5 ದಿನಗಳ ಬ್ಯಾಂಕಿಂಗ್ ವ್ಯವಸ್ಥೆ ಜಾರಿಗೊಳಿಸಿ

KannadaprabhaNewsNetwork |  
Published : Jan 28, 2026, 01:45 AM IST
27ಕೆಡಿವಿಜಿ1, 2, 3-ಐದು ದಿನಗಳ ಬ್ಯಾಂಕಿಂಗ್ ವ್ಯವಸ್ಥೆ ಜಾರಿಗೆ ಒತ್ತಾಯಿಸಿ ದಾವಣಗೆರೆ ಮಂಡಿಪೇಟೆಯ ಸ್ಟೇಟ್ ಬ್ಯಾಂಕ್ ಇಂಡಿಯಾ ಶಾಖೆ ಎದುರು ಯುಎಫ್‌ಬಿಯು ಬ್ಯಾಂಕ್ ಕಾರ್ಮಿಕ ಸಂಘಗಳ ಸಂಯುಕ್ತ ವೇದಿಕೆ ಜಿಲ್ಲಾ ಘಟಕದ ನೇತೃತ್ವದಲ್ಲಿ ಬ್ಯಾಂಕ್ ನೌಕರರು ರಾಷ್ಟ್ರ ವ್ಯಾಪಿ ಕರೆಯ ಮೇರೆಗೆ ಬ್ಯಾಂಕ್ ಬಂದ್ ಮಾಡಿ, ಪ್ರತಿಭಟಿಸಿದರು. | Kannada Prabha

ಸಾರಾಂಶ

ದಶಕಗಳ ಬೇಡಿಕೆಯಾದ 5 ದಿನಗಳ ಬ್ಯಾಂಕಿಂಗ್ ವ್ಯವಸ್ಥೆ ಜಾರಿಗೊಳಿಸುವಂತೆ ಕೇಂದ್ರ ಸರ್ಕಾರ, ಕೇಂದ್ರ ಹಣಕಾಸು ಸಚಿವಾಲಯ, ಹಣಕಾಸು ಸೇವೆಗಳ ಇಲಾಖೆಗೆ ಒತ್ತಾಯಿಸಿ ಯುಎಫ್‌ಬಿಯು ಬ್ಯಾಂಕ್ ಕಾರ್ಮಿಕ ಸಂಘಗಳ ಸಂಯುಕ್ತ ವೇದಿಕೆ ಜಿಲ್ಲಾ ಘಟಕ ನೇತೃತ್ವದಲ್ಲಿ ರಾಷ್ಟ್ರವ್ಯಾಪಿ ಕರೆಯ ಮೇರೆಗೆ ನಗರದಲ್ಲಿ ಬ್ಯಾಂಕ್‌ಗಳನ್ನು ಮಂಗಳವಾರ ಬಂದ್ ಮಾಡಿ, ಮುಷ್ಕರ ನಡೆಸಿದ್ದಾರೆ.

- ನೌಕರರ ಮುಷ್ಕರದಿಂದ ತೊಂದರೆಗೆ ಕೇಂದ್ರವೇ ಹೊಣೆ: ರಾಘವೇಂದ್ರ ನಾಯರಿ । - - -

ಕನ್ನಡಪ್ರಭ ವಾರ್ತೆ ದಾವಣಗೆರೆ

ದಶಕಗಳ ಬೇಡಿಕೆಯಾದ 5 ದಿನಗಳ ಬ್ಯಾಂಕಿಂಗ್ ವ್ಯವಸ್ಥೆ ಜಾರಿಗೊಳಿಸುವಂತೆ ಕೇಂದ್ರ ಸರ್ಕಾರ, ಕೇಂದ್ರ ಹಣಕಾಸು ಸಚಿವಾಲಯ, ಹಣಕಾಸು ಸೇವೆಗಳ ಇಲಾಖೆಗೆ ಒತ್ತಾಯಿಸಿ ಯುಎಫ್‌ಬಿಯು ಬ್ಯಾಂಕ್ ಕಾರ್ಮಿಕ ಸಂಘಗಳ ಸಂಯುಕ್ತ ವೇದಿಕೆ ಜಿಲ್ಲಾ ಘಟಕ ನೇತೃತ್ವದಲ್ಲಿ ರಾಷ್ಟ್ರವ್ಯಾಪಿ ಕರೆಯ ಮೇರೆಗೆ ನಗರದಲ್ಲಿ ಬ್ಯಾಂಕ್‌ಗಳನ್ನು ಮಂಗಳವಾರ ಬಂದ್ ಮಾಡಿ, ಮುಷ್ಕರ ನಡೆಸಿದರು.

ನಗರದ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ ಮಂಡಿಪೇಟೆ ಶಾಖೆ ಎದುರು ಸಂಘಟನೆ ನೇತೃತ್ವದಲ್ಲಿ ಜಿಲ್ಲಾ ಬ್ಯಾಂಕ್ ಉದ್ಯೋಗಿಗಳು ಅಖಿಲ ಭಾರತ ಬ್ಯಾಂಕ್ ಮುಷ್ಕರ ನಡೆಸಿ, ಘೋಷಣೆಗಳನ್ನು ಕೂಗಿ ಕೇಂದ್ರ ಸರ್ಕಾರ, ಕೇಂದ್ರ ಹಣಕಾಸು ಸಚಿವಾಲಯ, ಹಣಕಾಸು ಸೇವೆಗಳ ಇಲಾಖೆಗಳಿಗೆ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿದರು.

ಸಂಘಟನೆ ಜಿಲ್ಲಾ ಸಂಚಾಲಕ, ಕರ್ನಾಟಕ ಪ್ರದೇಶ ಬ್ಯಾಂಕ್‌ ಎಂಪ್ಲಾಯೀಸ್ ಫೆಡರೇಷನ್ ಜಂಟಿ ಕಾರ್ಯದರ್ಶಿ ಕೆ.ರಾಘವೇಂದ್ರ ನಾಯರಿ ಮಾತನಾಡಿ, ಬ್ಯಾಂಕ್ ನೌಕರರ ದಶಕಗಳ ಬೇಡಿಕೆಯಾದ 5 ದಿನಗಳ ಬ್ಯಾಂಕಿಂಗ್ ವ್ಯವಸ್ಥೆ ಜಾರಿಗೊಳಿಸಬೇಕು. ದಶಕಗಳಿಂದಲೂ ನೌಕರರ ಬೇಡಿಕೆಗಳನ್ನು ಮುಂದಿಟ್ಟುಕೊಂಡು ಹೋರಾಟ ನಡೆಸಲಾಗುತ್ತಿದೆ. ಆದರೆ, ಕೇಂದ್ರ ಸರ್ಕಾರ ಸ್ಪಂದಿಸದ ಹಿನ್ನೆಲೆ ಮುಷ್ಕರ ನಡೆಸಲಾಗುತ್ತಿದೆ ಎಂದರು.

ಇಂಡಿಯನ್ ಬ್ಯಾಂಕ್ ಅಸೋಸಿಯೇಷನ್ ಹಾಗೂ ಬ್ಯಾಂಕ್ ಕಾರ್ಮಿಕ ಸಂಘಗಳ‌ ನಡುವೆ 2024ರ ಮಾ.8ರಂದು ಒಪ್ಪಂದವಾಗಿದೆ. ಆದರೆ. 2 ವರ್ಷವಾದರೂ ಬೇಡಿಕೆ ಈಡೇರಿಲ್ಲ. ಪ್ರಸ್ತುತ ಬ್ಯಾಂಕ್ ಉದ್ಯೋಗಿಗಳು ಅತಿ ಒತ್ತಡದಲ್ಲಿ ಕೆಲಸ ಮಾಡುತ್ತಿದ್ದಾರೆ. ಹೆಚ್ಚುತ್ತಿರುವ ವ್ಯವಹಾರಕ್ಕೆ ತಕ್ಕನಂತೆ ಉದ್ಯೋಗಿಗಳ ನೇಮಕಾತಿಯೂ ಆಗುತ್ತಿಲ್ಲ. ವಾರದ ದಿನಗಳಲ್ಲಿ ನೌಕರರು ರಾತ್ರಿ 10 ಗಂಟೆಯಾದರೂ ಮನೆಗೆ ಹಿಂತಿರುಗಲು ಸಾಧ್ಯವಾಗುತ್ತಿಲ್ಲ ಎಂದು ದೂರಿದರು.

ಕೇಂದ್ರ ಹಣಕಾಸು ಇಲಾಖೆ ಅನಗತ್ಯ ಕಾಲಹರಣ ಮಾಡುತ್ತಿದೆ. ನೌಕರರ ಬೇಡಿಕೆ ಈಡೇರಿಕೆಗಾಗಿ ಅಖಿಲ ಭಾರತ ಬ್ಯಾಂಕ್ ಮುಷ್ಕರ ನಡೆಸೋದು ಅನಿವಾರ್ಯವಾಗಿದೆ. ಇಂದಿನ ಮುಷ್ಕರದಲ್ಲಿ 8 ಲಕ್ಷ ಬ್ಯಾಂಕ್ ನೌಕರರು- ಅಧಿಕಾರಿಗಳು ದೇಶವ್ಯಾಪಿ ಪಾಲ್ಗೊಂಡು, ಬೀದಿಗಿಳಿದು ಸರ್ಕಾರದ ವಿಳಂಬ ಧೋರಣೆ ವಿರುದ್ಧ ಪ್ರತಿಭಟಿಸುತ್ತಿದ್ದೇವೆ. ಜ.24ರಿಂದ 3 ದಿನ ಸತತವಾಗಿ ಬ್ಯಾಂಕ್ ರಜೆ ಇದೆ. ಜ.27ರಂದು ಬ್ಯಾಂಕ್ ನೌಕರರ ಮುಷ್ಕರದಿಂದ ಸಾರ್ವಜನಿಕರಿಗೆ ಬ್ಯಾಂಕ್ ಸೇವೆಯಲ್ಲಿ ವ್ಯತ್ಯಯವಾಗುವ ಸಮಸ್ಯೆಗೆ ಕೇಂದ್ರವೇ ನೇರ ಹೊಣೆ ಎಂದು ಕೆ.ರಾಘವೇಂದ್ರ ಹೇಳಿದರು.

ಪ್ರತಿಭಟನೆಯಲ್ಲಿ ಮುಖಂಡರಾದ ಕೆ.ವಿಶ್ವನಾಥ ಬಿಲ್ಲವ, ಎಚ್.ಎಸ್.ತಿಪ್ಪೇಸ್ವಾಮಿ, ಪ್ರದೀಪ ಪಾಟೀಲ್, ಸುನಿಲ ಮ್ಯಾಗೇರಿ, ಸಿದ್ಧಾರ್ಥ ಸಿಂಗ್, ಎಂ.ಪಿ.ಕಿರಣಕುಮಾರ, ಕೆ.ವಿಜಯಕುಮಾರ, ಸಿ. ದುರುಗಪ್ಪ, ವಿಶ್ವಚೇತನ, ಅನುರಾಧಾ ಮುತಾಲಿಕ್, ದೀಪಾ ಗುಡಿ, ಎಂ.ಶಮಂತ್, ಜಿ.ಟಿ.ಬಸವರಾಜ, ಎಸ್.ರಶ್ಮಿ, ಮಧುಸ್ವಿನಿ ದೇಸಾಯಿ, ಎಸ್.ಪ್ರಶಾಂತ, ಅನಿಲಕುಮಾರ, ಗ್ರಾಮೀಣ ಬ್ಯಾಂಕಿನ ನಾಗರಾಜ ನಾಶಿ, ಮಹಮ್ಮದ್ ರಫೀ, ಪಿ.ಎನ್.ಸಿದ್ಧಾರ್ಥ, ಶ್ರೀಹರ್ಷ, ಮೂರ್ತಿ ನಾಯ್ಕ, ಎಂ‌.ಎಂ.ಸಿದ್ದಲಿಂಗಯ್ಯ, ಎಂ.ಡಿ.ವಿದ್ಯಾಸಾಗರ, ಅಣ್ಣಪ್ಪ, ನಂದಾ, ಕೆ.ಜಯಲಕ್ಷ್ಮಿ, ಆಕನೂರು ತಿಪ್ಪೇಸ್ವಾಮಿ, ಸೈಯದ್ ಚಾಂದಬಾಷಾ, ಜಿ.ಟಿ.ಶಕ್ತಿಪ್ರಸಾದ, ಆರ್.ಮಂಜಪ್ಪ, ಎಚ್.ಜೆ.ಆಶಾ ಇತರರು ಇದ್ದರು.

- - -

(ಬಾಕ್ಸ್‌)

* ಈಗಾಗಲೇ ಅನೇಕ ರಾಷ್ಟ್ರಗಳಲ್ಲಿ ಜಾರಿ ಕೇಂದ್ರ ಸರ್ಕಾರದ ಅಧೀನದ ಅನೇಕ ಇಲಾಖೆಗಳು, ಜೀವ ವಿಮೆ, ಸಾಮಾನ್ಯ ವಿಮೆ, ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ, ಸೆಬಿ, ನಬಾರ್ಡ್ ಮೊದಲಾದವು ವಾರಕ್ಕೆ 5 ದಿನ ಮಾತ್ರ ಕೆಲಸ ಮಾಡುತ್ತಿವೆ‌. ಜಾಗತಿಕ ಮಟ್ಟದಲ್ಲೂ ಅಮೆರಿಕಾ, ಇಂಗ್ಲೆಂಡ್, ಕೆನಡಾ, ಜಪಾನ್, ಆಸ್ಟ್ರೇಲಿಯಾ, ಚೀನಾ, ರಷ್ಯಾ, ಬ್ರೆಜಿಲ್, ಸೌತ್ ಆಫ್ರಿಕಾ, ಮಲೇಷ್ಯಾ, ಇಂಡೋನೇಷ್ಯಾ ಸೇರಿದಂತೆ ಅನೇಕ ರಾಷ್ಟ್ರಗಳಲ್ಲಿ 5 ದಿನಗಳ ಬ್ಯಾಂಕಿಂಗ್ ಪದ್ಧತಿಯೇ ಜಾರಿಯಲ್ಲಿ ಇದೆ. ಐದು ದಿನಗಳ ಬ್ಯಾಂಕಿಂಗ್ ವ್ಯವಸ್ಥೆ ಬಂದರೆ ನೌಕರರ ಕಾರ್ಯಕ್ಷಮತೆ ಹೆಚ್ಚಾಗುವುದರಲ್ಲಿ ಸಂಶಯವಿಲ್ಲ ಎಂದು ರಾಘವೇಂದ್ರ ನಾಯರಿ ಹೇಳಿದರು.

- - -

-27ಕೆಡಿವಿಜಿ1, 2, 3.ಜೆಪಿಜಿ:

ಐದು ದಿನಗಳ ಬ್ಯಾಂಕಿಂಗ್ ವ್ಯವಸ್ಥೆ ಜಾರಿಗೆ ಒತ್ತಾಯಿಸಿ ದಾವಣಗೆರೆ ಮಂಡಿಪೇಟೆಯ ಸ್ಟೇಟ್ ಬ್ಯಾಂಕ್ ಇಂಡಿಯಾ ಶಾಖೆ ಎದುರು ಯುಎಫ್‌ಬಿಯು ಬ್ಯಾಂಕ್ ಕಾರ್ಮಿಕ ಸಂಘಗಳ ಸಂಯುಕ್ತ ವೇದಿಕೆ ಜಿಲ್ಲಾ ಘಟಕದ ನೇತೃತ್ವದಲ್ಲಿ ನೌಕರರು ಬ್ಯಾಂಕ್ ಬಂದ್ ಮಾಡಿ ಪ್ರತಿಭಟಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಮನಸ್ಸಿನ ಗೊಂದಲ ಪರಿಹಾರಕ್ಕೆ ಧ್ಯಾನ ಸೂಕ್ತ ಮಾರ್ಗ: ಡಾ. ಹೆಗ್ಗಡೆ
ಭಾರತ ಬಲಿಷ್ಟವಾಗಲು ಒಗ್ಗಟ್ಟಿನ ಮಂತ್ರ ಅಗತ್ಯ: ಪ್ರೊ. ಹರಿಕೃಷ್ಣ ಭಟ್