ಕನ್ನಡಪ್ರಭ ವಾರ್ತೆ ಮಳವಳ್ಳಿ
ತಾಲೂಕಿನ ಹಲವು ಗ್ರಾಮಗಳಲ್ಲಿ ₹7.98 ಕೋಟಿ ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಭೂಮಿಪೂಜೆ ನೆರವೇರಿಸಿ ಮಾತನಾಡಿ, ಪಕ್ಷ ನೀಡಿದ ಜವಾಬ್ದಾರಿಯಿಂದ ಸಚಿವನಾಗಿ ಕೆಲಸ ಮಾಡುವ ಅವಕಾಶ ಸಿಕ್ಕಿದೆ. ಈ ಹಿಂದೆ ಶಾಸಕನಾಗಿ ಗ್ರಾಮೀಣ ಭಾಗದ ಅಭಿವೃದ್ಧಿಗೆ ಸಾಕಷ್ಟು ಅನುದಾನ ತಂದು ಕೆಲಸ ಮಾಡಿರುವುದಾಗಿ ಹೇಳಿದರು.
ಕಳೆದ ಮೂರು ವರ್ಷಗಳಿಂದ ನಿರಂತರವಾಗಿ ಶಿಕ್ಷಣ, ಆರೋಗ್ಯ, ನೀರಾವರಿ ಸೇರಿದಂತೆ ಎಲ್ಲ ಕ್ಷೇತ್ರಗಳ ಅಭಿವೃದ್ಧಿ ಸಾವಿರಾರು ಕೋಟಿ ರು. ಅನುದಾನ ಬಿಡುಗಡೆಗೊಳಿಸಲಾಗಿದೆ. ಶೈಕ್ಷಣಿಕ ಕ್ಷೇತ್ರ ಹೊಸ ಅಲೆ ಸೃಷ್ಟಿಸುವ ಕೆಲಸ ನಡೆಯುತ್ತಿದೆ. ಜನರ ಆಶೋತ್ತರಗಳಿಗೆ ಸ್ಪಂದಿಸುವ ನಿಟ್ಟಿನಲ್ಲಿ ಎಲ್ಲರೂ ಕಾರ್ಯಪ್ರವೃತ್ತರಾಗಬೇಕು ಎಂದರು.ಮುಂದಿನ ದಿನಗಳಲ್ಲಿ ಮತ್ತಷ್ಟು ಪ್ರಗತಿಯತ್ತ ಮಳವಳ್ಳಿಯನ್ನು ತೆಗೆದುಕೊಂಡು ಹೋಗುವ ಪ್ರಯತ್ನ ಮಾಡಲಾಗುವುದು. ಅಧಿಕಾರಿಗಳು ಸರ್ಕಾರಿ ಸವಲತ್ತುಗಳನ್ನು ಜನರಿಗೆ ಸಮರ್ಪಕವಾಗಿ ತಲುಪಿಸುವ ಕೆಲಸ ಮಾಡಬೇಕು ಎಂದು ಸೂಚಿಸಿದರು.
ಈ ವೇಳೆ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಜಿಲ್ಲಾ ಅಧ್ಯಕ್ಷ ಚಿಕ್ಕಲಿಂಗಯ್ಯ, ಜಿಪಂ ಮಾಜಿ ಅಧ್ಯಕ್ಷ ರಾಮಚಂದ್ರು, ಮನ್ಮುಲ್ ನಿರ್ದೇಶಕ ಡಿ.ಕೃಷ್ಣೇಗೌಡ, ಮಾಜಿ ನಿರ್ದೇಶಕ ಆರ್.ಎನ್.ವಿಶ್ವಾಸ್, ಟಿಎಪಿಸಿಎಂಎಸ್ ನಿರ್ದೇಶಕರಾದ ಕೆ.ಜೆ.ದೇವರಾಜು, ಬಿ.ಪುಟ್ಟಬಸವಯ್ಯ, ದಿಲೀಪ್ ಕುಮಾರ್(ವಿಶ್ವ) , ತಾಪಂ ಮಾಜಿ ಉಪಾಧ್ಯಕ್ಷ ಸಿ.ಮಾಧು, ಗ್ರಾಪಂ ಮಾಜಿ ಉಪಾಧ್ಯಕ್ಷ ಮಾದೇಗೌಡ, ಬಂಡೂರು ಸಹಕಾರ ಸಂಘದ ಅಧ್ಯಕ್ಷ ಓಂ ಪ್ರಕಾಶ್, ಮುಖಂಡರಾದ ಅಜ್ಮತ್, ಮಹದೇವು, ಮಹೇಶ್, ಶಾಂತರಾಜು, ಶಿವಮೂರ್ತಿ, ಎಂ.ಡಿ.ಸಂತೋಷ್ ಕುಮಾರ್ ಪಾಲ್ಗೊಂಡಿದ್ದರು.