ಪಡಿತರ ಅಕ್ಕಿ ಕಳವು ಪ್ರಕರಣದ ನಿಷ್ಪಕ್ಷಪಾತ ತನಿಖೆ: ಸಚಿವ ದರ್ಶನಾಪುರ

KannadaprabhaNewsNetwork | Published : Nov 28, 2023 12:30 AM

ಸಾರಾಂಶ

ಶಹಾಪುರದಲ್ಲಿ ಸುಮಾರು 2 ಕೋಟಿ ರು. ಪಡಿತರ ಅಕ್ಕಿ ಕಳವು ಪ್ರಕರಣದ ನಿಷ್ಪಕ್ಷಪಾತ ತನಿಖೆ ಮಾಡಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಶರಣಬಸಪ್ಪಗೌಡ ದರ್ಶನಾಪುರ ಹೇಳಿದರು. ಸಮೀಪದ ಆರಬೋಳ ಕಲ್ಯಾಣ ಮಂಟಪದಲ್ಲಿ ಹಮ್ಮಿಕೊಂಡಿದ್ದ ಜನತಾ ದರ್ಶನ ಕಾರ್ಯಕ್ರಮದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಈ ಪ್ರಕರಣದಲ್ಲಿ ತಪ್ಪಿತಸ್ಥರನ್ನು ರಕ್ಷಿಸುವ ಪ್ರಶ್ನೆ ಬರುವುದಿಲ್ಲ ಎಂದರು.

ಶಹಾಪುರದಲ್ಲಿ ಸುಮಾರು 2 ಕೋಟಿ ರು. ಪಡಿತರ ಅಕ್ಕಿ ಕಳವು

ಕನ್ನಡಪ್ರಭ ವಾರ್ತೆ ಶಹಾಪುರ ಶಹಾಪುರದಲ್ಲಿ ಸುಮಾರು 2 ಕೋಟಿ ರು. ಪಡಿತರ ಅಕ್ಕಿ ಕಳವು ಪ್ರಕರಣದ ನಿಷ್ಪಕ್ಷಪಾತ ತನಿಖೆ ಮಾಡಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಶರಣಬಸಪ್ಪಗೌಡ ದರ್ಶನಾಪುರ ಹೇಳಿದರು. ಸಮೀಪದ ಆರಬೋಳ ಕಲ್ಯಾಣ ಮಂಟಪದಲ್ಲಿ ಹಮ್ಮಿಕೊಂಡಿದ್ದ ಜನತಾ ದರ್ಶನ ಕಾರ್ಯಕ್ರಮದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಈ ಪ್ರಕರಣದಲ್ಲಿ ತಪ್ಪಿತಸ್ಥರನ್ನು ರಕ್ಷಿಸುವ ಪ್ರಶ್ನೆ ಬರುವುದಿಲ್ಲ ಎಂದರು.ಅಕ್ಕಿ ಅಕ್ರಮವನ್ನು ಬಯಲಿಗೆ ತಂದದ್ದು ಜಿಲ್ಲಾಡಳಿತ. ಇದು ಬೇರೆ ಯಾರೋ ದೂರು ಕೊಟ್ಟು ತನಿಖೆ ಮಾಡಿಸಿದ್ದಲ್ಲ. ಇದರ ಬಗ್ಗೆ ಜಿಲ್ಲಾಡಳಿತ ದಿಟ್ಟ ಕ್ರಮ ಕೈಗೊಂಡಿದೆ. ಸಂಬಂಧಪಟ್ಟವರ ಮೇಲೆ ಈಗಾಗಲೇ ಪ್ರಕರಣ ದಾಖಲಿಸಲಾಗಿದೆ ಎಂದ ಅವರು, ಇನ್ನೂ ಯಾರ ಮೇಲಾದರೂ ಕೇಸು ದಾಖಲಿಸಬೇಕೆಂದು ತಾವು (ಮಾಧ್ಯಮಗಳು) ಹೇಳಿದರೆ ಅವರ ಮೇಲೆಯೂ ಕೇಸು ದಾಖಲಿಸುತ್ತೇವೆ ಎಂದು ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯಿಸಿದರು.ತನಿಖೆ ಕೈಗೊಳ್ಳಲಾಗಿದೆ: ಜಿಲ್ಲಾಧಿಕಾರಿ ಡಾ. ಸುಶೀಲಾ6077 ಕ್ವಿಂಟಲ್ ಅಕ್ಕಿ ದಾಸ್ತಾನಿನಲ್ಲಿ ವ್ಯತ್ಯಾಸ ಕಂಡು ಬಂದಿರುವುದರಿಂದ, ಜಿಲ್ಲಾಡಳಿತ ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದು, ಜಿಲ್ಲಾಡಳಿತ ವತಿಯಿಂದ ತನಿಖೆ ತಂಡ ರಚಿಸಲಾಗಿದೆ ಎಂದು ಜಿಲ್ಲಾಧಿಕಾರಿ ಡಾ. ಬಿ. ಸುಶೀಲಾ ಹೇಳಿದರು.ಸಮೀಪದ ಆರಬೋಳ ಕಲ್ಯಾಣ ಮಂಟಪದಲ್ಲಿ ನಡೆದ ಜನತಾ ದರ್ಶನ ಕಾರ್ಯಕ್ರಮದಲ್ಲಿ ಭಾಗವಹಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ತನಿಖಾ ತಂಡದಲ್ಲಿ ಜಿಲ್ಲಾ ಪಂಚಾಯ್ತಿ ಸಿಇಒ, ಎಸಿ, ಡಿಡಿ, ಎಪಿಎಂಸಿ, ಸ್ಟೇಟ್ ವತಿಯಿಂದ ಕಲಬುರಗಿ ಹಾಗೂ ಬೀದರ್ ಜಿಲ್ಲಾ ಆಹಾರ ಇಲಾಖೆಯ ಉಪನಿರ್ದೇಶಕರು ಸಹ ಈ ತಂಡದಲ್ಲಿದ್ದಾರೆ. ಈ ತಂಡ ಸಮಗ್ರ ತನಿಖೆ ನಡೆಸಿ 2-3 ದಿನದಲ್ಲಿ ವರದಿ ಸಲ್ಲಿಸಲಿದೆ. ಈ ವರದಿಯನ್ನು ನೋಡಿಕೊಂಡು ಮುಂದಿನ ಕ್ರಮ ಜರುಗಿಸಲಾಗುವುದು. ಈಗಾಗಲೇ ಪ್ರಕರಣ ದಾಖಲಿಸಲಾಗಿದೆ. ಇದರಲ್ಲಿ ಯಾರೇ ಶಾಮಿಲಾಗಿದ್ದರೂ ಅವರ ವಿರುದ್ಧ ಜಿಲ್ಲಾಡಳಿತ ಕ್ರಮ ಕೈಗೊಳ್ಳುತ್ತದೆ ಎಂದು ತಿಳಿಸಿದರು.

Share this article