ಆರೋಗ್ಯ ವಿಜ್ಞಾನದಲ್ಲಿ ಎಐ ಅಳವಡಿಸಿಕೊಳ್ಳಿ: ಡಾ. ಅರುಣ

KannadaprabhaNewsNetwork |  
Published : Jun 07, 2026, 02:00 AM IST
ಎಸ್‌ಡಿಎಂ ವಿಶ್ವವಿದ್ಯಾಲಯದ ೪ನೇ ಘಟಿಕೋತ್ಸವ | Kannada Prabha

ಸಾರಾಂಶ

ವಿದ್ಯಾರ್ಥಿಗಳು ಪರಸ್ಪರ ವಿಷಯ ಹಂಚಿಕೊಂಡು ಸಂಸ್ಥೆಯ ರಾಯಭಾರಿಗಳಂತೆ ಕೆಲಸ ಮಾಡುತ್ತಿದ್ದಾರೆ. ವೈದ್ಯರು ತಮ್ಮ ಸ್ವಸ್ವಾರ್ಥ್ಯವನ್ನು ಹೆಚ್ಚಿಸಿಕೊಂಡು ರೋಗಿಗಳ ಸೇವೆಗೆ ಸದಾ ಲಭ್ಯವಿರಬೇಕು.

ಧಾರವಾಡ:

ಇಂದಿನ ಬದಲಾಗುತ್ತಿರುವ ಎಐ ಮತ್ತು ಯಂತ್ರ ಕಲಿಕೆಯನ್ನು ಆರೋಗ್ಯ ವಿಜ್ಞಾನ ವೃತ್ತಿಗಳಲ್ಲಿ ಅಳವಡಿಸಿಕೊಳ್ಳಬೇಕೆಂದು ವಿಜಯಪುರದ ಬಿಎಲ್‌ಡಿಇ ವಿಶ್ವವಿದ್ಯಾಲಯದ ಉಪಕುಲಪತಿ ಡಾ. ಅರುಣ ಸಿ. ಇನಾಮದಾರ ಹೇಳಿದರು.

ಶನಿವಾರ ಇಲ್ಲಿನ ಶ್ರೀಧರ್ಮಸ್ಥಳ ಮಂಜುನಾಥೇಶ್ವರ ವಿಶ್ವವಿದ್ಯಾಲಯದ ನಾಲ್ಕನೇ ಘಟಿಕೋತ್ಸವದ ಮುಖ್ಯ ಅತಿಥಿಯಾಗಿ ಪಾಲ್ಗೊಂಡು ಮಾತನಾಡಿದ ಅವರು, ಪ್ರಾಮಾಣಿಕವಾಗಿ ಕೆಲಸ ಮಾಡಿದಾಗ ಸಾಧನೆಗಳು ತನ್ನಿಂದ ತಾನಾಗಿಯೇ ಬರುತ್ತೇವೆ ಎಂದು ಹೇಳಿದರು.

ವಿವಿಯ ಆಡಳಿತ ಮಂಡಳಿ ಸದಸ್ಯ, ಎಸ್‌ಡಿಎಂಇ ಸೊಸೈಟಿ ಉಪಾಧ್ಯಕ್ಷ ಡಿ. ಸುರೇಂದ್ರಕುಮಾರ ಮಾತನಾಡಿ, ವಿದ್ಯಾರ್ಥಿಗಳು ಪರಸ್ಪರ ವಿಷಯ ಹಂಚಿಕೊಂಡು ಸಂಸ್ಥೆಯ ರಾಯಭಾರಿಗಳಂತೆ ಕೆಲಸ ಮಾಡುತ್ತಿದ್ದಾರೆ. ವೈದ್ಯರು ತಮ್ಮ ಸ್ವಸ್ವಾರ್ಥ್ಯವನ್ನು ಹೆಚ್ಚಿಸಿಕೊಂಡು ರೋಗಿಗಳ ಸೇವೆಗೆ ಸದಾ ಲಭ್ಯವಿರಬೇಕೆಂದು ತಿಳಿಸಿದರು.

ಎಸ್‌ಡಿಎಂ ವಿವಿ ಗೌರವಾನ್ವಿತ ಕುಲಪತಿ ಡಿ. ವೀರೇಂದ್ರ ಹೆಗ್ಗಡೆ ವಿದ್ಯಾರ್ಥಿಗಳಿಗೆ ಆಶೀರ್ವಚನ ನೀಡಿದರು. ಈ ವೇಳೆ ೩೯೭ ಪದವೀಧರರು, ೧೮೦ ಸ್ನಾತ್ತಕೋತ್ತರ ಪದವೀಧರರು ಹಾಗೂ ೭ ಡಾಕ್ಟರೇಟ್ ಪದವಿ ವಿತರಿಸಲಾಯಿತು. ೧೦ ಪ್ರತಿಭಾವಂತ ವಿದ್ಯಾರ್ಥಿಗಳು ವಿಶ್ವವಿದ್ಯಾಲಯದ ಚಿನ್ನದ ಪದಕ ಪಡೆದರು.

ಈ ಘಟಿಕೋತ್ಸವದಲ್ಲಿ ಎಸ್‌ಡಿಎಂ ವಿವಿ ಕಾರ್ಯನಿರ್ವಾಹಕ ನಿರ್ದೇಶಕಿ ಪದ್ಮಲತಾ ನಿರಂಜನ್, ಉಪ ವೈದ್ಯಕೀಯ ನಿರ್ದೇಶಕ ಸಾಕೇತ್ ಶೆಟ್ಟಿ, ಡಾ. ನೈದಿಲ ಶೆಟ್ಟಿ, ಸಹ ಉಪ ಕುಲಪತಿ ವಿ. ಜೀವಂಧರಕುಮಾರ, ಹಣಕಾಸು ಅಧಿಕಾರಿಗಳಾದ ವಿ.ಜಿ. ಪ್ರಭು, ಅಂಗ ಸಂಸ್ಥೆಗಳ ಮುಖ್ಯಸ್ಥರು ಉಪಸ್ಥಿತರಿದ್ದರು.ಎಸ್‌ಡಿಎಂ ದಂತ ಮಹಾವಿದ್ಯಾಲಯದ ಪ್ರಾಂಶುಪಾಲ ಡಾ. ಬಲರಾಮ ನಾಯ್ಕ ಸ್ವಾಗತಿಸಿದರು. ಕುಲಸಚಿವ ಡಾ. ಚಿದೇಂದ್ರ ಶೆಟ್ಟರ್‌ ವಾರ್ಷಿಕ ವರದಿ ಮಂಡಿಸಿದರು. ಔಷಧ ವಿಜ್ಞಾನ ಕಾಲೇಜಿನ ಪ್ರಾಂಶುಪಾಲ ಡಾ. ಅನಿಲ ತುಮಕೂರು ವಿದ್ಯಾರ್ಥಿಗಳಿಗೆ ಪ್ರತಿಜ್ಞಾವಿಧಿ ಬೋಧಿಸಿದರು. ಪರೀಕ್ಷಾಂಗ ವಿಭಾಗದ ಮುಖ್ಯಸ್ಥ ಡಾ. ಸತ್ಯಬೋಧ ಗುತ್ತಲ ಪದವೀಧರರ ಪಟ್ಟಿ, ಎಸ್‌ಡಿಎಂ ವೈದ್ಯಕೀಯ ಕಾಲೇಜಿನ ಪ್ರಾಂಶುಪಾಲ ಡಾ. ವಿಜಯ್‌ ಕುಲಕರ್ಣಿ ಪರಿಚಯಿಸಿದರು.. ಡಾ. ಪರಿಣಿತ ಮತ್ತು ಡಾ. ಮಾಲಾಶ್ರೀ ನಿರೂಪಿಸಿದರು. ನರ್ಸಿಂಗ್‌ ಕಾಲೇಜಿನ ಪ್ರಾಂಶುಪಾಲ ಡಾ. ಪ್ರಸನ್ನ ದೇಶಪಾಂಡೆ ವಂದಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಸರ್ಕಾರದಿಂದ ನಾಲ್ವಡಿ ಕೃಷ್ಣರಾಜ ಒಡೆಯರ್‌ ಜಯಂತಿ ಆಚರಿಸಲಿ
ಮಕ್ಕಳಿಗೆ ಪರಿಸರ ಸಂರಕ್ಷಣೆ ಪಾಠ ಬಹುಮುಖ್ಯ: ವೈ.ಕೆ.ತಿಮ್ಮೇಗೌಡ