ಶ್ರೀರಂಗಪಟ್ಟಣ: ಯಾವುದೇ ಪರವಾನಿಗೆ ಇಲ್ಲದೆ ಅಕ್ರಮವಾಗಿ ಕಲ್ಲು ಸಾಗಣಿಕೆ ಮಾಡುತ್ತಿದ್ದ ನಾಲ್ಕು ಟ್ರ್ಯಾಕ್ಟರನ್ನು ಅರಣ್ಯ ಇಲಾಖೆ ಸಿಬ್ಬಂದಿ ವಶಕ್ಕೆ ಪಡೆದಿದ್ದಾರೆ. ತಾಲೂಕಿನ ಮುಂಡುಗದೊರೆ ಅರಣ್ಯ ಪ್ರದೇಶ ವ್ಯಾಪ್ತಿಯಲ್ಲಿ ಅಕ್ರಮವಾಗಿ ಕಲ್ಲು ಸಾಗಾಣಿಗೆ ಮಾಡುತ್ತಿರುವ ಬಗ್ಗೆ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಸಿಬ್ಬಂದಿ 4 ಟ್ರ್ಯಾಕ್ಟರ್ ಹಾಗೂ ಚಾಲಕರನ್ನು ವಶಕ್ಕೆ ಪಡೆದಿದ್ದಾರೆ. ಅರಣ್ಯ ಪ್ರದೇಶ ಸೇರಿದಂತೆ ಇತರೆ ಸ್ಥಳಗಳಲ್ಲಿ ಮತ್ತೆ ಕಲ್ಲು ಕ್ವಾರೆ ಕ್ರಷರ್‌ಗಳು ಎಗ್ಗಿಲ್ಲದೆ ನಡೆಯುತ್ತಿವೆ. ಕಲ್ಲು ಬಂಡೆಗಳನ್ನು ಸಿಡಿಸಲು ಬ್ಲಾಂಸ್ಟಿಂಗ್ ಮಾಡುತ್ತಿದ್ದಾರೆ. ಜನ-ಜಾನುವಾರುಗಳು ಸೇರಿದಂತೆ ಗ್ರಾಮಸ್ಥರು ಆತಂಕದಲ್ಲಿ ದಿನ ದೂಡುವ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ. ಈ ಬಗ್ಗೆ ಎಆರ್‌ಎಫ್‌ಒ ಆನಂದೇಗೌಡ ಪ್ರತಿಕ್ರಿಯಿಸಿ, ಅರಣ್ಯ ಪ್ರದೇಶ ವ್ಯಾಪ್ತಿಯಲ್ಲಿ ಅಕ್ರಮವಾಗಿ ಕಲ್ಲು ಸಾಗಾಣಿಕೆ ಮಾಡುತ್ತಿದ್ದ 4 ಟ್ರ್ಯಾಕ್ಟರ್ ಹಾಗೂ ಡ್ರೈವರ್‌ಗಳನ್ನು ವಶಕ್ಕೆ ಪಡೆಯಲಾಗಿದೆ. ಗೌಡಹಳ್ಳಿ-ಗಣಂಗೂರು ಬಳಿಯ ಅರಣ್ಯ ಪ್ರದೇಶಗಳಲ್ಲಿ ವಾಹನಗಳನ್ನು ಸೀಜ್ ಮಾಡಿ ಮುಂದಿನ ಕ್ರಮ ಕೈಗೊಳ್ಳಲಾಗುವುದು.