ಕನ್ನಡಪ್ರಭವಾರ್ತೆ ತೀರ್ಥಹಳ್ಳಿ 2024ರೊಳಗೆ ಶುದ್ಧ ಕುಡಿಯುವ ನೀರನ್ನು ಒದಗಿಸುವುದಾಗಿ ಪ್ರಧಾನಿ ನರೇಂದ್ರ ಮೋದಿ ದೇಶದ ಜನತೆಗೆ ನೀಡಿದ ಆಶ್ವಾಸನೆಯಂತೆ ಶುದ್ಧ ಕುಡಿಯುವ ನೀರಿನ ಯೋಜನೆಗೆ ಕೇಂದ್ರ ಸರ್ಕಾರ ಆದ್ಯತೆಯನ್ನು ನೀಡಿದೆ. ಜನಪರವಾದ ಈ ಯೋಜನೆ ಸಾಕಾರಗೊಳ್ಳುತ್ತಿದೆ ಎಂದು ಶಾಸಕ ಆರಗ ಜ್ಞಾನೇಂದ್ರ ಹೇಳಿದರು.
ಈ ಹಿಂದೆ ಕುಡಿಯಲು ಗದ್ದೆಯಲ್ಲಿರುವ ಗುಮ್ಮಿ ಕೆರೆಯ ನೀರನ್ನು ಬಳಸಲಾಗುತ್ತಿತ್ತು. ಆದರೆ, ಈಗ ಜನರ ಆರೋಗ್ಯದ ಹಿತದೃಷ್ಟಿಯಿಂದ ಶುದ್ಧೀಕೃತ ನೀರು ಅನಿವಾರ್ಯವಾಗಿದೆ. ವಿದ್ಯುತ್ ಮತ್ತು ಕಾರ್ಮಿಕರ ಸಮಸ್ಯೆಯಿಂದ ನೀರನ್ನು ಒದಗಿಸುವ ಸಮಸ್ಯೆಯೂ ಎದುರಾಗಿದೆ. ಈ ಸಲುವಾಗಿ ತಾಲೂಕಿನ 36 ಗ್ರಾಪಂಗಳಿಗೆ ಶಾಶ್ವತವಾಗಿ ಶುದ್ಧೀಕರಿಸಿದ ಕುಡಿಯುವ ನೀರನ್ನು ಒದಗಿಸಲು ಬಹುಗ್ರಾಮ ಯೋಜನೆಯಡಿ ₹344 ಕೋಟಿ ಅನುದಾನ ಮಂಜೂರಾಗಿದೆ. ಜನರ ಆರೋಗ್ಯ ಸುಧಾರಿಸಿದರೆ ಜನಪ್ರತಿನಿಧಿಗಳಾದ ನಮ್ಮ ಶ್ರಮ ಸಾರ್ಥಕವಾಗುತ್ತದೆ ಎಂದರು.
ಗುಡ್ಡೇಕೊಪ್ಪ ಗ್ರಾಮ ಪಂಚಾಯಿತಿ ಅಧ್ಯಕ್ಷ ರಾಘವೇಂದ್ರ ಪವಾರ್, ಉಪಾಧ್ಯಕ್ಷ ಜಯಣ್ಣ, ಸದಸ್ಯ ಗುರುಮೂರ್ತಿ, ತಾಪಂ ಮಾಜಿ ಸದಸ್ಯರಾದ ಟಿ.ಮಂಜುನಾಥ್ ಹಾಗೂ ಭಾರತಿ ಸುರೇಶ್, ಗಿರೀಶ್ ಭಂಡಾರಿ ಇದ್ದರು.- - - -09ಟಿಟಿಎಚ್01: