ಕಾಂಗ್ರೆಸ್ ಸರ್ಕಾರದಿಂದ ಜನಪರ ಯೋಜನೆ ಅನುಷ್ಠಾನ

KannadaprabhaNewsNetwork | Published : Apr 6, 2024 12:51 AM

ಸಾರಾಂಶ

ಚಾಮರಾಜನಗರ ಲೋಕಸಭೆ ಕ್ಷೇತ್ರ ಚುನಾವಣೆ ಹಿನ್ನೆಲೆ ಚಾಮರಾಜನಗರ ತಾಲೂಕಿನ ಶಿವಪುರ ಹಾಗೂ ಹೆಗ್ಗೊಠಾರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗ್ರಾಮಗಳಲ್ಲಿ ಎಂಎಸ್‌ಐಎಲ್ ಅಧ್ಯಕ್ಷ, ಶಾಸಕ ಸಿ.ಪುಟ್ಟರಂಗಶೆಟ್ಟಿ ಚಾಮರಾಜನಗರ ತಾಲೂಕಿನ ಶಿವಪುರ ಗ್ರಾಮದ ಬಸವೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿ, ಚುನಾವಣಾ ಪ್ರಚಾರಕ್ಕೆ ಚಾಲನೆ ನೀಡಿದರು.

ಕನ್ನಡಪ್ರಭ ವಾರ್ತೆ ಚಾಮರಾಜನಗರ ಚಾಮರಾಜನಗರ ಲೋಕಸಭೆ ಕ್ಷೇತ್ರ ಚುನಾವಣೆ ಹಿನ್ನೆಲೆ ಚಾಮರಾಜನಗರ ತಾಲೂಕಿನ ಶಿವಪುರ ಹಾಗೂ ಹೆಗ್ಗೊಠಾರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗ್ರಾಮಗಳಲ್ಲಿ ಎಂಎಸ್‌ಐಎಲ್ ಅಧ್ಯಕ್ಷ, ಶಾಸಕ ಸಿ.ಪುಟ್ಟರಂಗಶೆಟ್ಟಿ ಚಾಮರಾಜನಗರ ತಾಲೂಕಿನ ಶಿವಪುರ ಗ್ರಾಮದ ಬಸವೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿ, ಚುನಾವಣಾ ಪ್ರಚಾರಕ್ಕೆ ಚಾಲನೆ ನೀಡಿದರು.

ಸಮೀಪದ ಯಡಪುರ, ಉತ್ತುವಳ್ಳಿ, ಮಲ್ಲಯ್ಯನಪುರ, ಕೆ.ಕೆ.ಹುಂಡಿ ಹಾಗೂ ಹೆಗ್ಗೋಠಾರ ಗ್ರಾಪಂ ಗ್ರಾಮಗಳಲ್ಲಿ ಮತಯಾಚನೆ ನಡೆಸಿದರು. ಇದೇ ವೇಳೆ ಅವರು ಮಾತನಾಡಿ, ಸಿದ್ದರಾಮಯ್ಯ ಎರಡು ಬಾರಿ ಮುಖ್ಯಮಂತ್ರಿಯಾಗಿ ಜಿಲ್ಲೆಗೆ ಅನೇಕ ಅಭಿವೃದ್ಧಿ ಕಾರ್ಯಕ್ರಮಗಳಿಗೆ ಅನುದಾನ ನೀಡಿದ್ದಾರೆ. ಸಚಿವರಾಗಿದ್ದ ಎಚ್.ಎಸ್.ಮಹದೇವಪ್ರಸಾದ್, ಲೋಕಸಭಾ ಸದಸ್ಯರಾಗಿದ್ದ ಆರ್. ಧ್ರುವನಾರಾಯಣ ಹಾಗೂ ನಾನು ಸೇರಿ ಜಿಲ್ಲೆ ಅಭಿವೃದ್ದಿಗೆ ಸಾಕಷ್ಟು ಕೆಲಸ ಮಾಡಿದ್ದೇವೆ. ಹಿಂದೆ ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದಾಗ ೧೬೭ ಭರವಸೆಗಳಲ್ಲಿ ೧೫೮ ಭರವಸೆ ಈಡೇರಿಸಿದ್ದಾರೆ. ಈ ಬಾರಿ ಐದು ಗ್ಯಾರಂಟಿಗಳನ್ನು ನೀಡಿ ಬಡವರ ಪರ ಕೆಲಸ ಮಾಡಿದ್ದಾರೆ ಎಂದು ತಿಳಿಸಿದರು.

ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಎರಡು ಬಾರಿ ಚಾಮರಾಜನಗರಕ್ಕೆ ಬಂದರೂ ಒಂದು ರೂಪಾಯಿ ಅನುದಾನ ಕೊಡಲಿಲ್ಲ, ಯಡಿಯೂರಪ್ಪ ಮುಖ್ಯಮಂತ್ರಿ ಆಗಿದ್ದಾಗ ಚಾಮರಾಜನಗರ ಶಾಪಗ್ರಸ್ಥ ಜಿಲ್ಲೆ ಎಂದು ಹೇಳಿ ಜಿಲ್ಲಾಕೇಂದ್ರಕ್ಕೆ ಬರುವ ಮನಸ್ಸು ಮಾಡಲಿಲ್ಲ. ಬಿಜೆಪಿ ಪಕ್ಷದಿಂದ ಜಿಲ್ಲೆಗೆ ಯಾವ ಕೊಡುಗೆ ದೊರೆತಿದೆ ಎಂಬುದನ್ನು ಮತದಾರರು ಅರ್ಥ ಮಾಡಿಕೊಳ್ಳಬೇಕು, ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಕೇವಲ ೯ ತಿಂಗಳಲ್ಲಿ ೫ ಗ್ಯಾರಂಟಿ ಗಳನ್ನು ಈಡೇರಿಸಿದೆ. ಹಾಗಾಗಿ ಮತದಾರರು ಕಾಂಗ್ರೆಸ್ ಅಭ್ಯರ್ಥಿ ಸುನಿಲ್ ಬೋಸ್ ಅವರನ್ನು ಹೆಚ್ಚಿನಮತಗಳ ಅಂತರದಿಂದ ಗೆಲ್ಲಿಸಬೇಕು ಎಂದು ಮನವಿ ಮಾಡಿದರು,ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಹಾಗೂ ಕಾಡಾ ಅಧ್ಯಕ್ಷ ಪಿ.ಮರಿಸ್ವಾಮಿ, ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ಬಿ.ಕೆ. ರವಿಕುಮಾರ್, ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಚಿಕ್ಕ ಮಹದೇವ್, ಆರ್.ಮಹದೇವ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಎ.ಎಸ್ ಗುರುಸ್ವಾಮಿ, ಮಹಮದ್ ಅಸ್ಗರ್. ಹಿಂದುಳಿದ ವರ್ಗಗಳ ರಾಜ್ಯ ಪ್ರಧಾನ ಕಾರ್ಯದರ್ಶಿ ಸಿ.ಎ. ಮಹದೇವಶೆಟ್ಟಿ, ಎಪಿಎಂಸಿ ಅಧ್ಯಕ್ಷ ಮಹದೇವಸ್ವಾಮಿ, ಕನಿಷ್ಠ ವೇತನ ಸಲಹಾ ಮಂಡಳಿ ಮಾಜಿ ಅಧ್ಯಕ್ಷ ಆರ್.ಉಮೇಶ್, ಮಾಜಿ ಅಧ್ಯಕ್ಷ ನಾಗೇಂದ್ರ, ಗ್ರಾಪಂ ಮಾಜಿ ಅಧ್ಯಕ್ಷ ಸ್ವಾಮಿ, ಶಿವಕುಮಾರ್, ಕಾಗಲವಾಡಿ ಚಂದ್ರು, ಬಿಸಲವಾಡಿ ರವಿ, ಶಂಭಪ್ಪ, ಎಸ್ಸಿ ವಿಭಾಗದ ಅಧ್ಯಕ್ಷ ಸೋಮಣ್ಣ, ರಾಮಸಮುದ್ರ ಶಿವಮೂರ್ತಿ, ಯಡಪುರ ಮಹದೇವಸ್ವಾಮಿ, ಕೋಡಿಮೋಳೆ ಪ್ರಕಾಶ್, ತಾಪಂ ಮಾಜಿ ಸದಸ್ಯ ಮಹದೇವಶೆಟ್ಟಿ, ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಶ್ರೀನಿವಾಸ್, ಪ್ರಭುಸ್ವಾಮಿ, ಮುತ್ತುರಾಜು, ಪ್ರಮೋದ್, ಶಾಂತಲಾ, ಕೆ.ಕೆ.ಹುಂಡಿ ನಾಗರಾಜು, ಮಹೇಂದ್ರ, ಸೇರಿದಂತೆ ಆಯಾ ಗ್ರಾಪಂ ಸದಸ್ಯರು ಪಕ್ಷದ ಮುಖಂಡರು ಕಾರ್ಯಕರ್ತರು ಹಾಜರಿದ್ದರು.

Share this article