ಐಎಂಜೆಐಎಸ್‌ಸಿ ವಿದ್ಯಾರ್ಥಿಗೆ ವಿವಿ ಕರಾಟೆಯಲ್ಲಿ ಬೆಳ್ಳಿ

KannadaprabhaNewsNetwork |  
Published : Sep 12, 2026, 03:00 AM IST
10ಬೆಳ್ಳಿ | Kannada Prabha

ಸಾರಾಂಶ

ಇಲ್ಲಿನ ಮೂಡ್ಲಕಟ್ಟೆ ಐಎಂಜೆ ವಿಜ್ಞಾನ ಮತ್ತು ವಾಣಿಜ್ಯ ಸಂಸ್ಥೆಯ (ಐಎಂಜೆಐಎಸ್‌ಸಿ) ತೃತೀಯ ಬಿಬಿಎ ವಿದ್ಯಾರ್ಥಿ ಅಬ್ದುಲ್ ಮಲ್ಲಿಕ್ ಉಡುಪಿಯ ತೆಂಕನಿಡಿಯೂರಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ನಡೆದ ಮಂಗಳೂರು ವಿಶ್ವವಿದ್ಯಾಲಯ ಅಂತರ ಕಾಲೇಜು ಕರಾಟೆ ಚಾಂಪಿಯನ್‌ಶಿಪ್‌ನಲ್ಲಿ ಪುರುಷರ ಕುಮಿಟೆ - 67 ಕೆಜಿ ವಿಭಾಗದಲ್ಲಿ ಬೆಳ್ಳಿ ಪದಕವನ್ನು ಗೆದ್ದುಕೊಂಡಿದ್ದಾರೆ.

ಕುಂದಾಪುರ: ಇಲ್ಲಿನ ಮೂಡ್ಲಕಟ್ಟೆ ಐಎಂಜೆ ವಿಜ್ಞಾನ ಮತ್ತು ವಾಣಿಜ್ಯ ಸಂಸ್ಥೆಯ (ಐಎಂಜೆಐಎಸ್‌ಸಿ) ತೃತೀಯ ಬಿಬಿಎ ವಿದ್ಯಾರ್ಥಿ ಅಬ್ದುಲ್ ಮಲ್ಲಿಕ್ ಉಡುಪಿಯ ತೆಂಕನಿಡಿಯೂರಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ನಡೆದ ಮಂಗಳೂರು ವಿಶ್ವವಿದ್ಯಾಲಯ ಅಂತರ ಕಾಲೇಜು ಕರಾಟೆ ಚಾಂಪಿಯನ್‌ಶಿಪ್‌ನಲ್ಲಿ ಪುರುಷರ ಕುಮಿಟೆ - 67 ಕೆಜಿ ವಿಭಾಗದಲ್ಲಿ ಬೆಳ್ಳಿ ಪದಕವನ್ನು ಗೆದ್ದುಕೊಂಡಿದ್ದಾರೆ. ಚಾಂಪಿಯನ್‌ಶಿಪ್‌ನಲ್ಲಿ ಅಬ್ದುಲ್ ಮಲ್ಲಿಕ್ ಅವರು ಪ್ರಭಾವಶಾಲಿ ಪ್ರದರ್ಶನ ನೀಡಿ ರನ್ನರ್-ಅಪ್ ಆಗಿ ಹೊರಹೊಮ್ಮಿದ್ದಾರೆ. ಅವರ ಈ ಸಾಧನೆಗಾಗಿ ಐಎಂಜೆಐಎಸ್‌ಸಿ ಸಂಸ್ಥೆಯ ಆಡಳಿತ ಮಂಡಳಿ, ಪ್ರಾಂಶುಪಾಲರು, ಉಪನ್ಯಾಸಕರು ಮತ್ತು ವಿದ್ಯಾರ್ಥಿಗಳು ಅಭಿನಂದನೆ ಸಲ್ಲಿಸಿದ್ದಾರೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಬರಪೀಡಿತ ತಾಲೂಕು ಘೋಷಣೆ ಶೇ.200 ಖಚಿತ: ನಾಡಗೌಡ
ನನಸಾಗದ ಡಾ.ಅಂಬೇಡ್ಕರ್ ಭವನ ಕನಸು।