- ಯಾವುದೇ ಇಲಾಖೆಯಲ್ಲಿ ತಪ್ಪು ಕಂಡು ಬಂದ್ರೆ ಶಿಸ್ತು ಕ್ರಮ ಖಚಿತ । ಹಣದ ಕೊರತೆ ಇದ್ರೆ ಕೇಳಿ, ಕೆಲಸದಲ್ಲಿ ವಿಳಂಬ ಆಗಬಾರದು
- ಜಿಲ್ಲೆಯಲ್ಲಿ ಒಟ್ಟು 1729 ಕೆರೆಗಳಿವೆ
-756 ಕೆರೆಗಳು ಒತ್ತುವರಿಯಾಗಿವೆ- 637 ಕೆರೆಗಳ ಒತ್ತುವರಿಯನ್ನು ತೆರವುಗೊಳಿಸಬೇಕಾಗಿದೆ
ಕನ್ನಡಪ್ರಭ ವಾರ್ತೆ, ಚಿಕ್ಕಮಗಳೂರು
ಜಿಲ್ಲಾ ಪಂಚಾಯ್ತಿ ಸಭಾಂಗಣದಲ್ಲಿ ಸೋಮವಾರ ನಡೆದ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನಾ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಯಾವುದೇ ಕಾರ್ಯಕ್ರಮದ ಅನುಷ್ಠಾನಕ್ಕೆ ಹಣದ ಕೊರತೆ ಇದ್ದರೆ ಗಮನಕ್ಕೆ ತರಬೇಕು. ಹಣ ಇಲ್ಲವೆಂಬ ನೆಪ ಹೇಳಿ ಸಮಯ ವ್ಯರ್ಥ ಮಾಡಬಾರದು. ಸಾರ್ವಜ ನಿಕರಿಗೂ ತೊಂದರೆ ನೀಡಬಾರದು ಎಂದು ಕಿವಿ ಮಾತು ಹೇಳಿದರು.
ಆಗ ರಾಜೇಂದರ್ ಕುಮಾರ್ ಕಟಾರಿಯಾ ಮಾತನಾಡಿ, ಕೆರೆಗಳನ್ನು ಸರ್ವೆ ಮಾಡಿಸಬೇಕು, ಒತ್ತುವರಿಯಾಗಿದ್ದರೆ ತೆರವುಗೊಳಿಸಬೇಕೆಂದು ಕಳೆದ ಒಂದು ವರ್ಷದ ಹಿಂದೆಯೇ ಸೂಚನೆ ನೀಡಲಾಗಿತ್ತು. ಆದರೆ, ನಿರೀಕ್ಷಿತ ಮಟ್ಟದಲ್ಲಿ ಪ್ರಗತಿ ಕಂಡು ಬರುತ್ತಿಲ್ಲ, ಒತ್ತುವರಿ ತೆರವುಗೊಳಿಸಿದರೆ ಸಾಲದು, ಆ ಪ್ರದೇಶವನ್ನು ವಶಕ್ಕೆ ತೆಗೆದುಕೊಂಡು, ಗಿಡಗಳನ್ನು ನೆಡಬೇಕು. ಈ ಕೆಲಸಕ್ಕೆ ಹಣದ ಕೊರತೆ ಇದ್ದರೆ ಗಮನಕ್ಕೆ ತರಬೇಕು ಎಂದು ತಿಳಿಸಿದರು.
ಜಿಲ್ಲಾಧಿಕಾರಿ ಮೀನಾ ನಾಗರಾಜ್ ಮಾತನಾಡಿ, ಕಳೆದ 2 ತಿಂಗಳಲ್ಲಿ ಜಿಲ್ಲೆಯಲ್ಲಿ ಮಳೆ ಮತ್ತು ಭೂ ಕುಸಿತದಿಂದ 4 ಮಂದಿ ಮೃತಪಟ್ಟಿದ್ದಾರೆ. 7 ಸೇತುವೆಗಳಿಗೆ ಹಾನಿ ಸಂಭವಿಸಿದೆ. ವಿದ್ಯುತ್ ಕಂಬಗಳು ಹಾಗೂ ಲೈನ್‌ಗಳಿಗೆ ಹಾನಿಯಾಗಿದೆ. ಇದರಿಂದ ಸುಮಾರು 3.20 ಕೋಟಿ ರು. ನಷ್ಟವಾಗಿದೆ. ಪ್ರಕೃತಿ ವಿಕೋಪದ ಸಂದರ್ಭದಲ್ಲಿ ಕಾರ್ಯಾಚರಣೆ ನಡೆಸಲು ಹೋಂ ಗಾರ್ಡ್, ಈಜು ತಜ್ಞರನ್ನು ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ಹೇಳಿದಾಗ, ಕಟಾರಿಯಾ ಮಾತನಾಡಿ, ಭೂ ಕುಸಿತ, ರಸ್ತೆ ಕುಸಿತ ಉಂಟಾದಾಗ ಜನರಿಗೆ ಒದಗಿಸುವ ಮೂಲಭೂತ ಸೌಲಭ್ಯದಲ್ಲಿ ಯಾವುದೇ ರೀತಿಯಲ್ಲೂ ಕೊರತೆಯಾಗಬಾರದು ಎಂದು ಸೂಚಿಸಿದರು.ಬಿತ್ತನೆ ಬೀಜ:
117748 ಮೆಟ್ರಿಕ್ ಟನ್ ರಸಗೊಬ್ಬರದ ಬೇಡಿಕೆ ಇದ್ದು, ಈವರೆಗೆ 25146 ಮೆಟ್ರಿಕ್ ಟನ್ ವಿತರಣೆ ಮಾಡಲಾಗಿದೆ. ಇನ್ನು 41099 ಮೆಟ್ರಿಕ್ ಟನ್ ರಸಗೊಬ್ಬರ ದಾಸ್ತಾನು ಇದೆ ಎಂದು ಹೇಳಿದರು.
ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ನಾರಾಯಣರಡ್ಡಿ ಕನಕರಡ್ಡಿ ಹಾಗೂ ವಿವಿಧ ಇಲಾಖೆಗಳ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು. 10 ಕೆಸಿಕೆಎಂ 1ಜಿಕ್ಕಮಗಳೂರಿನ ಜಿಪಂ ಸಭಾಂಗಣದಲ್ಲಿ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ರಾಜೇಂದರ್ ಕುಮಾರ್ ಕಟಾರಿಯಾ ಅವರ ಅಧ್ಯಕ್ಷತೆಯಲ್ಲಿ ಸೋಮವಾರ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನಾ ಸಭೆ ನಡೆಯಿತು. ಡಿಸಿ ಮೀನಾ ನಾಗರಾಜ್, ಜಿಪಂ ಸಿಇಒ ಡಾ. ಗೋಪಾಲಕೃಷ್ಣ ಇದ್ದರು.