ವಸತಿ ಶಾಲೆಗೆ ತಕ್ಷಣ ವಿದ್ಯಾರ್ಥಿಗಳ ಸ್ಥಳಾಂತರಿಸಿ: ಶಾಸಕ ನಾಯ್ಕ್ ಸೂಚನೆ

KannadaprabhaNewsNetwork |  
Published : Sep 09, 2025, 01:01 AM IST
ಬ್ರಹ್ಮಶ್ರೀ ನಾರಾಯಣಗುರು ವಸತಿ ಶಾಲೆಗೆ ವಿದ್ಯಾರ್ಥಿಗಳನ್ನು ತಕ್ಷಣ ಸ್ಥಳಾಂತರಿಸಿ ಶಾಸಕ ನಾಯ್ಕ್ ಸೂಚನೆ | Kannada Prabha

ಸಾರಾಂಶ

ಬಿ.ಸಿ.ರೋಡಿನ ಗಾಣದಪಡ್ಪುವಿನ ಬ್ರಹ್ಮಶ್ರೀ ನಾರಾಯಣಗುರು ಸಭಾಭವನದಲ್ಲಿ ಭಾನುವಾರ ಬ್ರಹ್ಮಶ್ರೀ ನಾರಾಯಣಗುರುಗಳ ೧೭೧ನೇ ಜನ್ಮದಿನಾಚರಣೆ ನೆರವೇರಿತು.

ಕನ್ನಡಪ್ರಭ ವಾರ್ತೆ ಬಂಟ್ವಾಳಸಂಘರ್ಷ ಇಲ್ಲದೆ ಸಾಮಾಜಿಕ ಕ್ರಾಂತಿ ಮಾಡಿದ ಬ್ರಹ್ಮಶ್ರೀ ನಾರಾಯಣಗುರುಗಳು ಜಗತ್ತಿನ ಗಮನ ಸೆಳೆದಿದ್ದಾರೆ. ಅವರ ಹೆಸರಲ್ಲಿ ಪುಂಜಾಲಕಟ್ಟೆಯಲ್ಲಿ ಸುಸಜ್ಜಿತವಾಗಿ ನಿರ್ಮಾಣಗೊಂಡ ಬ್ರಹ್ಮಶ್ರೀ ನಾರಾಯಣಗುರು ವಸತಿ ಶಾಲೆಗೆ ಈಗ ಬಾಡಿಗೆ ಕಟ್ಟಡದಲ್ಲಿರುವ ವಿದ್ಯಾರ್ಥಿಗಳನ್ನು ಹಿಂದುಳಿದವರ್ಗ ಇಲಾಖಾಧಿಕಾರಿಗಳು ಯಾವುದೇ ವಿಳಂಬ ಧೋರಣೆ ತಾಳದೆ ತಕ್ಷಣ ಸ್ಥಳಾಂತರಿಸಲು ಕ್ರಮಕೈಗೊಳ್ಳಬೇಕು,ಈ ವಸತಿ ಶಾಲೆಯಲ್ಲಿ ಧ್ಯಾನಮಂದಿವನ್ನೂ ನಿರ್ಮಿಸುವ ಚಿಂತನೆ ಇದೆ ಎಂದು ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪಾಡಿ ಹೇಳಿದ್ದಾರೆ.ಬಿ.ಸಿ.ರೋಡಿನ ಗಾಣದಪಡ್ಪುವಿನ ಬ್ರಹ್ಮಶ್ರೀ ನಾರಾಯಣಗುರು ಸಭಾಭವನದಲ್ಲಿ ಭಾನುವಾರ ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ, ಪುಂಜಾಲಕಟ್ಟೆ ಶ್ರೀ ನಾರಾಯಣಗುರು ವಸತಿ ಶಾಲೆ, ಬಂಟ್ವಾಳ ತಾಲೂಕು ಬಿಲ್ಲವ ಸಮಾಜ ಸೇವಾ ಸಂಘ ಗಾಣದಪಡ್ಪು, ಯುವವಾಹಿನಿ ಬಂಟ್ವಾಳ ಘಟಕ ಹಾಗೂ ಬಂಟ್ವಾಳ ತಾಲೂಕು ಬಿಲ್ಲವ ಮಹಿಳಾ ಸಮಿತಿ ಸಹಯೋಗದೊಂದಿಗೆ ಬ್ರಹ್ಮಶ್ರೀ ನಾರಾಯಣಗುರುಗಳ ೧೭೧ನೇ ಜನ್ಮದಿನಾಚರಣೆ ಉದ್ಘಾಟಿಸಿ ಅವರು ಮಾತನಾಡಿದರು.ಅಧ್ಯಕ್ಷತೆ ವಹಿಸಿದ್ದ ಬಂಟ್ವಾಳ ಪುರಸಭಾ ಅಧ್ಯಕ್ಷ ಬಿ.ವಾಸು ಪೂಜಾರಿ ಮಾತನಾಡಿ, ಗುರುಗಳು ನೀಡಿದ ಬೆಳಕಿನ ಪಥದಲ್ಲಿ ನಾವೆಲ್ಲರೂ ಸಾಗೋಣ ಎಂದರು.ಶ್ರೀನಾರಾಯಣಗುರು ವಸತಿ ಶಾಲೆ ಮುಖ್ಯೋಪಾಧ್ಯಾಯ ಸಂತೋಷ್ ಕುಮಾರ್ ಗುರು ಸಂದೇಶ ನೀಡಿದರು. ನಗರ ಯೋಜನಾ ಪ್ರಾಧಿಕಾರ ಅಧ್ಯಕ್ಷ ಬೇಬಿ ಕುಂದರ್ ಶುಭ ಹಾರೈಸಿದರು.ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷೆ ಜಯಂತಿ ಪೂಜಾರಿ, ಬಂಟ್ವಾಳ ತಾಲೂಕು ಬಿಲ್ಲವ ಸಮಾಜ ಸೇವಾ ಸಂಘದ ಅಧ್ಯಕ್ಷ ಭುವನೇಶ್ ಪಚ್ಚಿನಡ್ಕ, ಯುವವಾಹಿನಿ ಬಂಟ್ವಾಳ ಅಧ್ಹಕ್ಷ ನಾಗೇಶ್ ಪೂಜಾರಿ ನೈಬೈಲು, ಬಂಟ್ವಾಳ ತಾಲೂಕು ಬಿಲ್ಲವ ಮಹಿಳಾ ಸಮಿತಿ ಅಧ್ಯಕ್ಷೆ ರಾಗಿಣಿ ಮಾಧವ ಚಂಡ್ತಿಮಾರ್ ಇದ್ದರು.ಉಪತಹಸೀಲ್ದಾರ್ ನವೀನ್ ಬೆಂಜನದವು ಸ್ವಾಗತಿಸಿದರು. ಯುವವಾಹಿನಿ ನಿಕಟಪೂರ್ವ ಅಧ್ಯಕ್ಷ ದಿನೇಶ್ ಸುವರ್ಣ ರಾಯಿ ನಿರ್ವಹಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಜಿ ರಾಮ್‌ ಜಿ ಕುರಿತು ಇಂದು ರಾಜ್ಯ ವಿಶೇಷ ಸಂಪುಟ ಸಭೆ
ಫೆ.13ಕ್ಕೆ ಕಾಂಗ್ರೆಸ್‌ ಸರ್ಕಾರಕ್ಕೆ 1000 ದಿನ