ಕನ್ನಡಪ್ರಭ ವಾರ್ತೆ ಬೈಲಹೊಂಗಲ
ಹೊಳಿಹೊಸೂರು ಗ್ರಾಮದಿಂದ ಎಂ.ಕೆ.ಹುಬ್ಬಳ್ಳಿ ಪಟ್ಟಣಕ್ಕೆ ತೆರಳುವ ರಾಜ್ಯ ಹೆದ್ದಾರಿಯಲ್ಲಿ, ಪಟ್ಟಣದ ಸಮೀಪ ಶನಿವಾರ ಬೆಳಗಿನ ಜಾವ 12.25ರ ಸುಮಾರಿಗೆ ಅಬಕಾರಿ ಇಲಾಖೆ ಅಧಿಕಾರಿಗಳು ರಸ್ತೆ ಗಸ್ತು ನಡೆಸುತ್ತಿದ್ದರು. ಈ ವೇಳೆ ಟ್ಯಾಂಕರ್‌ನಲ್ಲಿ ಅಕ್ರಮವಾಗಿ ಮದ್ಯಸಾರ ಸಾಗಿಸುತ್ತಿರುವುದು ಪತ್ತೆಯಾಗಿದೆ.
ಟ್ಯಾಂಕರ್ ಚಾಲಕ ವಿಜಯಪುರ ಜಿಲ್ಲೆಯ ಬೋಳಚಿಕ್ಕಲಕಿ ಗ್ರಾಮದ ಬಂದೇನವಾಜ ನಬಿ ಸಾಬ್ ತಿಗಣಿಬಿದರಿ ಅವರಿಗೆ ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ (ಬಿಎನ್‌ಎಸ್‌ಎಸ್)-2023ರ ಕಲಂ 35(3)ರ ಅಡಿಯಲ್ಲಿ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಲಾಗಿದೆ. ವಾಹನದ ಮಾಲೀಕರ ವಿರುದ್ಧ ಪ್ರಕರಣ ದಾಖಲಿಸಿ ನ್ಯಾಯಾಲಯಕ್ಕೆಎಫ್‌ಐಆರ್ ಸಲ್ಲಿಸಲಾಗಿದೆ ಎಂದು ಅಬಕಾರಿ ಇಲಾಖೆ ಪ್ರಕಟಣೆ ತಿಳಿಸಿದೆ.ಅಬಕಾರಿ ನಿರೀಕ್ಷಕ ಶ್ರೀಶೈಲ ಅಕ್ಕಿ, ಉಪ ನಿರೀಕ್ಷಕ ಮಹಾದೇವ ಗುಡ್ಡದ, ವಿರೇಶ ಯರಗೊಪ್ಪ ಹಾಗೂ ಸಿಬ್ಬಂದಿ ನಿಂಗನಾಯ್ಕ ದಾದನಾಯ್ಕರ, ಎಂ.ಬಿ.ಮುಲ್ಲಾ, ವಿಠ್ಠಲ ಕೇರಾಳಿ, ಎನ್.ವೈ.ಟಗರಿ ಮತ್ತು ಗೃಹರಕ್ಷಕ ಸಿಬ್ಬಂದಿ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.