ವೈಜ್ಞಾನಿಕವಾಗಿ ಕನಿಷ್ಠ ವೇತನ ಜಾರಿಗೊಳಿಸಿ

KannadaprabhaNewsNetwork |  
Published : May 31, 2026, 02:15 AM IST
ವೈಜ್ಞಾನಿಕವಾಗಿ ಕನಿಷ್ಠ ವೇತನ ಜಾರಿಗೊಳಿಸಲು ಒತ್ತಾಯಿಸಿ ಶನಿವಾರ ಸಿಐಟಿಯು ನೇತೃತ್ವದಲ್ಲಿ ಕಾರ್ಮಿಕರು ಹುಬ್ಬಳ್ಳಿಯ ತಹಸೀಲ್ದಾರ್‌ ಕಚೇರಿ ಎದುರು ಪ್ರತಿಭಟನೆ ನಡೆಸಿದರು. | Kannada Prabha

ಸಾರಾಂಶ

ರಾಜ್ಯ ಸರ್ಕಾರ ಮೇ 22ರಂದು ಅಂತಿಮ ಕನಿಷ್ಠ ವೇತನ ಅಧಿಸೂಚನೆ ಹೊರಡಿಸಿರುವುದು ಸ್ವಾಗತಾರ್ಹ. ಇದು ಬೆಲೆ ಏರಿಕೆ ಸೇರಿದಂತೆ ಆರ್ಥಿಕ ಸಂಕಷ್ಟಕ್ಕೀಡಾಗಿದ್ದ ಲಕ್ಷಾಂತರ ಕಾರ್ವಿುಕರಿಗೆ ಸಹಾಯಕವಾಗಲಿದೆ.

ಹುಬ್ಬಳ್ಳಿ:

ರಾಜ್ಯ ಸರ್ಕಾರ ಉದ್ಯಮ, ಸಂಸ್ಥೆಗಳ ಮಾಲೀಕರ ಒತ್ತಡಕ್ಕೆ ಮಣಿಯದೆ ಪರಿಷ್ಕೃತ ಕನಿಷ್ಠ ವೇತನದ ಆದೇಶವನ್ನು ಕಟ್ಟುನಿಟ್ಟಾಗಿ ಅನುಷ್ಠಾನಗೊಳಿಸಲು ಒತ್ತಾಯಿಸಿ ಶನಿವಾರ ಕಾರ್ವಿುಕರು ಸಿಐಟಿಯು ನೇತೃತ್ವದಲ್ಲಿ ಇಲ್ಲಿನ ತಹಸೀಲ್ದಾರ್‌ ಕಚೇರಿ ಎದುರು ಪ್ರತಿಭಟನೆ ನಡೆಸಿದರು.

ರಾಜ್ಯ ಸರ್ಕಾರ ಮೇ 22ರಂದು ಅಂತಿಮ ಕನಿಷ್ಠ ವೇತನ ಅಧಿಸೂಚನೆ ಹೊರಡಿಸಿರುವುದು ಸ್ವಾಗತಾರ್ಹ. ಇದು ಬೆಲೆ ಏರಿಕೆ ಸೇರಿದಂತೆ ಆರ್ಥಿಕ ಸಂಕಷ್ಟಕ್ಕೀಡಾಗಿದ್ದ ಲಕ್ಷಾಂತರ ಕಾರ್ವಿುಕರಿಗೆ ಸಹಾಯಕವಾಗಲಿದೆ. ಪರಿಷ್ಕೃತ ಕನಿಷ್ಠ ವೇತನ ಜಾರಿಗೆ ಯಾವುದೇ ಕಾಲಮಿತಿ ನಿಗದಿ ಮಾಡಿಲ್ಲ. ಇಂದಿನ ಬೆಲೆ ಏರಿಕೆ ಮತ್ತು ಹೆಚ್ಚುತ್ತಿರುವ ಜೀವನ ವೆಚ್ಚ ನಿರ್ವಹಣೆಗೆ ₹36,000 ಕನಿಷ್ಠ ವೇತನ ನಿಗದಿಪಡಿಸುವಂತೆ ಒತ್ತಾಯಿಸಿದರು.

ಪರಿಷ್ಕೃತ ಕನಿಷ್ಠ ವೇತನ ಅಧಿಸೂಚನೆಯಿಂದ ಹೊರಗಿಟ್ಟಿರುವ ಗಾರ್ವೆಂಟ್ಸ್, ಪ್ಲಾಂಟೇಷನ್, ಬೀಡಿ, ಕೈಮಗ್ಗ ಮುಂತಾದ 19 ಉದ್ದಿಮೆಗಳಲ್ಲಿಯ ಕಾರ್ವಿುಕರಿಗೆ ಅನ್ಯಾಯವಾಗಲಿದ್ದು. ಇವರಿಗೂ ಜಾರಿ ಮಾಡಬೇಕು. ಕಾರ್ವಿುಕ ಸಂಹಿತೆಗಳಿಗೆ ಕಾರ್ವಿುಕರ ಪರ ತಿದ್ದುಪಡಿ ತಂದು ನಿಯಮ ರೂಪಿಸಬೇಕು. ಅಂಗನವಾಡಿ, ಬಿಸಿಯೂಟ, ಆಶಾ ಮುಂತಾದ ಸ್ಕೀಮ್ ನೌಕರರು ಹಾಗೂ ಸ್ವಚ್ಛವಾಹಿನಿ ನೌಕರರನ್ನು ಕನಿಷ್ಠ ವೇತನ ವ್ಯಾಪ್ತಿಗೆ ತರಬೇಕು. ಕಾಯಂಯೇತರ ಕಾರ್ಮಿಕರ ಕಾಯಂಗೆ ಕಾನೂನು ರೂಪಿಸಬೇಕೆಂದು ಮನವಿಯಲ್ಲಿ ಒತ್ತಾಯಿಸಿದೆ. ಬಳಿಕ ಪ್ರತಿಭಟನಾಕಾರರು ತಹಸೀಲ್ದಾರ್ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿದರು.

ಈ ವೇಳೆ ಸಿಐಟಿಯು ರಾಜ್ಯ ಕಾರ್ಯದರ್ಶಿ ಮಹೇಶ ಪತ್ತಾರ, ಜಿಲ್ಲಾಧ್ಯಕ್ಷ ಬಿ.ಐ. ಈಳಿಗೇರ, ಮುಖಂಡರಾದ ಬಸವಣ್ಣೆಪ್ಪ ನೀರಲಗಿ, ಗುರುಸಿದ್ದಪ್ಪ ಅಂಬಿಗೇರ, ನಾರಾಯಣ ಆರೇರ, ಮಂಜುನಾಥ ಹುಜರಾತಿ, ಶೋಭಾ ಮೂಲಿಮನಿ, ನೀಲವ್ವ ಕುರುಬರ, ಶಕುಂತಲಾ ಘಾಡಿ, ಮಂಜುನಾಥ ದೊಡಮನಿ, ಮಹೇಶ ಹುಲಗೋಡ, ಗಾಳೆಪ್ಪ ಮುತ್ಯಾಳ ಸೇರಿದಂತೆ ಹಲವರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಕಳ್ಳತನ ಕೇಸು ಬೇಧಿಸಿದ ಜಿಲ್ಲಾ ಪೊಲೀಸರು; ₹2.62 ಕೋಟಿ ಮೌಲ್ಯದ ಸ್ವತ್ತು ಮಾಲೀಕರಿಗೆ ಹಸ್ತಾಂತರ
ಗೋವುಗಳ ಹತ್ಯೆ; ಹಿಂದೂ, ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ