ಭ್ರಷ್ಟಾಚಾರ ತಡೆಗೆ ಜಿ ರಾಮ್‌ ಜಿ ಅನುಷ್ಠಾನ: ಮಳುಗೌಡ ಪಾಟೀಲ

KannadaprabhaNewsNetwork |  
Published : Feb 01, 2026, 03:30 AM IST
ತತತತತತ | Kannada Prabha

ಸಾರಾಂಶ

ಇಂಡಿ: ರಾಜ್ಯದಲ್ಲಿ ಕಾಂಗ್ರೆಸ್ ದುರಾಡಳಿತದಿಂದ ಜನ ಬೇಸತ್ತಿದ್ದಾರೆ. ಈ ಬಾರಿ ರಾಜ್ಯದಲ್ಲಿ ಕಾಂಗ್ರೆಸ್ ದುರಾಡಳಿತ ಕೊನೆಗೊಂಡು, ಬಿಜೆಪಿ ಬಾವುಟ ಹಾರಲಿದೆ. ಪಕ್ಷದ ಕಾರ್ಯಕರ್ತರು, ಮುಖಂಡರು ಪಕ್ಷ ಸಂಘಟನೆಗೆ ಒತ್ತು ನೀಡಬೇಕು ಎಂದು ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮಳುಗೌಡ ಪಾಟೀಲ ಹೇಳಿದರು.

ಕನ್ನಡಪ್ರಭ ವಾರ್ತೆ ಇಂಡಿ

ರಾಜ್ಯದಲ್ಲಿ ಕಾಂಗ್ರೆಸ್ ದುರಾಡಳಿತದಿಂದ ಜನ ಬೇಸತ್ತಿದ್ದಾರೆ. ಈ ಬಾರಿ ರಾಜ್ಯದಲ್ಲಿ ಕಾಂಗ್ರೆಸ್ ದುರಾಡಳಿತ ಕೊನೆಗೊಂಡು, ಬಿಜೆಪಿ ಬಾವುಟ ಹಾರಲಿದೆ. ಪಕ್ಷದ ಕಾರ್ಯಕರ್ತರು, ಮುಖಂಡರು ಪಕ್ಷ ಸಂಘಟನೆಗೆ ಒತ್ತು ನೀಡಬೇಕು ಎಂದು ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮಳುಗೌಡ ಪಾಟೀಲ ಹೇಳಿದರು.

ನಗರದ ಶ್ರೀ ಶಾಂತೇಶ್ವರ ಮಂಗಲ ಕಾರ್ಯಾಲಯದಲ್ಲಿ ಜಿ ರಾಮ್‌ ಜಿ ಯೋಜನೆಯ ಮಾಹಿತಿ ನೀಡುವ ಜಾಗೃತಿ ಸಮಾವೇಶದಲ್ಲಿ ಮಾತನಾಡಿದರು. ಮನರೇಗಾ ಪರ ಕಾಂಗ್ರೆಸ್ ಅಭಿಯಾನ ವಿಚಾರದಲ್ಲಿ ಜನರಿಗೆ ತಪ್ಪು ಸಂದೇಶ ನೀಡಲು ಹೊರಟಿದೆ. ಇತ್ತೀಚೆಗೆ ಎನ್‍ಡಿಎ ಸರ್ಕಾರ ವಿಬಿ ಜಿ ರಾಮ್ ಜಿ ಕಾಯ್ದೆ ತಂದಿದ್ದಾರೆ. ಇದು ಸಕಾರಾತ್ಮಕ ಚಿಂತನೆ ಇರುವ ಕಾಯ್ದೆ. ಮನರೇಗಾ ಯೋಜನೆಯಲ್ಲಿ ಅನೇಕ ಅಂಶಗಳನ್ನು ಸುಧಾರಿಸಿ ವಿಬಿಜಿ ರಾಮ್ ಜಿ ಕಾಯ್ದೆ ತರಲಾಗಿದೆ ಎಂದು ಹೇಳಿದರು.

ಮನರೇಗಾ ಯೋಜನೆಯಲ್ಲಿ ದುರ್ಬಳಕೆ, ಭ್ರಷ್ಟಾಚಾರ ಇತ್ತು. ಮೂಲಸೌಕರ್ಯ ವೃದ್ಧಿಗೆ ಅದು ಸಹಕಾರಿ ಆಗಿರಲಿಲ್ಲ. ಅದಕ್ಕಾಗಿ ವಿಬಿ ಜಿ ರಾಮ್ ಜಿ ಕಾಯ್ದೆಯನ್ನು ಕೇಂದ್ರ ಸರ್ಕಾರ ಜಾರಿಗೆ ತಂದಿದೆ. ಆದರೆ, ಇದರ ವಿರುದ್ಧ ಕಾಂಗ್ರೆಸ್ ಈಗಾಗಲೇ ಅಪಪ್ರಚಾರ ಶುರು ಮಾಡಿದೆ. ಕೇಂದ್ರದ ಯೋಜನೆಗಳಲ್ಲಿ ಕಾಂಗ್ರೆಸ್ ಮೊಸರಲ್ಲಿ ಕಲ್ಲು ಹುಡುಕುವ ಕೆಲಸ ನಿರಂತರವಾಗಿ ಮಾಡಿಕೊಂಡು ಬಂದಿದೆ ಎಂದು ದೂರಿದರು.

ಕಾಂಗ್ರೆಸ್‍ಗೆ ಎನ್‍ಡಿಎ ಸರ್ಕಾರ ಇರುವುದೇ ಸಹಿಸಲು ಆಗುತ್ತಿಲ್ಲ. ಈಗ ವಿ ಬಿಜಿ ರಾಮ್ ಜಿ ವಿರುದ್ಧ ಅಪಪ್ರಚಾರ ಶುರು ಮಾಡಿದ್ದಾರೆ. ಗಾಂಧಿಯವರ, ಮೋದಿಯವರ ಕನಸು ನನಸಾಗಬೇಕಾದರೆ ಹಳ್ಳಿಗಳು ಉದ್ಧಾರ ಆಗಬೇಕು. ಗಾಂಧಿಯವರಾಗಲೀ ಅವರ ಹೆಸರಿಗಾಗಲಿ ಬಿಜೆಪಿ ಅಪಮಾನ ಮಾಡಿಲ್ಲ. ಮುಂದೆಯೂ ಮಾಡುವುದಿಲ್ಲ ಎಂದು ಸ್ಪಷ್ಟಪಡಿಸಿದ ಅವರು, ಅಪಮಾನ ಮಾಡುವ ಜಾಯಮಾನ ಇರೋದು ಕಾಂಗ್ರೆಸ್‍ಗೆ ಮಾತ್ರ ಎಂದು ಹೇಳಿದರು.

ಕೇಂದ್ರ ಸರ್ಕಾರ ಜಾರಿಗೊಳಿಸಿರುವ ವಿಕಸಿತ ಭಾರತ್-‌ ಗ್ಯಾರಂಟಿ ಫಾರ್‌ ರೋಜ್‌ಗಾರ್‌ ಆ್ಯಂಡ್‌ ಅಜೀವಿಕಾ ಮಿಶನ್‌ (ಗ್ರಾಮೀಣ್) ವಿಬಿ-ಜಿ ರಾಮ್‌ ಜಿ ಎಂಬ ಹೊಸ ಕಾಯಿದೆ ಗ್ರಾಮೀಣಾಭಿವೃದ್ಧಿಗೆ ಸಹಕಾರಿಯಾಗಿದೆ ಎಂದರು.

ಬಿಜೆಪಿ ಮಂಡಲ ಅಧ್ಯಕ್ಷ ಹಣಮಂತ್ರಾಯಗೌಡ ಪಾಟೀಲ, ಮುಖಂಡರಾದ ಮಲ್ಲಿಕಾರ್ಜುನ ಕಿವಡೆ, ಕಾಸುಗೌಡ ಬಿರಾದಾರ, ಶೀಲವಂತ ಉಮರಾಣಿ, ಸಿದ್ದಲಿಂಗ ಹಂಜಗಿ, ಅನೀಲ ಜಮಾದಾರ, ರಮೇಶ ಧರೆನವರ ಮಾತನಾಡಿದರು. ಪ್ರಧಾನ ಮಳುಗೌಡ ಪಾಟೀಲ, ಕಾರ್ಯದರ್ಶಿ ತೌವಸೆ, ಮಲ್ಲಮ್ಮ ಜೋಗೂರ, ಹಣಮಂತ್ರಾಯಗೌಡ ಪಾಟೀಲ, ಕಾಸುಗೌಡ ಬಿರಾದಾರ, ಶೀಲವಂತ ಉಮರಾಣಿ, ಅನೀಲ ಜಮಾದಾರ, ಮಲ್ಲಿಕಾರ್ಜುನ ಕಿವಡೆ, ಸಿದ್ದಲಿಂಗ ಹಂಜಗಿ, ದೇವೆಂದ್ರ ಕುಂಬಾರ, ರಮೇಶ ಧರೆನವರ, ಮಹಾದೇವ ರಜಪೂತ, ಸಂತೋಷಗೌಡ ಪಾಟೀಲ ಮೊದಲಾದವರು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಕೊಳಚೆ ನೀರಲ್ಲಿ ತಟ್ಟೆ ತೊಳೆದ ಪ್ರಕರಣ; ಶಿಕ್ಷಕಿ ಅಮಾನತು
ಅಲೆಮಾರಿ ಜನಾಂಗದವರು ಮಕ್ಕಳ ಶಿಕ್ಷಣಕ್ಕೆ ಒತ್ತು ನೀಡಲಿ: ಪಲ್ಲವಿ