ನಾಪೋಕ್ಲು: ಸ್ಥಳೀಯ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಅಕ್ರಮವಾಗಿ ಮರಳು ಸಾಗಾಟ ಮಾಡುತ್ತಿದ್ದ ಟಿಪ್ಪರ್ ವಾಹನವನ್ನು ಪೊಲೀಸರು ಮರಳು ಸಹಿತ ವಶಕ್ಕೆ ಪಡೆದು ಗಣಿ ಮತ್ತು ಭೂ ವಿಜ್ಞಾನ ಇಲಾಖೆಗೆ ಹಸ್ತಾಂತರಿಸಿ ದಂಡ ವಿಧಿಸಿದ್ದಾರೆ.ಇಲ್ಲಿಗೆ ಸಮೀಪದ ಬೇತು ಗ್ರಾಮದ ಕಾರೆಕಾಡು ಬಳಿಯ ಕಾವೇರಿ ನದಿ ದಡದಿಂದ ಟಿಪ್ಪರ್ ವಾಹನದಲ್ಲಿ ಪರವಾನಗಿ ಇಲ್ಲದೆ ಅಕ್ರಮವಾಗಿ ಮರಳು ಸಾಗಾಟ ಮಾಡುತ್ತಿರುವ ಬಗ್ಗೆ ದೊರೆತ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಎಸ್ ಐ ರಾಘವೇಂದ್ರ ಹಾಗೂ ಸಿಬ್ಬಂದಿ ಮಾಲು ಸಹಿತ ಟಿಪ್ಪರ್
ಬಳಿಕ ಪ್ರಕರಣವನ್ನು ಜಿಲ್ಲಾ ಗಣಿ ಮತ್ತು ಭೂ ವಿಜ್ಞಾನ ಇಲಾಖೆಗೆ ಹಸ್ತಾಂತರಿಸಿ ವಾಹನದ ಮಾಲೀಕರಿಗೆ 32 320 ರು. ದಂಡ ವಿಧಿಸಿ ಕಾನೂನು ಕ್ರಮ ಕೈಗೊಂಡಿದ್ದಾರೆ. ಬಳಿಕ ಕಾವೇರಿ ನದಿ ದಡಕ್ಕೆ ಮರಳು ಸಾಗಾಟಕ್ಕೆ ತೆರಳುವ ರಸ್ತೆಗೆ ಅಡ್ಡವಾಗಿ ಜೆಸಿಬಿ ಯಂತ್ರವನ್ನು ಬಳಸಿ ಚರಂಡಿ ತೆಗೆಸಿದ ಪೊಲೀಸರು ಮರಳುಗಾರಿಕೆಗೆ ವಾಹನಗಳನ್ನು ತೆರಳದಂತೆ ಕ್ರಮ ಕೈಗೊಂಡಿದ್ದಾರೆ. ಇಲ್ಲಿನ ಠಾಣೆ ವ್ಯಾಪ್ತಿಯ ಕೆಲವು ಭಾಗಗಳಲ್ಲಿ ಅಕ್ರಮವಾಗಿ ಮರಳು ದಂಧೆ ನಡೆಸುತ್ತಿರುವ ಬಗ್ಗೆ ತಿಳಿದು ಬಂದರೆ ಸಾರ್ವಜನಿಕರು ಇಲ್ಲಿನ ಪೊಲೀಸ್ ಠಾಣೆಗೆ ಅಥವಾ ಸಂಬಂಧಪಟ್ಟ ಗಣಿ ಮತ್ತು ಭೂ ವಿಜ್ಞಾನ ಇಲಾಖೆಗೆ ಮಾಹಿತಿ ನೀಡುವಂತೆ ಇಲಾಖೆ ತಿಳಿಸಿದೆ.