ತಂತ್ರಜ್ಞಾನ ಬಳಸಿ ಶಿಕ್ಷಣ ನೀಡಿ: ಮಂತರ್ ಗೌಡ

KannadaprabhaNewsNetwork |  
Published : Sep 10, 2026, 02:30 AM IST
ಹೇಳಿದರು | Kannada Prabha

ಸಾರಾಂಶ

ಶಿಕ್ಷಕರು ತಂತ್ರಜ್ಞಾನವನ್ನು ಬಳಸಿಕೊಂಡು ಮಕ್ಕಳಿಗೆ ತಮ್ಮ ಬದುಕಿನ ಶಿಕ್ಷಣ ನೀಡುವ ಮೂಲಕ ಅವರನ್ನು ಉತ್ತಮ ನಾಗರಿಕರನ್ನಾಗಿ ರೂಪಿಸಬೇಕು ಎಂದು ಶಾಸಕ ಡಾ.ಮಂತರ್ ಗೌಡ ಹೇಳಿದರು.

ಕನ್ನಡಪ್ರಭ ವಾರ್ತೆ ಸೋಮವಾರಪೇಟೆ

ಶಿಕ್ಷಕರು ತಂತ್ರಜ್ಞಾನವನ್ನು ಬಳಸಿಕೊಂಡು ಮಕ್ಕಳಿಗೆ ತಮ್ಮ ಬದುಕಿನ ಶಿಕ್ಷಣ ನೀಡುವ ಮೂಲಕ ಅವರನ್ನು ಉತ್ತಮ ನಾಗರಿಕರನ್ನಾಗಿ ರೂಪಿಸಬೇಕು ಎಂದು ಶಾಸಕ ಡಾ.ಮಂತರ್ ಗೌಡ ಹೇಳಿದರು.

ಶಿಕ್ಷಕರ ಕಲ್ಯಾಣನಿಧಿ ಮತ್ತು ವಿದ್ಯಾರ್ಥಿಗಳ ಕ್ಷೇಮಾಭಿವೃದ್ದಿ ನಿಧಿ ಹಾಗೂ ಶಿಕ್ಷಕರ ದಿನಾಚರಣೆ ಸಮಿತಿ ವತಿಯಿಂದ ಪಟ್ಟಣದ ಒಕ್ಕಲಿಗರ ಸಮುದಾಯ ಭವನದಲ್ಲಿ ಸೋಮವಾರ ಆಯೋಜಿಸಲಾಗಿದ್ದ ಶಿಕ್ಷಕರ ದಿನಾಚರಣೆ ಮತ್ತು ನಿವೃತ್ತ ಶಿಕ್ಷಕರಿಗೆ ಸನ್ಮಾನ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಸರ್ಕಾರಿ ಶಾಲೆಗಳಲ್ಲಿ ಗುಣಮಟ್ಟದ ಶಿಕ್ಷಣ ನೀಡಲು ಆಧುನಿಕ ತಂತ್ರಜ್ಞಾನ ಬೇಕು. ಇದಕ್ಕೆ ಪೂರಕವಾಗಿ ಮುಂದಿನ ದಿನಗಳಲ್ಲಿ ಸರ್ಕಾರಿ ಶಾಲಾ ಮಕ್ಕಳಿಗೆ ಟ್ಯಾಬ್ ನೀಡುವ ಮೂಲಕ ಇನ್ನಷ್ಟು ಪರಿಣಾಮಕಾರಿ ಭೋದನೆ ದೊರಕಲಿ ಎಂಬ ಚಿಂತನೆ ನಡೆಸಲಾಗಿದೆ. ಶಿಕ್ಷಕರು ವಿದ್ಯಾರ್ಥಿಗಳಲ್ಲಿ ಪ್ರೀತಿ ವಿಶ್ವಾಸ ಹಾಗೂ ಅವರಲ್ಲಿ ಸಂತಸದ ಕಲಿಕೆಗೆ ಪ್ರೇರೇಪಿಸಲು ವಿಶೇಷ ಗಮನ ಹರಿಸಬೇಕು. ಮೌಲ್ಯ ಮತ್ತು ಶಿಕ್ಷಣವು ಒಂದು ನಾಣ್ಯದ ಎರಡು ಮುಖಗಳು. ಇಂತಹ ಶಿಕ್ಷಣದ ಅವಶ್ಯಕತೆ ಇಂದಿನ ಮಕ್ಕಳಿಗೆ ಅಗತ್ಯವಿದೆ ಎಂದರು.

ಮುಖ್ಯ ಭಾಷಣಕಾರರಾಗಿ ಪಾಲ್ಗೊಂಡಿದ್ದ ಹಳೆಬೀಡು ಎಸ್ ಜಿ ಆರ್ ಪದವಿ ಪೂರ್ವ ಕಾಲೇಜಿನ ಅರ್ಥಶಾಸ್ತ್ರ ಉಪನ್ಯಾಸಕ ಜಿ.ಎನ್. ಸಿದ್ದೇಶ್ ಮಾತನಾಡಿ, ಇಂದು ಸ್ವಾಸ್ಥ್ಯ ಸಮಾಜ ನಿರ್ಮಾಣವಾಗಬೇಕಾದರೆ ಉತ್ತಮ ಮೌಲ್ಯಗಳಿಂದ ಮಾತ್ರ ಸಾಧ್ಯ. ಶಿಕ್ಷಕರು ಮೌಲ್ಯಯುತ ಶಿಕ್ಷಣ ನೀಡಿದರೆ ಮಾತ್ರ ಮಕ್ಕಳು ಸಮಾಜದಲ್ಲಿ ಉತ್ತಮ ನಾಗರಿಕರಾಗಿ ರೂಪುಗೊಳ್ಳಲು ಸಾಧ್ಯ. ಶಿಕ್ಷಕನಾದವನಿಗೆ ಸಂವೇದನಾಶೀಲತೆ, ಸಮಯಪಾಲನೆ, ವಸ್ತ್ರ ಸಂಹಿತೆ ಅಗತ್ಯ. ಇದರೊಂದಿಗೆ ಸಹನೆ ಮತ್ತು ತಾಳ್ಮೆಯೂ ಮುಖ್ಯ. ನಕಾರಾತ್ಮಕ ಚಿಂತನೆಗಳನ್ನು ದೂರವಿರಿಸಿ ಸಕಾರಾತ್ಮಕವಾಗಿ ಮಕ್ಕಳ ಬೆಳವಣಿಗೆಯತ್ತ ಗಮನಹರಿಸಬೇಕೆಂದು ಕಿವಿಮಾತು ಹೇಳಿದರು.

ಗ್ಯಾರಂಟಿ ಯೋಜನೆಗಳ ಪ್ರಾಧಿಕಾರದ ಅಧ್ಯಕ್ಷ ಜಿ.ಎಂ. ಕಾಂತರಾಜು, ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಪರಮೇಶ್ ಕುಮಾರ್, ಕ್ಷೇತ್ರ ಶಿಕ್ಷಣಾಧಿಕಾರಿ ಎಂ. ಕೃಷ್ಣಪ್ಪ, ಶಿಕ್ಷಕರ ಸಂಘದ ರಾಜ್ಯ ಪ್ರಧಾನ ಕಾರ್ಯದರ್ಶಿ ಎಚ್.ಎಸ್. ಚೇತನ್, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಜಿಲ್ಲಾಧ್ಯಕ್ಷ ಪ್ರಸನ್ನ ಕುಮಾರ್, ರಾಜ್ಯ ಸರ್ಕಾರಿ ನೌಕರರ ಸಂಘದ ತಾಲೂಕು ಘಟಕದ ಅಧ್ಯಕ್ಷ ಪ್ರದೀಪ್ ಇದ್ದರು.

ಪ್ರೌಢಶಾಲಾ ಮತ್ತು ಪ್ರಾಥಮಿಕ ಶಾಲೆಯಲ್ಲಿ ಸೇವೆ ಸಲ್ಲಿಸಿ ನಿವೃತ್ತರಾದ ಶಿಕ್ಷಕರನ್ನು ಸನ್ಮಾನಿಸಲಾಯಿತು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಕುಶಾಲನಗರದಲ್ಲಿ ಅಂತಾರಾಷ್ಟ್ರೀಯ ಸಾಕ್ಷರತಾ ದಿನಾಚರಣೆ
ಕುಶಾಲನಗರ: ಸ್ವಯಂಸೇವಕರ ತರಬೇತಿ ಕಾರ್ಯಾಗಾರ ಉದ್ಘಾಟನೆ