ಕನ್ನಡಪ್ರಭ ವಾರ್ತೆ ದೊಡ್ಡಬಳ್ಳಾಪುರ
ನಂತರ ಮಾತನಾಡಿದ ಅವರು, ನೆಲಮಂಗಲ ತಾಲೂಕಿನಲ್ಲಿ ಗೃಹ ಬಳಕೆಗೆ, ಕೃಷಿಗೆ ಹಾಗೂ ಕೈಗಾರಿಕೆಗಳಿಗೆ ಸಮರ್ಪಕ ವಿದ್ಯುತ್ ಪೂರೈಕೆ ಇಲ್ಲದೆ ಸಮಸ್ಯೆ ಎದುರಾಗಿತ್ತು. ನೆಲಮಂಗಲ ತಾಲೂಕಿನ ಜನತೆಯ ಬಹುದಿನಗಳ ಬೇಡಿಕೆಯು ಇದಾಗಿದ್ದು, ಇದನ್ನು ಬಗೆಹರಿಸಲು ಸುಗಮ ವಿದ್ಯುತ್ ಪೂರೈಕೆಗಾಗಿ 220 ಕೆವಿ ವಿದ್ಯುತ್ ಸ್ಥಾವರವನ್ನು ನಿರ್ಮಾಣ ಮಾಡಲು ಗುದ್ದಲಿಪೂಜೆ ನೆರವೇರಿಸಲಾಗಿದೆ. ಅದಕ್ಕಾಗಿ ಫೀಡರ್ ಗಳು, ಟ್ರಾನ್ಸ್ ಫಾರ್ಮರ್ ಗಳನ್ನು ನೀಡಲಾಗುತ್ತಿದೆ. ಫೀಡರ್ ಮಟ್ಟದ ಸೌರೀಕರಣದ ಮೂಲಕ ರೈತ ಕೃಷಿ ಪಂಪ್ ಸೆಟ್ ಗಳಿಗೆ ವಿದ್ಯುತ್ ಪೂರೈಸಲು ಕುಸುಮ್- ಸಿ ಯೋಜನೆಯನ್ನು ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿಯೂ ಅನುಷ್ಠಾನಗೊಳಿಸಲಾಗುತ್ತಿದೆ ಎಂದರು.
ಕೃಷಿ ಪಂಪ್ ಸೆಟ್‌ಗಳಿಗೆ ಸಂಬಂಧಿಸಿದ ವಿದ್ಯುತ್ ಸಮಸ್ಯೆಗಳನ್ನು ಪರಿಹರಿಸಲು, ಸರ್ಕಾರ ರೈತರಿಗೆ ಸೌರಶಕ್ತಿ ಚಾಲಿತ ಪಂಪ್ ಸೆಟ್‌ಗಳನ್ನು ಒದಗಿಸುವ ಕುಸುಮ್-ಬಿ ಯೋಜನೆಗೆ ಆದ್ಯತೆ ನೀಡುತ್ತಿದೆ. ರಾಜ್ಯ ಸರ್ಕಾರ ತನ್ನ ಸಬ್ಸಿಡಿ ಪಾಲನ್ನು ಶೇಕಡಾ 50ಕ್ಕೆ ಹೆಚ್ಚಿಸಿದೆ. ಆದರೆ ಕೇಂದ್ರ ಸರ್ಕಾರವು ಶೇಕಡಾ 30 ರಷ್ಟು ಸಬ್ಸಿಡಿ ನೀಡುತ್ತದೆ. ರೈತರು ಸೌರ ಪಂಪ್ ಸೆಟ್ ಪಡೆಯಲು ವೆಚ್ಚದ ಶೇಕಡಾ 20 ರಷ್ಟು ಮಾತ್ರ ಪಾವತಿಸಬೇಕಾಗುತ್ತದೆ. ಈ ಯೋಜನೆಯು ರೈತರಿಗೆ ಗಮನಾರ್ಹವಾಗಿ ಪ್ರಯೋಜನವನ್ನು ನೀಡುತ್ತದೆ ಎಂದು ಹೇಳಿದರು.ರಾಜ್ಯಾದ್ಯಂತ ಮುಂದಿನ ಆರ್ಥಿಕ ವರ್ಷದಲ್ಲಿ 100 ವಿದ್ಯುತ್ ಉಪಕೇಂದ್ರಗಳನ್ನು ಸ್ಥಾಪಿಸುವ ಗುರಿ ಇದೆ ಎಂದು ಹೇಳಿದರು.
ವಿಧಾನಪರಿಷತ್ ಸದಸ್ಯ ಎಸ್. ರವಿ ಮಾತನಾಡಿ, ಕೈಗಾರಿಕಾ ಮತ್ತು ವಾಣಿಜ್ಯ ಸ್ಥಾವರಗಳು ಹೊಸದಾಗಿ ಸ್ಥಾಪನೆಗೊಳ್ಳುತ್ತಿದ್ದು, ವಿದ್ಯುತ್ ಹೊರೆಯು ದಿನೇ ದಿನೇ ಹೆಚ್ಚಾಗುತ್ತಿದ್ದು, ಇದು ವಿದ್ಯುತ್ ಪೂರೈಸಲು ಸಹಕಾರಿಯಾಗಲಿದೆ ಎಂದರು.