ಈಶಾನ್ಯ ಭಾರತದ ರಾಜ್ಯಗಳ ಅಭಿವೃದ್ಧಿಗೆ ಕಚಿ ಬದ್ಧ- ಎಬಿವಿಪಿ ಹಮ್ಮಿಕೊಂಡಿದ್ದ ರಾಷ್ಟ್ರೀಯ ಏಕಾತ್ಮಕಾ ಯಾತ್ರೆಯಲ್ಲಿ ಹೇಳಿಕೆ

KannadaprabhaNewsNetwork |  
Published : Feb 09, 2025, 01:15 AM IST
20 | Kannada Prabha

ಸಾರಾಂಶ

ಈಶಾನ್ಯ ಭಾರತದ ರಾಜ್ಯಗಳ ಅಭಿವೃದ್ಧಿಗೆ ನರೇಂದ್ರ ಮೋದಿ ಅವರ ಸರ್ಕಾರ ಕಟಿಬದ್ಧವಾಗಿ ದುಡಿಯುತ್ತಿದೆ

ಫೋಟೋ- 8ಎಂವೈಎಸ್‌ 20- ಮೈಸೂರಿನಲ್ಲಿ ಶನಿವಾರ ನಡೆದ ಅಖಿಲ ಭಾರತ ವಿದ್ಯಾರ್ಥಿ ಪರಿಷತ್ (ಎಬಿವಿಪಿ) ರಾಷ್ಟ್ರೀಯ ಏಕಾತ್ಮಕಾ ಯಾತ್ರೆ ಅಂಗವಾಗಿ ಹಮ್ಮಿಕೊಂಡಿದ್ದ ನಾಗರಿಕ ಸ್ವಾಗತ ಕಾರ್ಯಕ್ರಮದಲ್ಲಿ ಕೇಂದ್ರ ಸಚಿವ ಎಚ್‌.ಡಿ. ಕುಮಾರಸ್ವಾಮಿ ಪಾಲ್ಗೊಂಡಿದ್ದರು.---ಕನ್ನಡಪ್ರಭ ವಾರ್ತೆ ಮೈಸೂರುಈಶಾನ್ಯ ಭಾರತದ ರಾಜ್ಯಗಳ ಅಭಿವೃದ್ಧಿಗೆ ನರೇಂದ್ರ ಮೋದಿ ಅವರ ಸರ್ಕಾರ ಕಟಿಬದ್ಧವಾಗಿ ದುಡಿಯುತ್ತಿದೆ ಎಂದು ಹೇಳಿದ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರು, ಕಳೆದ ಹತ್ತು ವರ್ಷಗಳಲ್ಲಿ ಈ ರಾಜ್ಯಗಳ ಶ್ರೇಯೋವೃದ್ಧಿಗೆ ಸುಮಾರು 5 ಲಕ್ಷ ಕೋಟಿಗೂ ಅಧಿಕ ಮೊತ್ತದ ಅಭಿವೃದ್ಧಿ ಯೋಜನೆ ಹಮ್ಮಿಕೊಂಡಿದೆ ಎಂದರು.ನಗರದಲ್ಲಿ ಅಖಿಲ ಭಾರತ ವಿದ್ಯಾರ್ಥಿ ಪರಿಷತ್ (ಎಬಿವಿಪಿ) ರಾಷ್ಟ್ರೀಯ ಏಕಾತ್ಮಕಾ ಯಾತ್ರೆ ಅಂಗವಾಗಿ ಹಮ್ಮಿಕೊಂಡಿದ್ದ ನಾಗರಿಕ ಸ್ವಾಗತ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.ಪೂರ್ವದತ್ತ ನೋಡಿ ನೀತಿ ಅಡಿ ಮೋದಿ ಅವರು ಈಶಾನ್ಯ ರಾಜ್ಯಗಳಾದ ಅಸ್ಸಾಂ, ಅರುಣಾಚಲ ಪ್ರದೇಶ, ಮೇಘಾಲಯ, ಮಣಿಪುರ, ನಾಗಲ್ಯಾಂಡ್, ಸಿಕ್ಕಿಂ, ತ್ರಿಪುರ ಅಭಿವೃದ್ಧಿಗೆ ಕಳೆದ ಎಪ್ಪತ್ತು ವರ್ಷಗಳಲ್ಲಿ ಕಂಡೂ ಕೇಳರಿಯದಷ್ಟು ಅಭಿವೃದ್ಧಿಗೆ ಒತ್ತು ಕೊಡುತ್ತಿದ್ದಾರೆ ಎಂದರು.ತಮ್ಮ ಸಂಪುಟದ ಸಚಿವರಿಗೆ ಆದೇಶ ನೀಡಿರುವ ಮೋದಿ ಅವರು, ಈಶಾನ್ಯ ರಾಜ್ಯಗಳಲ್ಲಿ ಅನುಷ್ಠಾನ ಆಗುತ್ತಿರುವ ಕಾರ್ಯಕ್ರಮಗಳನ್ನು ಅತ್ಯಂತ ಗಮನವಿಟ್ಟು ಪರಿಶೀಲಿಸಬೇಕು. ಅದರಂತೆ ನಾನೂ ಕಳೆದ ವರ್ಷ ನಾಲ್ಕು ದಿನಗಳ ಕಾಲ ನಾಗಲ್ಯಾಂಡ್, ಅಸ್ಸಾಂ, ಅರುಣಾಚಲ ಪ್ರದೇಶ ಮತ್ತು ಮೇಘಾಲಯ ರಾಜ್ಯಗಳಿಗೆ ಭೇಟಿ ನೀಡಿದ್ದೆ. ಅಲ್ಲಿ ಬೃಹತ್ ಕೈಗಾರಿಕೆ ಸಚಿವಾಲಯದ ಅಧೀನದಲ್ಲಿರುವ ಕೈಗಾರಿಕೆಗಳ ಪ್ರಗತಿ ಪರಿಶೀಲನೆ ನಡೆಸುವುದರ ಜತೆಗೆ ಅಧಿಕಾರಿಗಳ ಜತೆ ಪ್ರಗತಿ ಪರಿಶೀಲನಾ ಸಭೆ ನಡೆಸಿದೆ ಎಂದು ಅವರು ತಿಳಿಸಿದರು. ಈಶಾನ್ಯ ರಾಜ್ಯಗಳಿಗೆ ದೇವೆಗೌಡರ ಕೊಡುಗೆ ಸ್ಮರಣೆ1996ರಲ್ಲಿ ದೇವೇಗೌಡರು ಪ್ರಧಾನಿಯಾಗಿ ಈಶಾನ್ಯ ಭಾಗದ ಎಲ್ಲಾ ರಾಜ್ಯಗಳಿಗೆ ಭೇಟಿ ನೀಡಿದ ವೇಳೆ ಸ್ಮರಿಸಿದ ಅವರು, ಆಗ ಅಷ್ಟೂ ರಾಜ್ಯಗಳು ಬಹಳ ಹಿಂದುಳಿದಿದ್ದವು. ಅದಕ್ಕೂ ಹಿಂದಿನ ಸರ್ಕಾರಗಳು ಈಶಾನ್ಯ ರಾಜ್ಯಗಳನ್ನು ಕಡೆಗಣಿಸಿದ್ದವು. ಈ ಕಾರಣದಿಂದ ಆರು ದಿನಗಳ ಕಾಲ ಆ ರಾಜ್ಯಗಳಲ್ಲಿ ನಿರಂತರ ಪ್ರವಾಸ ಕೈಗೊಂಡಿದ್ದ ದೇವೇಗೌಡರು, ಅಂತಿಮವಾಗಿ ₹ 7,503.51 ಕೋಟಿಗಳಷ್ಟು ಬೃಹತ್ ಪ್ಯಾಕೇಜ್ ಘೋಷಿಸಿದರು. ಕೂಡಲೇ ₹ 6,100 ಕೋಟಿಯಷ್ಟು ಹಣವನ್ನು ಬಿಡುಗಡೆ ಮಾಡಿದರು. ಈಶಾನ್ಯ ರಾಜ್ಯಗಳಲ್ಲಿ ಅಭಿವೃದ್ಧಿ ಶಖೆ ಶುರುವಾಗಿದ್ದೇ ಆಗ ಎಂದು ಅವರು ಹೇಳಿದರು.ರಾಷ್ಟ್ರೀಯ ಏಕಾತ್ಮಕಾ ಯಾತ್ರೆ ಅಂಗವಾಗಿ ಅಖಿಲ ಭಾರತ ವಿದ್ಯಾರ್ಥಿ ಪರಿಷತ್ ಹಮ್ಮಿಕೊಂಡಿರುವ ನಾಗರಿಕ ಸ್ವಾಗತ ಕಾರ್ಯಕ್ರಮದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿ, ಏಕ ಭಾರತ ಪರಿಕಲ್ಪನೆ ಅಡಿಯಲ್ಲಿ ಇಡೀ ದೇಶವನ್ನು ಒಗ್ಗಟ್ಟಾಗಿದಲು ಇದೊಂದು ಅತ್ಯುತ್ತಮ ಕಾರ್ಯಕ್ರಮ. ಇದಕ್ಕಾಗಿ ನಾನು ಎಬಿವಿಪಿ ಸಂಘಟಕರನ್ನು ಅಭಿನಂದಿಸುತ್ತೇನೆ ಎಂದರು.ಭಾರತ ವಿವಿಧತೆಯಲ್ಲಿ ಏಕತೆಯನ್ನು ಅಂತರ್ಗತ ಮಾಡಿಕೊಂಡಿರುವ ಅನನ್ಯ ರಾಷ್ಟ್ರ. ಈಶಾನ್ಯದಲ್ಲಿಯೇ ಅನೇಕ ಬುಡಕಟ್ಟುಗಳು, ಅನೇಕ ಭಾಷೆಗಳು, ಅನೇಕ ಸಂಸ್ಕೃತಿ, ಆಚಾರ ವಿಚಾರಗಳು ಅಡಗಿವೆ. ಅವರೆಲ್ಲರೂ ಒಬ್ಬರನ್ನು ಒಬ್ಬರು ಗೌರವಿಸಿಕೊಂಡು ಸೌಹಾರ್ಧಯುತವಾಗಿ ಜೀವನ ನಡೆಸುತ್ತಿದ್ದಾರೆ. ಭಾರತದ ಶ್ರೇಷ್ಠತೆ ಅಡಗಿವುದೇ ಇಲ್ಲಿ ಎಂದು ಅವರು ಹೇಳಿದರು.ಸಂಸದ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್‌ ಮಾತನಾಡಿದರು.ಕಾಂಬೋಡಿಯ ದೇಶದ ಕಾನ್ಸುಲ್ ಜನರಲ್ ಕಾರ್ತಿಕ್ ತಲ್ಲಂ, ಎಬಿವಿಪಿ ಅಖಿಲ ಭಾರತ ಉಪಾಧ್ಯಕ್ಷ ಪ್ರೊ. ಮಂದ್ರಾ ಭಾನುಶೇರ್, ಎಬಿವಿಪಿಯ ಮಿಜೋರಂ, ಮೇಘಾಲಯ, ನಾಗಲ್ಯಾಂಡ್ ನ ಸಂಘಟನಾ ಕಾರ್ಯದರ್ಶಿ ಮಂಜುನಾಥ ಮಂಗಳಗಿ, ವಿದ್ಯಾರ್ಥಿಗಳ ಪ್ರವಾಸದ ಉಸ್ತುವಾರಿಯಾಗಿರುವ ಡಾ. ಲಿಖಿತಾ ಗೌಡ, ಜಂಟಿ ಉಸ್ತುವಾರಿ ಆಗಿರುವ ಪ್ರಜ್ವಲ್, ಕಾರ್ಯಕ್ರಮದ ಸ್ವಾಗತ ಸಮಿತಿ ಅಧ್ಯಕ್ಷ ವಿಶ್ವಪ್ರಸಾದ್ ಆಳ್ವಾ, ಉಪಾಧ್ಯಕ್ಷ ಪ್ರೊ. ಎಂ.ಆರ್. ಗಂಗಾಧರ್, ಸ್ವಾಗತ ಸಮಿತಿ ಪ್ರಧಾನ ಕಾರ್ಯದರ್ಶಿ ಡಾ. ಚಂದ್ರಶೇಖರ್ ಸೇರಿದಂತೆ ಈಶಾನ್ಯ ಭಾಗದ ಏಳೂ ರಾಜ್ಯಗಳಿಂದ ಆಗಮಿಸಿದ್ದ 216ಕ್ಕೂ ಹೆಚ್ಚು ವಿದ್ಯಾರ್ಥಿಗಳು ಭಾಗವಹಿಸಿದ್ದರು. ವಿಶೇಷ ಗಮನ ಸೆಳೆದ ಈಶಾನ್ಯ ಸಂಸ್ಕೃತಿಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ಈಶಾನ್ಯ ರಾಜ್ಯಗಳ ವಿದ್ಯಾರ್ಥಿಗಳು ಧರಿಸಿದ್ದ ಧಿರಿಸು, ಉಡುಪುಗಳು ಎಲ್ಲರ ಗಮನವನ್ನು ವಿಶೇಷವಾಗಿ ಸೆಳೆದವು. ಮುಖ್ಯವಾಗಿ ಸಚಿವ ಕುಮಾರಸ್ವಾಮಿ ಅವರು, ಆ ವಿದ್ಯಾರ್ಥಿಗಳನ್ನು ವಿಚಾರಿಸಿದರು. ಅವರ ವಿದ್ಯಾಭ್ಯಾಸ, ಕರ್ನಾಟಕದ ಕುರಿತ ಅವರ ಭಾವನೆಗಳ ಬಗ್ಗೆ ಸಚಿವರು ಕೇಳಿ ತಿಳಿದುಕೊಂಡರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಬೆಂಬಲ ಬೆಲೆಯಡಿ ರಾಗಿ ಖರೀದಿಗೆ ಚುರುಕು
ಸಾಕ್ಷಿಗಳಿಗೆ ಬೆದರಿಕೆ ಬಂದರೆ ‘ಹೊಸ ಬಾಗಿಲು’!