ಕನ್ನಡಪ್ರಭ ವಾರ್ತೆ ಪಾಂಡವಪುರ
ತಾಲೂಕಿನ ನರಹಳ್ಳಿಯಲ್ಲಿ ಡಿ.ದೇವರಾಜು ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದಿಂದ ಒಟ್ಟು 11 ಹಿಂದುಳಿದ ವರ್ಗಗಳ ನಿಗಮಗಳ ಗಂಗಾ ಕಲ್ಯಾಣ ಯೋಜನೆ, ಸ್ವಯಂ ಉದ್ಯೋಗ ನೇರಸಾಲ ಹಾಗೂ ಸ್ವಾವಲಂಬಿ ಸಾರಥಿ ಯೋಜನೆ ಸೇರಿದಂತೆ ವಿವಿಧ ಯೋಜನೆಗಳ ಕಾಮಗಾರಿಗಳಿಗೆ ಬೋರ್ ವೆಲ್ ಮೋಟರ್ ಚಾಲನೆ ನೀಡಿ ಮಾತನಾಡಿದರು. ಒಟ್ಟು 4 ಕೋಟಿ ರು. ವೆಚ್ಚದಲ್ಲಿ ಗಂಗಾ ಕಲ್ಯಾಣ ಯೋಜನೆಯಡಿ 87, ಸ್ವಯಂ ಉದ್ಯೋಗ ನೇರ ಸಾಲ ಯೋಜನೆಯಡಿ 40 ಹಾಗೂ ಸ್ವಾವಲಂಬಿ ಸಾರಥಿ ಯೋಜನೆಯಡಿ 25 ಜನರು ಸೇರಿದಂತೆ ಒಟ್ಟು 152 ಫಲಾನುಭವಿಗಳು ಈ ಯೋಜನೆ ವ್ಯಾಪ್ತಿಗೆ ಸೇರಿದ್ದಾರೆ. ಫಲಾನುಭವಿಗಳು ಯೋಜನೆಯನ್ನು ಸದ್ಬಳಕೆ ಮಾಡಿಕೊಂಡು ಬದುಕು ಕಟ್ಟಿಕೊಳ್ಳಬೇಕು ಎಂದರು.
ಗಂಗಾ ಕಲ್ಯಾಣ ಯೋಜನೆಯಡಿ ಬೋರ್ ವೆಲ್ ಕೊರೆಸಲಾಗಿರುವ ಫಲಾನುಭವಿ ರೈತರು ತಮ್ಮ ಜಮೀನಿನಲ್ಲಿ ಬೆಳೆ ಹೆಚ್ಚಾಗಿ ಬೆಳೆಯಲಿ. ಸ್ವಯಂ ಉದ್ಯೋಗ ನೇರ ಸಾಲ ಯೋಜನೆ ಹಾಗೂ ಸ್ವಾವಲಂಬಿ ಯೋಜನೆಯಡಿಯ ಫಲಾನುಭವಿಗಳು ಸ್ವಯಂ ಉದ್ಯೋಗ ಕಂಡುಕೊಳ್ಳಬೇಕು ಎಂದರು.ರೈತ ನಾಯಕ ಪ್ರೊ.ಎಂ.ಡಿ.ನಂಜುಂಡಸ್ವಾಮಿ ಅವರು ಈ ಯೋಜನೆ ಹುಟ್ಟುಹಾಕಿದ್ದು, ತಳಮಟ್ಟದ ಜನರ ಸಮಸ್ಯೆ ನಿವಾರಣೆಗೆ ಈ ಯೋಜನೆ ಸಹಕಾರಿಯಾಗಿದೆ. ಈ ಯೋಜನೆಗೆ ಬೇಡಿಕೆ ಹೆಚ್ಚಾಗಿದೆ. ಸಾಕಷ್ಟು ಜನರು ಅರ್ಜಿ ಸಲ್ಲಿಸುತ್ತಾರೆ. ಆದರೆ, ಎಲ್ಲರಿಗೂ ಸೌಲಭ್ಯ ಒದಗಿಸಲು ಸಾಧ್ಯವಾಗುತ್ತಿಲ್ಲ. ಹೀಗಾಗಿ ಸರ್ಕಾರ ಈ ಯೋಜನೆಗಳಿಗೆ ಮತ್ತಷ್ಟು ಅನುದಾನ ಒದಗಿಸುವ ಮೂಲಕ ಜನರಿಗೆ ಅನುಕೂಲ ಮಾಡಿಕೊಡಬೇಕು ಎಂದರು.