ಕನ್ನಡಪ್ರಭ ವಾರ್ತೆ ಬೆಳ್ತಂಗಡಿ
ಬಂಧಿತ ಆರೋಪಿಗಳು ಚಿಬಿದ್ರೆ ಗ್ರಾಮದ ಪೆರಿಯಡ್ಕ ನಿವಾಸಿ ಯತೀಂದ್ರ(24), ತೋಟತ್ತಾಡಿ ಗ್ರಾಮದ ಬೆಂದ್ರಾಳ ನಿವಾಸಿ ಅರವಿಂದ(30), ಚಾರ್ಮಾಡಿ ಗ್ರಾಮದ ನಿವಾಸಿ ಉಸ್ಮಾನ್ ( 36), ಚಿಬಿದ್ರೆ ಗ್ರಾಮದ ನಿವಾಸಿ ಆರಿಫ್ (27) ಎಂಬವರಾಗಿದ್ದಾರೆ.
ಮಲವಂತಿಗೆ ಗ್ರಾಮದ ಎಳನೀರು ದಿಡುಪೆ ರಸ್ತೆಯಲ್ಲಿ ಅಕ್ರಮವಾಗಿ ಪಿಕಪ್ ವಾಹನದಲ್ಲಿ ದನಗಳನ್ನು ಸಾಗಾಟ ಮಾಡುತ್ತಿದ್ದ ಬಗ್ಗೆ ಖಚಿತ ಮಾಹಿತಿಯ ಆಧಾರದಲ್ಲಿ ಗುರುವಾರ ರಾತ್ರಿ ಬೆಳ್ತಂಗಡಿ ಪೊಲೀಸರು ಮಲವಂತಿಗೆ ಗ್ರಾಮದ ಕಜಕೆ ಎಂಬಲ್ಲಿ ಪಿಕಪ್ ವಾಹನಗಳನ್ನು ತಡೆದು ಪರಿಶೀಲನೆ ನಡೆಸಿದರು. ಎರಡು ಪಿಕಪ್ ವಾಹನಗಳಲ್ಲಿ ಐದು ದನಗಳನ್ನು ಸಾಗಾಟ ಮಾಡುತ್ತಿರುವುದು ಕಂಡು ಬಂದಿದೆ. ವಾಹನದಲ್ಲಿ ಇದ್ದವರ ಬಳಿ ದನಗಳ ಸಾಗಾಟಕ್ಕೆ ಯಾವುದೇ ಪರವಾನಗಿ ಇರಲಿಲ್ಲ. ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.