ಜಿಲ್ಲೆಯಲ್ಲಿ ಎನಿವೇರ್ ನೋಂದಣಿ ವ್ಯವಸ್ಥೆ ಜಾರಿ

KannadaprabhaNewsNetwork |  
Published : Aug 30, 2024, 01:05 AM IST
ಜಿಲ್ಲೆಯಲ್ಲಿ ಎನಿವೇರ್ ನೋಂದಣಿ ವ್ಯವಸ್ಥೆ ಜಾರಿ | Kannada Prabha

ಸಾರಾಂಶ

ಸಾರ್ವಜನಿಕರು ಸ್ಥಿರಾಸ್ತಿ ಇರುವ ವ್ಯಾಪ್ತಿಯಲ್ಲಿಯೇ ದಸ್ತಾವೇಜನ್ನು ನೋಂದಣಿ ಮಾಡುವ ಸಲುವಾಗಿ ಜಾರಿಗೆ ತಂದಿರುವ ಎನಿವೇರ್ ನೋಂದಣಿ ವ್ಯವಸ್ಥೆಯಡಿ ಈವರೆಗೆ ಜಿಲ್ಲೆಯಲ್ಲಿ ೧೩೬೮ ದಸ್ತಾವೇಜುಗಳನ್ನು ನೋಂದಣಿ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಶುಕ್ರವಾರ ತಿಳಿಸಿದ್ದಾರೆ.

ತುಮಕೂರು: ಸಾರ್ವಜನಿಕರು ಸ್ಥಿರಾಸ್ತಿ ಇರುವ ವ್ಯಾಪ್ತಿಯಲ್ಲಿಯೇ ದಸ್ತಾವೇಜನ್ನು ನೋಂದಣಿ ಮಾಡುವ ಸಲುವಾಗಿ ಜಾರಿಗೆ ತಂದಿರುವ ಎನಿವೇರ್ ನೋಂದಣಿ ವ್ಯವಸ್ಥೆಯಡಿ ಈವರೆಗೆ ಜಿಲ್ಲೆಯಲ್ಲಿ ೧೩೬೮ ದಸ್ತಾವೇಜುಗಳನ್ನು ನೋಂದಣಿ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಶುಕ್ರವಾರ ತಿಳಿಸಿದ್ದಾರೆ.ಎನಿವೇರ್ ನೋಂದಣಿ ವ್ಯವಸ್ಥೆಯನ್ನು ಬೆಂಗಳೂರು ನಗರ ಜಿಲ್ಲೆಯಲ್ಲಿ 2011 ಹಾಗೂ ತುಮಕೂರು ಮತ್ತು ಬೆಳಗಾವಿ ಜಿಲ್ಲೆಗಳಲ್ಲಿ 2024ರ ಮಾರ್ಚ್‌ನಲ್ಲಿ ನೋಂದಣಿ ಕಾಯ್ದೆ 1908 ಕಲಂ(5) ಹಾಗೂ ಕಲಂ (6) ರಡಿ ಜಾರಿಗೆ ತಂದು ಅನುಷ್ಠಾನಗೊಳಿಸಲಾಗಿದೆ. ಎನಿವೇರ್ ನೋಂದಣಿ ವ್ಯವಸ್ಥೆಯು ಜಿಲ್ಲೆಯಲ್ಲಿ ಜಾರಿಯಾದಾಗಿನಿಂದ ಈವರೆಗೆ ಒಟ್ಟು 1368 ದಸ್ತಾವೇಜುಗಳು ನೋಂದಣಿಯಾಗಿದ್ದು, ಎನಿವೇರ್ ನೋಂದಣಿಯು ಯಶಸ್ವಿಯಾಗಿ ಕಾರ್ಯನಿರ್ವಹಿಸುತ್ತಿದೆ.ಸರ್ಕಾರದಿಂದ 2024-25ನೇ ಸಾಲಿನ ಆಯಾವ್ಯಯ ಭಾಷಣದಲ್ಲಿ ಎನಿವೇರ್ ನೋಂದಣಿ ವ್ಯವಸ್ಥೆಯನ್ನು ರಾಜ್ಯದ ಎಲ್ಲಾ ಜಿಲ್ಲೆಗಳಿಗೂ ವಿಸ್ತರಿಸಲಾಗುವುದೆಂದು ಘೋಷಿಸಲಾಗಿದ್ದು, ಎನಿವೇರ್ ನೋಂದಣಿ ವ್ಯವಸ್ಥೆಯಲ್ಲಿ ದಸ್ತಾವೇಜನ್ನು ಸ್ಥಿರಾಸ್ತಿ ಇರುವ ಆಯಾ ಜಿಲ್ಲೆಯ ವ್ಯಾಪ್ತಿಯೊಳಗಿರುವ ಯಾವುದಾದರೂ ಉಪನೋಂದಣಿ ಕಚೇರಿಯಲ್ಲಿ ನೋಂದಾಯಿಸಿಕೊಳ್ಳಬಹುದಾಗಿದೆ. ಎನಿವೇರ್ ನೋಂದಣಿ ವ್ಯವಸ್ಥೆ ಜಾರಿಗೂ ಮುನ್ನ ಸಾರ್ವಜನಿಕರು ಸ್ಥಿರಾಸ್ತಿ ಇರುವ ವ್ಯಾಪ್ತಿಯ ಉಪನೋಂದಣಿ ಕಚೇರಿಯಲ್ಲಿ ಮಾತ್ರ ದಸ್ತಾವೇಜನ್ನು ನೋಂದಣಿ ಮಾಡಲು ಅವಕಾಶವಿತ್ತು. ಪ್ರಸ್ತುತ ಸ್ಥಿರಾಸ್ತಿ ಇರುವ ಆಯಾ ಜಿಲ್ಲೆಯ ವ್ಯಾಪ್ತಿಯೊಳಗಿರುವ ಯಾವುದಾದರೂ ಉಪನೋಂದಣಿ ಕಚೇರಿಯಲ್ಲಿ ನೋಂದಾಯಿಸಿಕೊಳ್ಳಬಹುದಾಗಿದೆ. ಎನಿವೇರ್ ನೋಂದಣಿ ವ್ಯವಸ್ಥೆಯು ಸಾರ್ವಜನಿಕರಿಗೆ ಹಲವಾರು ರೀತಿಯಲ್ಲಿ ಉಪಯುಕ್ತವಾಗಿದ್ದು, ದಸ್ತಾವೇಜಿನ ನೋಂದಣಿಯಲ್ಲಿ ಪಾರದರ್ಶಕತೆಯನ್ನು ಹೆಚ್ಚಿಸುತ್ತದೆ. ನೋಂದಣಿಯಲ್ಲಿ ವಿಳಂಬವನ್ನು ತಡೆಗಟ್ಟುತ್ತದೆ. ಸಾರ್ವಜನಿಕರು ಸಮೀಪದಲ್ಲಿರುವ ಉಪನೋಂದಣಿ ಕಚೇರಿಯಲ್ಲಿ ದಸ್ತಾವೇಜನ್ನು ನೋಂದಾಯಿಸಬಹುದು.ಸ್ಲಾಟ್ ಲಭ್ಯವಿರುವಂತಹ ಕಚೇರಿಯನ್ನು ನೋಂದಣಿಗೆ ಆಯ್ಕೆ ಮಾಡಿಕೊಳ್ಳಬಹುದಾಗಿದೆ. ಇದರಿಂದ ನೋಂದಣಿ ಪ್ರಕ್ರಿಯೆ ಸುಲಭವಾಗುವುದಲ್ಲದೆ ಸಮಯವೂ ಸಹ ಉಳಿಯುತ್ತದೆ. ಉಪನೋಂದಣಿ ಕಚೇರಿಗಳಲ್ಲಿ ಜನದಟ್ಟಣೆ ಹಾಗೂ ಕಚೇರಿ ಸಿಬ್ಬಂದಿಗಳ ಮೇಲೆ ಕೆಲಸದ ಒತ್ತಡ ಕಡಿಮೆಯಾಗುವುದರಿಂದ ನೋಂದಣಿ ಕೆಲಸ ಸಮಾನವಾಗಿ ಹಂಚಿಕೆಯಾಗುತ್ತದೆ.ಸಾರ್ವಜನಿಕರು ಎನಿವೇರ್ ನೋಂದಣಿಯ ಸದುಪಯೋಗಪಡಿಸಿಕೊಂಡು ತಮ್ಮ ಹತ್ತಿರದ ಅಥವಾ ನೋಂದಣಿಗೆ ಸ್ಲಾಟ್ ಲಭ್ಯವಿರುವಂತಹ ಕಚೇರಿಯನ್ನು ಆಯ್ಕೆ ಮಾಡಿಕೊಂಡು ದಸ್ತಾವೇಜನ್ನು ನೋಂದಾಯಿಸಿಕೊಳ್ಳಬೇಕೆಂದು ಮನವಿ ಮಾಡಿದ್ದಾರೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಬೆಂಗಳೂರು ನಗರದ ಬಿಜೆಪಿಯ ಮೂರು ಜಿಲ್ಲಾ ಘಟಕಕ್ಕೆ ಪದಾಧಿಕಾರಿಗಳ ನೇಮಕ
ನೆಲಕ್ಕೆ ಬೇಕಾಗುವ ಚಿಂತನೆ ಮಾಡೋದು ಸಾಹಿತ್ಯದ ಕೆಲಸ; ವೈ.ಎಂ.ಯಾಕೊಳ್ಳಿ