮಿತಿಮೀರಿವೆ. ಅಬಕಾರಿ ಇಲಾಖೆಗೆ ದೂರು ನೀಡಿದರೆ, ದಾಳಿ ನಡೆಸುವ ಮುನ್ನವೇ ಮಾಹಿತಿ ನೀಡಿ, ಸ್ಥಳಾಂತರ ಮಾಡಲು ಅವಕಾಶ ನೀಡಿ ನಂತರ ದಾಳಿ ನಡೆಸುತ್ತಾರೆ ಎಂದು ಆರೋಪಿಸಿದರು.
ಈ ಹಿನ್ನೆಲೆಯಲ್ಲಿ ಗ್ರಾಮಸ್ಥರು ಪ್ರತಿಭಟನೆ ನಡೆಸುತ್ತಿದ್ದು, ಹಿರಿಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡದ ಹೊರತು ಪ್ರತಿಭಟನೆ ಹಿಂಪಡೆಯುವುದಿಲ್ಲ ಎಂದು ತಿಳಿಸಿದರು.ಮದ್ಯ ಅಕ್ರಮ ಮಾರಾಟದ ಕುರಿತು ಕೆರಳಿರುವ ಗ್ರಾಮಸ್ಥರು, ಚುನಾಯಿತ ಜನಪ್ರತಿನಿಧಿಗಳು, ಅಬಕಾರಿ ಇಲಾಖೆ ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ತಾಲೂಕಿನಲ್ಲಿ ಮದ್ಯ ಅಕ್ರಮ ಮಾರಾಟ ತೀವ್ರಗತಿಯಲ್ಲಿ ನಡೆಯುತ್ತಿದ್ದು, ಚಿಲ್ಲರೆ ಅಂಗಡಿಗಳು, ಗೂಡಂಗಂಡಿಗಳಲ್ಲಿ ಅಕ್ರಮ ಮಾರಾಟ ವ್ಯಾಪಕವಾಗಿದೆ ಎಂದು ದೂರಿದರು
.