ಅಟೆಲ್‌ ಪೆನ್ಶನ್‌ ಅನುಷ್ಠಾನ: ಕೆವಿಜಿ ಬ್ಯಾಂಕ್‌ಗೆ ರಾಷ್ಟ್ರಮಟ್ಟದ ಪ್ರಶಸ್ತಿ

KannadaprabhaNewsNetwork |  
Published : Jun 22, 2024, 12:45 AM ISTUpdated : Jun 22, 2024, 12:46 AM IST
21ಡಿಡಬ್ಲೂಡಿ3ಕರ್ನಾಟಕ ವಿಕಾಸ ಗ್ರಾಮೀಣ ಬ್ಯಾಂಕು ಅಟಲ್ ಪಿಂಚಣಿ ಯೋಜನೆಯ ಅನುಷ್ಠಾನಕ್ಕೆ ಸಂಬಂಧಿಸಿ 2023-2024ರ ಅವಧಿಯಲ್ಲಿ ಮಾಡಿದ ಸಾಧನೆಗೆ ರಾಷ್ಟ್ರ ಮಟ್ಟದ ಪ್ರಶಸ್ತಿ ಮುಡಿಗೇರಿಸಿಕೊಂಡಿದ್ದು, ಶುಕ್ರವಾರ ನವದೆಹಲಿಯಲ್ಲಿ ನಡೆದ ವಿಶೇಷ ಕಾರ್ಯಕ್ರಮದಲ್ಲಿ ಬ್ಯಾಂಕ್ ಅಧ್ಯಕ್ಷ ಶ್ರೀಕಾಂತ ಎಮ್ ಭಂಡಿವಾಡ ಅವರು  ಕೇಂದ್ರ ಹಣಕಾಸು ವಿಭಾಗದ ಕಾರ್ಯದರ್ಶಿ ಡಾ. ವಿವೇಕ ಜೋಶಿ ಅವರಿಂದ ಪ್ರಶಸ್ತಿ ಸ್ವೀಕರಿಸಿದರು. | Kannada Prabha

ಸಾರಾಂಶ

ಅಟಲ್ ಪೆನ್ಶನ್ ಯೋಜನೆ ಅಸಂಘಟಿತ ಕಾರ್ಮಿಕ ವರ್ಗಕ್ಕೆ ವರದಾನ. ನಿರ್ದಿಷ್ಟಪಡಿಸಿದ ಕಂತನ್ನು ಪಾವತಿಸಿ 61ನೇ ವರ್ಷದಿಂದ ₹1ರಿಂದ ₹ 5 ಸಾವಿರ ಮಿತಿಯಲ್ಲಿ ಪಿಂಚಣಿ ಪಡೆಯಬಹುದಾಗಿದೆ.

ಧಾರವಾಡ:

ಕರ್ನಾಟಕ ವಿಕಾಸ ಗ್ರಾಮೀಣ ಬ್ಯಾಂಕ್‌ ಅಟಲ್ ಪಿಂಚಣಿ ಯೋಜನೆಯ ಅನುಷ್ಠಾನಕ್ಕೆ ಸಂಬಂಧಿಸಿ 2023-24ರ ಅವಧಿಯಲ್ಲಿ ಮಾಡಿದ ಸಾಧನೆಗೆ ರಾಷ್ಟ್ರಮಟ್ಟದ ಪ್ರಶಸ್ತಿ ಮುಡಿಗೇರಿಸಿಕೊಂಡಿದೆ.

ಶುಕ್ರವಾರ ನವದೆಹಲಿಯಲ್ಲಿ ನಡೆದ ವಿಶೇಷ ಕಾರ್ಯಕ್ರಮದಲ್ಲಿ ಬ್ಯಾಂಕ್ ಅಧ್ಯಕ್ಷ ಶ್ರೀಕಾಂತ ಎಂ. ಭಂಡಿವಾಡ ಅವರು ಕೇಂದ್ರ ಹಣಕಾಸು ವಿಭಾಗದ ಕಾರ್ಯದರ್ಶಿ ಡಾ. ವಿವೇಕ ಜೋಶಿ ಅವರಿಂದ ಪ್ರಶಸ್ತಿ ಸ್ವೀಕರಿಸಿದರು. ಪಿಂಚಣಿ ನಿಧಿ ನಿಯಂತ್ರಣ ಮತ್ತು ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಡಾ. ದೀಪಕ ಮೊಹಾಂತಿ, ಕೆನರಾ ಬ್ಯಾಂಕಿನ ಮಹಾ ಪ್ರಬಂಧಕ ಭಾಸ್ಕರ ಚಕ್ರವರ್ತಿ ಮತ್ತಿತರ ಗಣ್ಯರು ಇದ್ದರು.

ಪ್ರಶಸ್ತಿ ಸ್ವೀಕರಿಸಿ ಬ್ಯಾಂಕ್ ಅಧ್ಯಕ್ಷ, ಶ್ರೀಕಾಂತ ಭಂಡಿವಾಡ, ಅಟಲ್ ಪೆನ್ಶನ್ ಯೋಜನೆ ಅಸಂಘಟಿತ ಕಾರ್ಮಿಕ ವರ್ಗಕ್ಕೆ ವರದಾನ. ನಿರ್ದಿಷ್ಟಪಡಿಸಿದ ಕಂತನ್ನು ಪಾವತಿಸಿ 61ನೇ ವರ್ಷದಿಂದ ₹1ರಿಂದ ₹ 5 ಸಾವಿರ ಮಿತಿಯಲ್ಲಿ ಪಿಂಚಣಿ ಪಡೆಯಬಹುದಾಗಿದೆ. ಬ್ಯಾಂಕ್‌ ಈ ವರೆಗೆ 4,27,736 ಅಟಲ್ ಪಿಂಚಣಿ ಖಾತೆ ಮಾಡಿಸಿದೆ. ಈ ದಾಖಲೆಗಿಂತ ರೈತರು, ರೈತ ಕಾರ್ಮಿಕರು, ಕಾರ್ಖಾನೆಗಳಲ್ಲಿ ದುಡಿಯುವವರು, ನಿಶ್ಚಿತ ಪಿಂಚಣಿ ಇಲ್ಲದ ಶ್ರಮಿಕರು ತಮ್ಮ 60ನೇ ವರ್ಷದ ನಂತರ ನಿಶ್ಚಿಂತ ಬದುಕು ಸಾಗಿಸಲು ಅನುಕೂಲವಾಗಲಿದೆ ಎಂಬುದೇ ಸಮಾಧಾನದ ಸಂಗತಿ ಎಂದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ನಗರದ 75 ಜಂಕ್ಷನ್‌ ಅಭಿವೃದ್ಧಿಗೆ ಗ್ರಹಣ!
ಎಚ್‌ಎಎಲ್‌ ಮತ್ತೆ ಸಾರ್ವಜನಿಕ ಬಳಕೆ ಪ್ರಸ್ತಾಪ ಪರಿಶೀಲನೆ:ಸಚಿವ