ಮಹಿಳಾ ಸಬಲೀಕರಣಕ್ಕೆ ಕಾರ್ಯಕ್ರಮಗಳ ಅನುಷ್ಠಾನ ಅವಶ್ಯಕ: ಡಾ.ಸ್ಮಿತಾ ರಾಜೇಶ್

KannadaprabhaNewsNetwork |  
Published : Oct 26, 2026, 01:45 AM IST
25ಕೆಎಂಎನ್ ಡಿ23 | Kannada Prabha

ಸಾರಾಂಶ

ಧರ್ಮದರ್ಶಿ ಡಾ.ವೀರೇಂದ್ರ ಹೆಗ್ಗಡೆ ಅವರು ತಮ್ಮ ದೂರ ದೃಷ್ಟಿ ಯೋಜನೆಗಳನ್ನು ಜಾರಿಗೆ ತಂದು ಎಲ್ಲ ಮಹಿಳೆಯರು ಸೇರಿದಂತೆ ಎಲ್ಲಾ ವರ್ಗದ ಜನರ ಅಭ್ಯುದಯ ಬಯಸುತ್ತಿದ್ದಾರೆ. ಮಹಿಳೆಯರು ಶ್ರೀಕ್ಷೇತ್ರದ ಯೋಜನೆಗಳನ್ನು ಪ್ರಯೋಜನ ಪಡೆದುಕೊಂಡು ಆರ್ಥಿಕವಾಗಿ ಸದೃಢರಾಗುವ ಮೂಲಕ ಸ್ವಸ್ಥ ಸಮಾಜ ನಿರ್ಮಾಣಕ್ಕೆ ಸಹಕರಿಸಬೇಕು.

ಕನ್ನಡಪ್ರಭ ವಾರ್ತೆ ಮದ್ದೂರು

ಸ್ವಾವಲಂಬಿ ಜೀವನ ನಿರ್ವಹಣೆಗಾಗಿ ಮಹಿಳಾ ಸಬಲೀಕರಣ ಕಾರ್ಯಕ್ರಮ ಸಮರ್ಪಕ ಅನುಷ್ಠಾನ ಅವಶ್ಯಕ ಎಂದು ಎಚ್.ಕೆ.ವೀರಣ್ಣಗೌಡ ಪದವಿ ಪೂರ್ವ ಕಾಲೇಜಿನ ಸಹಾಯಕ ಪ್ರಾಧ್ಯಾಪಕಿ ಡಾ.ಸ್ಮಿತಾ ರಾಜೇಶ್ ಹೇಳಿದರು.

ತಾಲೂಕಿನ ಹೆಮ್ಮನ ಹಳ್ಳಿಯ ಶ್ರೀ ಚೌಡೇಶ್ವರಿ ಸಮುದಾಯ ಭವನದಲ್ಲಿ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮ ಅಭಿವೃದ್ಧಿ ಯೋಜನೆಯಡಿ ನಡೆದ ತಾಲೂಕು ಮಟ್ಟದ ಮಹಿಳಾ ವಿಚಾರ ಗೋಷ್ಠಿಯಲ್ಲಿ ಉಪನ್ಯಾಸ ನೀಡಿದರು.

ಮಹಿಳೆಯರು ಇಂದು ಎಲ್ಲಾ ಕ್ಷೇತ್ರಗಳಲ್ಲಿ ತಮ್ಮನ್ನು ತಾವು ಗುರುತಿಸಿಕೊಳ್ಳುವ ಮೂಲಕ ಪುರುಷರಿಗೆ ಸರಿ ಸಮಾನರಾಗಿ ಬೆಳೆಯುತ್ತಿದ್ದಾರೆ. ಶ್ರೀಕ್ಷೇತ್ರ ಧರ್ಮಸ್ಥಳ ಸಂಘವು ಮಹಿಳೆಯರಿಗೆ ಆರ್ಥಿಕ ಶಕ್ತಿ ತುಂಬುವುದರ ಜೊತೆಗೆ ಅವರಲ್ಲಿ ಶಿಸ್ತು ಮೂಡಿಸುವ ಕೆಲಸ ಮಾಡುತ್ತಿದೆ ಎಂದರು.

ಧರ್ಮದರ್ಶಿ ಡಾ.ವೀರೇಂದ್ರ ಹೆಗ್ಗಡೆ ಅವರು ತಮ್ಮ ದೂರ ದೃಷ್ಟಿ ಯೋಜನೆಗಳನ್ನು ಜಾರಿಗೆ ತಂದು ಎಲ್ಲ ಮಹಿಳೆಯರು ಸೇರಿದಂತೆ ಎಲ್ಲಾ ವರ್ಗದ ಜನರ ಅಭ್ಯುದಯ ಬಯಸುತ್ತಿದ್ದಾರೆ. ಮಹಿಳೆಯರು ಶ್ರೀಕ್ಷೇತ್ರದ ಯೋಜನೆಗಳನ್ನು ಪ್ರಯೋಜನ ಪಡೆದುಕೊಂಡು ಆರ್ಥಿಕವಾಗಿ ಸದೃಢರಾಗುವ ಮೂಲಕ ಸ್ವಸ್ಥ ಸಮಾಜ ನಿರ್ಮಾಣಕ್ಕೆ ಸಹಕರಿಸಬೇಕು ಎಂದರು.

ಮಂಡ್ಯ ಜಿಲ್ಲಾ ಸ್ತ್ರೀ ಶಕ್ತಿ ಒಕ್ಕೂಟದ ಅಧ್ಯಕ್ಷೆ ಲಕ್ಷ್ಮಿ ಚನ್ನರಾಜು ಮಾತನಾಡಿ, ಪುರುಷ ಪ್ರಧಾನವಾದ ಸಮಾಜದಲ್ಲಿ ಮಹಿಳೆಯರು ಕೇವಲ ಅಡುಗೆ ಮನೆಗೆ ಮಾತ್ರ ಸೀಮಿತವಾಗದೆ ಶಿಕ್ಷಣದ ಮೂಲಕ ಮುಂಚೂಣಿಗೆ ಬರಬೇಕು. ಇದರಿಂದ ಮಹಿಳೆಯರ ಸಬಲೀಕರಣ ಶಕ್ತಿ ಹೆಚ್ಚಾಗಲಿದೆ ಎಂದರು.

ಧರ್ಮಸ್ಥಳ ಸಂಸ್ಥೆ ಮೈಸೂರು ವಿಭಾಗದ ಪ್ರಾದೇಶಿಕ ನಿರ್ದೇಶಕ ಎಂ.ಯೋಗೇಶ್ ಮಾತನಾಡಿ, ಧರ್ಮಾಧಿಕಾರಿ ಶ್ರೀ ವೀರೇಂದ್ರ ಹೆಗ್ಗಡೆಯವರ ಧರ್ಮಪತ್ನಿ ಹೇಮಾವತಿ ಅವರ ಮಹಿಳಾ ಸಬಲೀಕರಣ ಗೊಳಿಸುವ ನಿಟ್ಟಿನಲ್ಲಿ ಆರು ವಿಷಯಾಧಾರಿತ ವಿಷಯಗಳನ್ನು ಆಯ್ಕೆ ಮಾಡಿಕೊಂಡು ಪ್ರತಿ ತಿಂಗಳು ಸಂಪನ್ಮೂಲ ವ್ಯಕ್ತಿಗಳಿಂದ ಉಪನ್ಯಾಸ ಕೊಡಿಸುವ ಮೂಲಕ ಮಹಿಳೆಯರು ಸ್ವಾವಲಂಬನೆ ಬದುಕನ್ನು ಕಟ್ಟಿಕೊಂಡು ಕುಟುಂಬ ನಿರ್ವಹಣೆ ಮಾಡಲು ಜ್ಞಾನವಿಕಾಸ ಕಾರ್ಯಕ್ರಮಗಳು ಸಹಕಾರಿಯಾಗಿದೆ ಎಂದು ವಿವರಿಸಿದರು.

ಸಂಸ್ಥೆ ಜಿಲ್ಲಾ ನಿರ್ದೇಶಕಿ ಚೇತನ ಸಂಸ್ಥೆಯ ವತಿಯಿಂದ ಮಹಿಳೆಯರಿಗೆ ಸ್ವಉದ್ಯೋಗದ ಸೌಲಭ್ಯ, ಕೌಶಲ್ಯದ ತರಬೇತಿ ಕುರಿತು ಮಾಹಿತಿ ನೀಡಿದರು. ಸಂಸ್ಥೆ ತಾಲೂಕು ಯೋಜನಾಧಿಕಾರಿ ಹಾಲಪ್ಪ, ಯರಗನಹಳ್ಳಿ ಡೇರಿ ಮಾಜಿ ಅಧ್ಯಕ್ಷೆ ವೀಣಾ, ಜಿಲ್ಲಾ ಜನಜಾಗೃತಿ ವೇದಿಕೆ ನಿಕಟ ಪೂರ್ವ ಅಧ್ಯಕ್ಷ ಲಿಂಗೇಗೌಡ, ಜ್ಞಾನವಿಕಾಸ ಸಮನ್ವಯಾಧಿಕಾರಿ ಸೇರಿದಂತೆ ಹಲವರು ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಐಟಿ, ಬಿಟಿ ಕಂಪನಿಗಳಿಂದ ಕನ್ನಡ ಭಾಷೆಯ ಅರ್ಜಿ ತಿರಸ್ಕಾರಕ್ಕೆ ಕಿಡಿ
ಶಿಕ್ಷಣ ಕಾಶಿ ಜತೆ ದಾವಣಗೆರೆ ಈಗ ಸಾಹಿತ್ಯ ನಗರಿ!