ವೀರಶೈವ ಮಠಗಳ ಕೊಡುಗೆ ಅಪಾರ: ವಿನಯ್‌

KannadaprabhaNewsNetwork |  
Published : Sep 30, 2026, 02:00 AM IST
Palace Ground 8 | Kannada Prabha

ಸಾರಾಂಶ

ಅಕ್ಷರ, ಅನ್ನ ದಾಸೋಹ ಸೇರಿದಂತೆ ನಾಡಿನಲ್ಲಿ ವೀರಶೈವ ಮಠಗಳ ಕೊಡುಗೆ ಅಪಾರವಾಗಿದೆ ಎಂದು ಗೌರಿಗದ್ದೆ ಆಶ್ರಮದ ವಿನಯ್‌ ಗುರೂಜಿ ಮೆಚ್ಚುಗೆ ವ್ಯಕ್ತಪಡಿಸಿದರು.

ಕನ್ನಡಪ್ರಭ ವಾರ್ತೆ ಬೆಂಗಳೂರು

ಅಕ್ಷರ, ಅನ್ನ ದಾಸೋಹ ಸೇರಿದಂತೆ ನಾಡಿನಲ್ಲಿ ವೀರಶೈವ ಮಠಗಳ ಕೊಡುಗೆ ಅಪಾರವಾಗಿದೆ ಎಂದು ಗೌರಿಗದ್ದೆ ಆಶ್ರಮದ ವಿನಯ್‌ ಗುರೂಜಿ ಮೆಚ್ಚುಗೆ ವ್ಯಕ್ತಪಡಿಸಿದರು. ಅರಮನೆ ಮೈದಾನದಲ್ಲಿ ವೀರಶೈವ ಲಿಂಗಾಯತ ಸಂಘಟನಾ ವೇದಿಕೆ ಮಂಗಳವಾರ ಹಮ್ಮಿಕೊಂಡಿದ್ದ ಶ್ರೀ ವೀರಭದ್ರೇಶ್ವರ ಜಯಂತ್ಯುವದಲ್ಲಿ ಮಾತನಾಡಿದ ಅವರು, ವೀರಶೈವ ಮಠಗಳ ಕೊಡುಗೆ ಇಂದು ನಿನ್ನೆಯದಲ್ಲ. ಸ್ವಾತಂತ್ರ್ಯ ಪೂರ್ವದಿಂದಲೂ ಮಠಗಳು ಶಿಕ್ಷಣದಲ್ಲಿ ಕ್ರಾಂತಿಯನ್ನೇ ಮಾಡಿವೆ. ಶಿಕ್ಷಣ ಸೇವೆಯ ಜೊತೆಗೆ ಅನ್ನ ದಾಸೋಹ ನಡೆಸಿ ಲಕ್ಷಾಂತರ ವಿದ್ಯಾರ್ಥಿಗಳನ್ನು ಪ್ರೋತ್ಸಾಹಿಸಿವೆ. ಸಾಮೂಹಿಕ ವಿವಾಹಗಳ ಮೂಲಕ ಮಿತವ್ಯಯಕ್ಕೆ ನಾಂದಿ ಹಾಡಿ ಎಷ್ಟೋ ಕುಟುಂಬಗಳ ಬಾಳಿಗೆ ಬೆಳಕಾಗಿವೆ ಎಂದು ಪ್ರಶಂಸಿಸಿದರು.

ಈ ವೇಳೆ ಉದ್ಯಮಿ ಬಿ.ಎಂ.ಜಯಶಂಕರ್‌ ಅವರಿಗೆ ಶ್ರೀ ವೀರಭದ್ರೇಶ್ವರ ರಾಷ್ಟ್ರೀಯ ಪ್ರಶಸ್ತಿ ಪ್ರದಾನ ಮಾಡಿ ಗೌರವಿಸಲಾಯಿತು. ನೊಣವಿನಕೆರೆ ಕಾಡಸಿದ್ದೇಶ್ವರ ಮಠದ ಕರಿವೃಷಭ ದೇಶಿಕೇಂದ್ರ ಶಿವಯೋಗೀಶ್ವರ ಸ್ವಾಮೀಜಿ, ರಂಭಾಪುರಿ ಪೀಠದ ಪ್ರಸನ್ನ ರೇಣುಕ ಡಾ.ವೀರಸೋಮೇಶ್ವರ ರಾಜ ದೇಶಿಕೇಂದ್ರ ಸ್ವಾಮೀಜಿ, ಶ್ರೀಶೈಲ ಪೀಠದ ಡಾ.ಚನ್ನಸಿದ್ದರಾಮ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ, ಕಾಶಿ ಜ್ಞಾನಸಿಂಹಾಸನ ಪೀಠದ ಡಾ.ಚಂದ್ರಶೇಖರ ಶಿವಾಚಾರ್ಯ ಸ್ವಾಮೀಜಿ, ವಿಧಾನ ಪರಿಷತ್ ಸದಸ್ಯ ಡಾ.ಧನಂಜಯ ಸರ್ಜಿ, ನಿವೃತ್ತ ನ್ಯಾಯಮೂರ್ತಿ ಸುಭಾಷ್ ಬಿ ಅಡಿ, ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್‌ ಅಧ್ಯಕ್ಷ ಡಾ.ಸಿ.ಸೋಮಶೇಖರ್, ಅಖಿಲ ಭಾರತ ವೀರಶೈವ ಮಹಾಸಭಾ ಮಹಿಳಾ ಘಟಕದ ಅಧ್ಯಕ್ಷೆ ವೀಣಾ ಕಾಶಪ್ಪನವರ್, ವೇದಿಕೆಯ ರಾಷ್ಟ್ರೀಯ ಅಧ್ಯಕ್ಷ ಪ್ರದೀಪ್ ಕಂಕನವಾಡಿ ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ವಿದ್ಯಾರ್ಥಿಗಳ ಪಾಲಿಗೆ ಪ್ರೊ:ಸುಜನಾ ಆದರ್ಶ ಗುರುವಾಗಿದ್ದರು: ಪ್ರೊ.ಮೈಸೂರು ಕೃಷ್ಣಮೂರ್ತಿ ಅಭಿಪ್ರಾಯ
ಜಿಲ್ಲೆಗೆ ಬಂದರೆ ಪ್ರಮೋಷನ್ ಸಿಗುತ್ತೆ, ಹಿಂಬಡ್ತಿ ಅಲ್ಲ: ಶಾಸಕ ಕೃಷ್ನಮೂರ್ತಿ