ಕನ್ನಡಪ್ರಭ ವಾರ್ತೆ ತುಮಕೂರು
ಅವರು ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಜಿಲ್ಲಾ ಮಟ್ಟದ ಟಾಸ್ಕ್ ಫೋರ್ಸ್ ಸಮಿತಿ ಸಭೆಯಲ್ಲಿ ಜಿಲ್ಲೆಯ ವಿವಿಧ ಇಲಾಖೆಗಳ ವ್ಯಾಪ್ತಿಯಲ್ಲಿ ನಡೆಯುತ್ತಿರುವ ಅಭಿವೃದ್ಧಿ ಕಾಮಗಾರಿಗಳ ಪ್ರಗತಿ ಹಾಗೂ ಅನುಷ್ಠಾನದ ಕುರಿತು ಸಮಗ್ರವಾಗಿ ಪರಿಶೀಲನೆ ನಡೆಸಿದರು.
ವಿವಿಧ ಇಲಾಖೆಗಳ ನಡುವಿನ ಸಮನ್ವಯಕ್ಕೆ ಸಂಬಂಧಿಸಿದಂತೆ ಅಧಿಕಾರಿಗಳಿಗೆ ಹಲವು ಮಹತ್ವದ ಸೂಚನೆ ನೀಡಿದರು. ಸಮಿತಿಯ ಸದಸ್ಯರು ತಮ್ಮ ವ್ಯಾಪ್ತಿಗೆ ಒಳಪಡುವ ಇಲಾಖೆಗಳ ಅಭಿವೃದ್ಧಿ ಕಾಮಗಾರಿಗಳ ಕುರಿತು ವಾರಕ್ಕೊಮ್ಮೆ ಸಭೆ ನಡೆಸಿ, ಸಭೆಯ ನಡಾವಳಿಯನ್ನು ನಿಗದಿತ ನಮೂನೆಯಲ್ಲಿ ಸಂಬಂಧಿಸಿದ ಅಧಿಕಾರಿಗಳಿಗೆ ಸಲ್ಲಿಸುವಂತೆ ಸೂಚಿಸಿದರು.ಸಮಿತಿಯ ಕಾರ್ಯದರ್ಶಿಗಳು ಸಂಬಂಧಿಸಿದ ಅಧಿಕಾರಿಗಳೊಂದಿಗೆ ಸಮನ್ವಯ ಸಾಧಿಸಿ, ಅಗತ್ಯ ಮಾಹಿತಿಯನ್ನು ಜಿಲ್ಲಾ ಮಟ್ಟದ ಸಮಿತಿಗೆ ಸಲ್ಲಿಸುವಂತೆ ತಿಳಿಸಿದರಲ್ಲದೆ, ಪ್ರತಿವಾರದ ಅಂತ್ಯದಂದು ಜಿಲ್ಲಾ ಮಟ್ಟದ ಟಾಸ್ಕ್ ಫೋರ್ಸ್ ಸಮಿತಿ ಸಭೆಗೆ ಅಧಿಕಾರಿಗಳು ಕಡ್ಡಾಯವಾಗಿ ಹಾಜರಾಗಿ, ತಮ್ಮ ಇಲಾಖೆಗಳ ವಾರದ ಪ್ರಗತಿ ವಿವರಗಳನ್ನು ಸಲ್ಲಿಸುವಂತೆ ಸೂಚನೆ ನೀಡಿದರು.
ಪ್ರತಿ ತಾಲೂಕಿನ ತಹಸೀಲ್ದಾರ್ ಹಾಗೂ ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿಗಳು ವಾರಕ್ಕೊಮ್ಮೆ ವಿಧಾನಸಭಾ ಕ್ಷೇತ್ರ ಮಟ್ಟದ ಟಾಸ್ಕ್ ಫೋರ್ಸ್ ಸಮಿತಿ ಸಭೆ ನಡೆಸಿ, ಸಂಬಂಧಿಸಿದ ಎಲ್ಲಾ ಅಧಿಕಾರಿಗಳನ್ನು ಸಭೆಗೆ ಆಹ್ವಾನಿಸುವಂತೆ ಸೂಚಿಸಿದರು. ಅಭಿವೃದ್ಧಿ ಕಾಮಗಾರಿಗಳ ಅನುಷ್ಠಾನದಲ್ಲಿ ಅಗತ್ಯ ಸಹಕಾರ, ಸಲಹೆ ಹಾಗೂ ಸಮನ್ವಯದೊಂದಿಗೆ ಕಾರ್ಯನಿರ್ವಹಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಅಭಿವೃದ್ಧಿ ಕಾಮಗಾರಿಗಳ ಗುಣಮಟ್ಟ ಮತ್ತು ವೇಗವನ್ನು ಖಚಿತಪಡಿಸುವ ನಿಟ್ಟಿನಲ್ಲಿ ಅಧಿಕಾರಿಗಳು ಜವಾಬ್ದಾರಿಯಿಂದ ಕಾರ್ಯನಿರ್ವಹಿಸುವಂತೆ ನಿರ್ದೇಶನ ನೀಡಿದ ಅವರು, ಜಿಲ್ಲಾ ಪಂಚಾಯಿತಿ ಉಪಕಾರ್ಯದರ್ಶಿ(ಅಭಿವೃದ್ಧಿ) ಮತ್ತು ಮುಖ್ಯ ಯೋಜನಾಧಿಕಾರಿಗಳು ಎಲ್ಲಾ ನೋಡಲ್ ಅಧಿಕಾರಿಗಳಿಂದ ಮಾಹಿತಿ ಪಡೆದು ಕ್ರೂಡೀಕರಿಸಿ ಇವರಿಬ್ಬರು ಜಂಟಿಯಾಗಿ ವಿವಿಧ ಇಲಾಖೆಗಳು/ಏಜೆನ್ಸಿಗಳು ಈವರೆಗೆ ಕೈಗೊಂಡಿರುವ ಕಾಮಗಾರಿಗಳ ಪ್ರಗತಿಯ ಕುರಿತು ಪರಿಶೀಲಿಸಿ ಕ್ರೋಢೀಕೃತ ಮಾಹಿತಿಯನ್ನು ಆಗಸ್ಟ್ ೨೦ರ ಅಪರಾಹ್ನ ೩ ಗಂಟೆಯ ಸಭೆಗೆ ಪ್ರಸುತ್ತ ಪಡಿಸಲು ಸೂಚನೆ ನೀಡಿದರು.