ಕನ್ನಡಪ್ರಭ ವಾರ್ತೆ ಮದ್ದೂರು
ಮಂಡ್ಯದಲ್ಲಿ ಇಂಧನ ಇಲಾಖೆ ಅಧಿಕಾರಿಗಳ ಸಭೆಯಲ್ಲಿ ಪಾಲ್ಗೊಳ್ಳಲು ಹೆಲಿಕಾಪ್ಟರ್ ಮೂಲಕ ತಾಲೂಕಿನ ಗೆಜ್ಜಲಗೆರೆಗೆ ಆಗಮಿಸಿದ್ದ ಸಚಿವರು ಚೆಸ್ಕಾಂ ಅಧ್ಯಕ್ಷ ರಮೇಶ ಬಂಡಿಸಿದ್ದೇಗೌಡ, ವಿಧಾನ ಪರಿಷತ್ ಸದಸ್ಯ ದಿನೇಶ್ ಗೂಳಿಗೌಡ ಹಾಗೂ ಜಿಲ್ಲಾಡಳಿತದಿಂದ ಅಭಿನಂದನೆ ಸ್ವೀಕರಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದರು.
ಕುಸುಮ್ ಯೋಜನೆ ಜೊತೆಗೆ ರೈತರ ಪಂಪ್ ಸೆಟ್‌ಗಳಿಗೆ ಸೌರಶಕ್ತಿಯ ವಿದ್ಯುತ್ ಸರಬರಾಜು ಮಾಡುವ ಕುಸುಮ್ ಸಿ ಯೋಜನೆ ಅನುಷ್ಠಾನಗೊಳಿಸಲಾಗುತ್ತಿದೆ. ಮೊದಲ ಅಂತದ ಯೋಜನೆ ಪ್ರಗತಿಯಲ್ಲಿದ್ದು, ಎರಡನೇ ಹಂತದಲ್ಲಿ ಫೀಡರ್ ಮಟ್ಟದ ಸೌರೀಕರಣ ಮೂಲಕ 1200 ಮೆಗಾ ವ್ಯಾಟ್ ವಿದ್ಯುತ್ ಉತ್ಪಾದಿಸಿ ರೈತರಿಗೆ ನೀಡಲು ನಿರ್ಧರಿಸಲಾಗಿದೆ ಎಂದರು.ಈ ಎರಡು ಯೋಜನೆಗಳನ್ನು ತ್ವರಿತವಾಗಿ ಪೂರ್ಣಗೊಳಿಸಿದರೆ ರಾಜ್ಯದಲ್ಲಿ ವಿದ್ಯುತ್ ಸಮಸ್ಯೆ ಸಾಕಷ್ಟು ಬಗೆಹರಿಯುತ್ತದೆ. ಯೋಜನೆಯನ್ನು ಅನುಷ್ಠಾನಗೊಳಿಸಲು ಇಲಾಖೆ ಅಧಿಕಾರಿಗಳು ಮತ್ತು ಸಿಬ್ಬಂದಿ ಹೆಚ್ಚು ಆದ್ಯತೆ ನೀಡುವಂತೆ ಸೂಚಿಸಲಾಗಿದೆ ಎಂದರು.
ಅವಘಡಗಳಲ್ಲಿ ಗಾಯಗೊಂಡ ಇಲಾಖೆ ಸಿಬ್ಬಂದಿಗೆ 5 ಲಕ್ಷ ರು.ವರೆಗಿನ ನಗದು ರಹಿತ ವೈದ್ಯಕೀಯ ಚಿಕಿತ್ಸಾ ಸೌಲಭ್ಯವನ್ನು ಎಲ್ಲಾ ವಿದ್ಯುತ್ ಸರಬರಾಜು ಕಂಪನಿಗಳಲ್ಲಿ ಅನುಷ್ಠಾನಗೊಳಿಸುವಂತೆ ಕೆಪಿಟಿಸಿಎಲ್‌ನ ವ್ಯವಸ್ಥಾಪಕ ನಿರ್ದೇಶಕರಿಗೆ ಸೂಚಿಸಲಾಗಿದೆ ಎಂದು ಸ್ಪಷ್ಟಪಡಿಸಿದರು.