ಕೃತಕ ಬುದ್ಧಿಮತ್ತೆಗೆ ಅಪಾರ ಬೇಡಿಕೆ: ಡಾ. ಸ್ಯಾಮ್ಯುಯೆಲ್

KannadaprabhaNewsNetwork |  
Published : Sep 20, 2026, 03:45 AM IST
19ಎಂಐಟಿಕೆ | Kannada Prabha

ಸಾರಾಂಶ

ಇಂದಿನ ತಂತ್ರಜ್ಞಾನ ಯುಗದಲ್ಲಿ ಪರಿಸರ ಸ್ನೇಹಿ ಕೌಶಲ ಹಾಗೂ ಕೃತಕ ಬುದ್ಧಿಮತ್ತೆ (ಎಐ) ಜ್ಞಾನಕ್ಕೆ ಅಪಾರ ಬೇಡಿಕೆಯಿದ್ದು, ಯುವಜನತೆ ನಿರಂತರ ಕಲಿಕೆಯೊಂದಿಗೆ ಅವಕಾಶಗಳನ್ನು ಬಳಸಿಕೊಳ್ಳಬೇಕು ಎಂದು ಐಬಿಎಂ ಇಂಡಿಯಾ ಕ್ಲೌಡ್ ಲ್ಯಾಬ್ಸ್‌ನ ಆರ್ಕಿಟೆಕ್ಟ್ ಡಾ. ಸ್ಯಾಮ್ಯುಯೆಲ್ ಅಗಸ್ಟಸ್ ನಾರ್ಟನ್ ಸ್ಟಾನ್ಲಿ ಹೇಳಿದರು.

ಕುಂದಾಪುರ : ಇಂದಿನ ತಂತ್ರಜ್ಞಾನ ಯುಗದಲ್ಲಿ ಪರಿಸರ ಸ್ನೇಹಿ ಕೌಶಲ ಹಾಗೂ ಕೃತಕ ಬುದ್ಧಿಮತ್ತೆ (ಎಐ) ಜ್ಞಾನಕ್ಕೆ ಅಪಾರ ಬೇಡಿಕೆಯಿದ್ದು, ಯುವಜನತೆ ನಿರಂತರ ಕಲಿಕೆಯೊಂದಿಗೆ ಅವಕಾಶಗಳನ್ನು ಬಳಸಿಕೊಳ್ಳಬೇಕು ಎಂದು ಐಬಿಎಂ ಇಂಡಿಯಾ ಕ್ಲೌಡ್ ಲ್ಯಾಬ್ಸ್‌ನ ಆರ್ಕಿಟೆಕ್ಟ್ ಡಾ. ಸ್ಯಾಮ್ಯುಯೆಲ್ ಅಗಸ್ಟಸ್ ನಾರ್ಟನ್ ಸ್ಟಾನ್ಲಿ ಹೇಳಿದರು.

ಇಲ್ಲಿನ ಮೂಡಲಕಟ್ಟೆಯ ಐ.ಎಂ.ಜೆ. ಶಿಕ್ಷಣ ಸಂಸ್ಥೆಯಲ್ಲಿ ಹಮ್ಮಿಕೊಳ್ಳಲಾದ ಬೃಹತ್ ಉದ್ಯೋಗ ಮೇಳ ಜಾಬ್ ಎಕ್ಸ್‌ಪ್ರೆಸ್ 2ಕೆ26 ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.

ಗೌರವ ಅತಿಥಿ ಗ್ರೀನ್ ಸ್ಕಿಲ್ಸ್ ಆ್ಯಂಡ್ ಅಪ್ಲೈಡ್ ಎಐ ಫಾರ್ ಕ್ಲೈಮೇಟ್ ಆಕ್ಷನ್ ನ ಮುಖ್ಯಸ್ಥೆ ರೇಮಾ ಜೋಸೆಫ್ ಮಾತನಾಡಿ, ಗ್ರಾಮೀಣ ಭಾಗದ ವಿದ್ಯಾರ್ಥಿಗಳಲ್ಲಿ ಅಪಾರ ಪ್ರತಿಭೆಯಿದ್ದು, ಅವರನ್ನು ಜಾಗತಿಕ ಉದ್ಯೋಗ ಮಾರುಕಟ್ಟೆಗೆ ಸಂಪರ್ಕಿಸುವ ವೇದಿಕೆ ಇದಾಗಿದೆ, ವಿದ್ಯಾರ್ಥಿಗಳಿಗೆ ಉಜ್ವಲ ಭವಿಷ್ಯ ಹಾಗೂ ಉತ್ತಮ ವೃತ್ತಿ ಅವಕಾಶಗಳನ್ನು ಕಲ್ಪಿಸಿಕೊಡಲು ನಮ್ಮ ಸಂಸ್ಥೆ ಎಲ್ಲ ರೀತಿಯಲ್ಲೂ ಸದಾ ಬೆಂಬಲ ನೀಡಲು ಬದ್ಧವಾಗಿದೆ ಎಂದರು.

ಸಂಸ್ಥೆಯ ಅಕಾಡೆಮಿಕ್ಸ್ ವಿಭಾಗದ ನಿರ್ದೇಶಕ ಡಾ. ಎಸ್. ಎನ್. ಭಟ್ ಪ್ರಾಸ್ತಾವಿಕ ಮಾತುಗಳನ್ನಾಡಿ ಸ್ವಾಗತಿಸಿದರು. ವೇದಿಕೆಯಲ್ಲಿ ಎಂಐಟಿ ಪ್ರಾಂಶುಪಾಲ ಡಾ. ರಾಮಕೃಷ್ಣ ಹೆಗಡೆ, ಐಎಂಜೆಐಎಸ್‌ಸಿ ಪ್ರಾಂಶುಪಾಲೆ ಡಾ.ಪ್ರತಿಭಾ ಪಟೇಲ್ ಉಪಸ್ಥಿತರಿದ್ದರು.

ಐಎಂಜೆ ಪ್ಲೇಸ್ಮೆಂಟ್ ಡೀನ್ ಅಮೃತಮಾಲ ವರದಿ ವಾಚಿಸಿದರು. ವಿದ್ಯಾರ್ಥಿ ಕ್ಷೇಮಪಾಲನಾ ಸಂಯೋಜಕಿ ಸೂಕ್ಷ್ಮ ಅಡಿಗ ಹಾಗೂ ಪ್ರೊ. ಫರಾನಾ ಇಮ್ರಾನ್ ಅತಿಥಿ ಪರಿಚಯ ನೀಡಿದರು, ಪ್ಲೇಸ್ಮೆಂಟ್ ಡೀನ್ ಅಕ್ಷತ ನಾಯಕ್ ವಂದಿಸಿದರು ಹಾಗೂ ಇಂಗ್ಲಿಷ್ ಪ್ರಾಧ್ಯಾಪಕಿ ರಾಜೇಶ್ವರಿ ನಿರೂಪಿಸಿದರು.ನೇಮಕಾತಿ: ಉದ್ಘಾಟನೆಯ ನಂತರ ನೇರ ಸಂದರ್ಶನ ಮತ್ತು ನೇಮಕಾತಿ ಪ್ರಕ್ರಿಯೆ ಜರುಗಿತು. 30ಕ್ಕೂ ಹೆಚ್ಚು ಪ್ರಸಿದ್ಧ ಕಂಪನಿಗಳು ತಮಗೆ ಅಗತ್ಯ ಉದ್ಯೋಗಿಗಳನ್ನು ಆಯ್ಕೆ ಮಾಡಿದವು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಮೂಡುಬಿದಿರೆ ಆಳ್ವಾಸ್ ಮೆಡಿಕಲ್ ಕಾಲೇಜು ನಾಳೆ ಉದ್ಘಾಟನೆ
ಡೋಂಗಿ ಪರಿಸರವಾದಿ ಹೇಳಿಕೆಗೆ ಮುತ್ತಣ ಖಂಡನೆ